ಸಿಂದಗಿ: ಕಟ್ಟಡ ಕಾರ್ಮಿಕರಲ್ಲಿ ಅತಿ ಹೆಚ್ಚು ಸಕ್ಕರೆ ಖಾಯಿಲೆ ಹಾಗೂ ರಕ್ತದೊತ್ತಡದಿಂದ ಬಳಲುತ್ತಿರುತ್ತಾರೆ ಆದರು ಕೂಡಾ ಅವರು ಎಲ್ಲಿ ಕೂಡಾ ತಪಾಸಣೆ ಮಾಡಿಕೊಂಡಿರುವುದಿಲ್ಲ ಎಂದು ಆರ್.ಕೆ ಆಸ್ಪತ್ರೆಯ ಆಡಳಿತಾಧಿಕಾರಿ ಅನೀಲಕುಮಾರ ರಾಠೋಡ ಹೇಳಿದರು.
ಪಟ್ಟಣದ ಸಂಗಮ ಸಂಸ್ಥೆಯಲ್ಲಿ ಸಂಗಮ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಟ್ಟಡ ಕಾರ್ಮಿಕರು ದಿನನಿತ್ಯ ದುಡಿಮೆ ಮಾಡಿ ಜೀವನ ಸಾಗಿಸುತ್ತಾರೆ. ಅವರಿಗೆ ಆಸ್ಪತ್ರೆಗೆ ಹೊಗಲು ನಿರ್ಲಕ್ಷ್ಯ ವಹಿಸುತ್ತಾರೆ. ಯಾವುದೇ ತಪಾಸಣೆ ಮಾಡಿಕ್ಕೊಳ್ಳುವುದಿಲ್ಲ. ಆದ್ದರಿಂದ ಪ್ರತಿಯೊಬ್ಬರು ಆರೋಗ್ಯವಾಗಿ ಇರಬೇಕು ಎಂಬ ಉದ್ದೇಶದಿಂದ ಕರ್ನಾಟಕ ಸರ್ಕಾರ ತಮ್ಮ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿದ್ದಾರೆ. ತಾವೆಲ್ಲರೂ ಈ ಉಚಿತ ಆರೋಗ್ಯ ತಪಾಸಣೆಯ ಸದುಪಯೋಗ ಪಡೆದುಕೊಂಡು ಆರೋಗ್ಯವಾಗಿರಿ ಎಂದರು.
ಈ ವೇಳೆ ಸಂಗಮ ಸಂಸ್ಥೆಯ ನಿರ್ದೇಶಕ ಫಾದರ್ ಸಂತೋಷ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಕಟ್ಟಡ ಕಾರ್ಮಿಕ ಸಂಘದ ಪದಾಧಿಕಾರಿಗಳು ಮತ್ತು ವಿವಿಧ ಹಳ್ಳಿಗಳಿಂದ ಬಂದ ಇತರೆ ಕಟ್ಟಡ ಕಾರ್ಮಿಕರಿಗೆ ಆರೋಗ್ಯ ತಪಾಸಣೆ ಮಾಡಲಾಯಿತು. ಈ ವೇಳೆ ಸಂಸ್ಥೆಯ ಸಿಬ್ಬಂದಿ, ಕಟ್ಟಡ ಕಾರ್ಮಿಕರು ಸೇರಿದಂತೆ ಅನೇಕರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

