Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರ ಪ್ರತಿಭಟನೆ
(ರಾಜ್ಯ ) ಜಿಲ್ಲೆ

ಬಿಲ್ ಪಾವತಿಗೆ ಆಗ್ರಹಿಸಿ ಗುತ್ತಿಗೆದಾರರ ಪ್ರತಿಭಟನೆ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಆಲಮಟ್ಟಿ: ತಮ್ಮ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ
ಕೃಷ್ಣಾ ತೀರ ಗುತ್ತಿಗೆದಾರರ ಸಂಘ ಮಂಗಳವಾರ ಪ್ರತಿಭಟನೆ ನಡೆಸಿದರು.
ಕಳೆದ ಒಂದು ವರ್ಷದಿಂದ ಮುಳುಗಡೆ ಹಾಗೂ ಅಚ್ಚುಕಟ್ಟು ಪ್ರದೇಶದ ನೂರಾರು ಗುತ್ತಿಗೆದಾರರು ಹಲವಾರು ಕಾಮಗಾರಿಗಳನ್ನು ನಿರ್ವಹಿಸಿ ಪೂರ್ಣಗೊಳಿಸಿ ಬಿಲ್ ಸಲ್ಲಿಸಲಾಗಿದ್ದು, ಈ ವರೆಗೆ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಇದರಿಂದಾಗಿ ಹಲವಾರು ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಅವರು ಆಗ್ರಹಿಸಿದರು.
ಹಲವಾರು ಗುತ್ತಿಗೆದಾರು ಕಾಮಗಾರಿಗಳನ್ನು ಪೂರ್ಣಗೊಳಿಸಿ ಕಾಮಗಾರಿಗಳನ್ನು ಬಿಲ್ ಸಂದಾಯ ಮಾಡಿ ಒಂದು ವರ್ಷ ಗತಿಸುತ್ತಾ ಬಂದರೂ ಇದುವರೆಗೆ ಹಣ ಬಿಡುಗಡೆ ಯಾಗಿಲ್ಲ. ಈ ಕಾಮಗಾರಿಗಳಿಗೆ ಶೀಘ್ರವಾಗಿ ಹಣ ಬಿಡುಗಡೆಯಾಗಬೇಕು.
2022/23 ರ ಆರ್ಥಿಕ ವರ್ಷದ ಕಾಮಗಾರಿಗಳನ್ನು ಟೆಂಡರ ಕರೆದು ಒಂದು ವರ್ಷ ಗತಿಸುತ್ತಾ ಬಂದರೂ ಕೂಡಾ ಇನ್ನೂ ಟೆಂಡರ್ ಪ್ರಕ್ರಿಯೆ ಮುಗಿದಿಲ್ಲ, ಪಾರದರ್ಶಕ ಕಾಯ್ದೆ ಅಡಿಯಲ್ಲಿರುವ ನಿಯಮಾವಳಿಗಳ ಪ್ರಕಾರ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣ ಗೊಳಿಸಿ ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಗುತ್ತಿಗೆದಾರ ಮುಂಗಡ ಹಣ ಅವರ ಖಾತೆಗೆ ಜಮಾ ಮಾಡಬೇಕು ಎಂದು ಗುತ್ತಿಗೆದಾರರು ಆಗ್ರಹಿಸಿದರು.
ಆಲಮಟ್ಟಿ ವಲಯದ ವ್ಯಾಪ್ತಿಯಲ್ಲಿ ಬರುವ ಎಲ್ಲ ಕಾಲುವೆಗಳ ಹೂಳು ಸಮೀಕ್ಷೆ ಮಾಡಿ ಅಂದಾಜು ಪತ್ರಿಕೆ ತಯಾರಿಸಿ 5 ರಿಂದ 10 ಕಿ.ಮೀ ಗೆ ಒಂದರಂತೆ ಕಾಮಗಾರಿಯ ಟೆಂಡರ್ ಕರೆಯಬೇಕು. ಇಂತಹ ಕಾಮಗಾರಿಗಳನ್ನು ಪ್ಯಾಕೇಜ್ ಪದ್ದತಿಗೆ ಒಳಪಡಿಸಬಾರದು, ಸರ್ಕಾರ ಬಜೆಟ್ ನಲ್ಲಿ ಘೋಷಣೆ ಮಾಡಿರುವಂತೆ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕರೆಯಲಾಗುವ ಕಾಮಗಾರಿಗಳಲ್ಲಿ ಹಿಂದುಳಿದ ವರ್ಗಗಳ ಗುತ್ತಿಗೆದಾರರಿಗೆ 20%ರಷ್ಟು ಮೀಸಲಾತಿ ಕಲ್ಪಿಸಿ ಮುಳುಗಡೆ ಪ್ರದೇಶದ ಗುತ್ತಿಗೆದಾರರಿಗೆ ಕಾಮಗಾರಿಗಳ ನಿರ್ವಹಣೆಯಲ್ಲಿ ಆಧ್ಯತೆ ನೀಡಬೇಕು ಎಂದು ಗುತ್ತಿಗೆದಾರರು ಆಗ್ರಹಿಸಿದರು.
ಅಣೆಕಟ್ಟು ವೃತ್ತದಿಂದ ಮುಖ್ಯ ಎಂಜಿನಿಯರ್ ಕಚೇರಿವರೆಗೆ ಗುತ್ತಿಗೆದಾರರು ಪ್ರತಿಭಟನೆ ರ್ಯಾಲಿ ನಡೆಸಿದರು.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಂ.ಎ. ಮೇಟಿ, ಶಿವು ಗದಿಗೆಪ್ಪಗೋಳ, ಸಿ.ಜಿ. ವಿಜಯಕರ, ಬಹದ್ದೂರ ರಾಠೋಡ, ಅಂದಾನಯ್ಯ ಮುಷ್ಟಿ ಗೇರಿ, ಮಹಾಂತೇಶ ಡೆಂಗಿ, ವೈ.ವೈ. ಬಿರಾದಾರ, ಹಣಮಂತಪ್ಪ ಪೂಜಾರಿ, ಮಕ್ಸೂದ್ ಮಕಾನದಾರ್, ಎಸ್. ಎಲ್. ಲಮಾಣಿ, ವಿ.ಎಂ. ಹಿರೇಮಠ ಮತ್ತಿತರರು ಇದ್ದರು.
ಮುಖ್ಯ ಎಂಜಿನಿಯರ್ ಎಚ್.ಸಿ. ಶ್ರೀನಿವಾಸ ಮನವಿ ಸ್ವೀಕರಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.