ಸಿಂದಗಿ: ಹಂದಿಗಳ ಹಾವಳಿಯಿಂದ ಸಾರ್ವಜನಿಕರು ಹಲವಾರು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಪುರಸಭೆ ಮುಖ್ಯಾಧಿಕಾರಿ ಗುರುರಾಜ ಚೌಕಿಮಠ ಹೇಳಿದರು.
ಮಂಗಳವಾರದಂದು ಪಟ್ಟಣದ ಪುರಸಭೆ ಕಛೇರಿಯಲ್ಲಿ ಹಮ್ಮಿಕೊಂಡ ಹಂದಿ ಸಾಕಾಣಿಕೆ ಮಾಲೀಕರ ಸಭೆಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಹಂದಿಗಳ ಹಾವಳಿ ಹೆಚ್ಚಾಗಿದೆ. ಅದರಿಂದ ಸಾರ್ವಜನಿಕರಿಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದ್ದು, ಕಾರಣ ಈ ಕೂಡಲೇ ಎಲ್ಲಾ ಹಂದಿಗಳನ್ನು ತೆರವುಗೊಳಿಸಲು ಕ್ರಮ ಕೈಗೊಳ್ಳಲು ಹಂದಿ ಮಾಲಿಕರಿಗೆ ಸೂಚಿಸಿದರು.
ಈ ವೇಳೆ ತಾಲೂಕು ಪಶು ವೈದ್ಯಾಧಿಕಾರಿ ಮಾರುತಿ ತಡಲಗಿ ಮಾತನಾಡಿ, ರೋಗ ಹರಡದಂತೆ ವ್ಯಾಕ್ಸಿನೇಷನ್ ವ್ಯವಸ್ಥೆ ಇದ್ದು ಅದರ ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದರು.
ಇದೇ ಸಂದರ್ಭದಲ್ಲಿ ರಾಮು ಮೋರಟಗಿ ಮಾತನಾಡಿ, ಪುರಸಭೆ ಕಾರ್ಯಾಲಯದಲ್ಲಿ ಹಂದಿ ಹಿಡಿಯುವ ಸಲುವಾಗಿ ಸಿಬ್ಬಂದಿಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಬೇಕು ಎಂದರು.
ಈ ವೇಳೆ ಅದಕ್ಕೆ ಉತ್ತರಿಸಿ ಮುಖ್ಯಾಧಿಕಾರಿಗಳು ಕ್ರಮ ವಹಿಸುವುದಾಗಿ ಸೂಚಿಸಿದರು.
ಈ ಸಭೆಯಲ್ಲಿ ಕಿರಿಯ ಆರೋಗ್ಯ ನಿರೀಕ್ಷಕಿ ಇಂದುಮತಿ ಮಣೂರ, ಸಿದ್ದು ಅಂಗಡಿ ಸೇರಿದಂತೆ ಹಂದಿ ಸಾಕಾಣಿಕೆ ಮಾಲೀಕರು, ಪುರಸಭೆ ಸಿಬ್ಬಂದಿಗಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

