Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೧೪ರಂದು ಭಗೀರಥ ಭಾರತ ಜನಕಲ್ಯಾಣ ಯಾತ್ರೆ ಆಗಮನ
(ರಾಜ್ಯ ) ಜಿಲ್ಲೆ

ಡಿ.೧೪ರಂದು ಭಗೀರಥ ಭಾರತ ಜನಕಲ್ಯಾಣ ಯಾತ್ರೆ ಆಗಮನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಡಿಸೆಂಬರ್ ೯ ರಿಂದ ಭಾರತಾದ್ಯಂತ ಭಗೀರಥ ಭಾರತ ಜನ ಕಲ್ಯಾಣ ಯಾತ್ರೆ ಪ್ರಾರಂಭಗೊಂಡಿದ್ದು, ಯಾತ್ರೆಯು ಡಿ.೧೪ ರಂದು ಬೆಳಿಗ್ಗೆ ೧೦ ಗಂಟೆಗೆ ವಿಜಯಪುರ ನಗರಕ್ಕೆ ಆಗಮಿಸುತ್ತಿದ್ದು, ಈ ಯಾತ್ರೆಯನ್ನು ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಗಾಂಧಿಚೌಕ್, ಬಸವೇಶ್ವರ ಸರ್ಕಲ್, ಅಂಬೇಡ್ಕರ್ ಸರ್ಕಲ್, ಭಗೀರಥ ವೃತ್ತದಿಂದ ಶಿಕಾರಖಾನೆಯ ವೆಂಕಟೇಶ್ವರ ದೇವಸ್ಥಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉಪ್ಪಾರ ಸೇವಾ ಸಂಘದ ಅಧ್ಯಕ್ಷ ಜಕ್ಕಪ್ಪ ಯಡವೆ ಅವರು ತಿಳಿಸಿದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯ ಉಪ್ಪಾರ ಸಂಘದ ನೇತೃತ್ವದಲ್ಲಿ ಭಗೀರಥ ಪೀಠದ ಜಗದ್ಗುರು ಡಾ.ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳ ದಿವ್ಯ ಸಾನ್ನಿಧ್ಯದಲ್ಲಿ , ಪ್ರಧಾನ ಕಾರ್ಯದರ್ಶಿಗಳಾದ ಯು ವೆಂಕೋಬ ವಕೀಲರ ನೇತೃತ್ವದಲ್ಲಿ ಸದರಿ ಯಾತ್ರೆಯು ಸಾಗಲಿದೆ ಎಂದರು.
ಈ ಯಾತ್ರೆಯಲ್ಲಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಮಾಜಿ ಹಾಲಿ ಅಧ್ಯಕ್ಷರು, ಪದಾಧಿಕಾರಿಗಳು, ಸಮಾಜದ ರಾಜ್ಯ ಮುಖಂಡರು, ಸಮಾಜದ ಮಾಜಿ-ಹಾಲಿ ಜನಪ್ರತಿನಿಧಿಗಳು ಸಮಾಜದ ಹಾಲಿ-ನಿವೃತ್ತ ನೌಕರರು ಸೇರಿದಂತೆ ಅನೇಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರುಗಳಿಂದ ಕರೆಯಲ್ಪಡುವ ಉಪ್ಪಾರ ಸಮಾಜವನ್ನು ಸಂಘಟಿಸಿ, ಭಗೀರಥ ಸಮಾಜ ಎಂದು ದೇಶ ದಾದ್ಯಂತ ಕರೆಯಬೇಕು. ಭಾರತ ದೇಶದಾದ್ಯಂತ ಭಗೀರಥ ಜಯಂತಿಯನ್ನು ಕೇಂದ್ರ ಸರ್ಕಾರದಿಂದ ಆಚರಿಸಬೇಕು. ಕೇಂದ್ರ ಸರಕಾರವು ಭಗೀರಥ ಸಮಾಜ ಅಭಿವೃದ್ಧಿ ನಿಗಮ ಸ್ಥಾಪಿಸಿ, ಅದಕ್ಕೆ ವಾರ್ಷಿಕ ೨೦೦೦ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕು ಎಂದು ಒತ್ತಾಯಿಸಿದರು. ಹರಿದ್ವಾರದಲ್ಲಿ ಉಪ್ಪಾರ ಸಮಾಜಕ್ಕೆ ಸ್ಥಳ ಮೀಸಲಿಟ್ಟು, ಗಂಗಾ ನದಿ ಭೂಲೋಕಕ್ಕೆ ತಂದ ಭಗೀರಥರ ಬೃಹತ್ ಮೂರ್ತಿಯನ್ನು ಪ್ರತಿಷ್ಠಾಪಿಸಬೇಕು. ಕರ್ನಾಟಕ ರಾಜ್ಯ ಸರ್ಕಾರವು ಉಪ್ಪಾರ ಹಾಗೂ ಅದರ ಉಪಜಾತಿಗಳನ್ನು ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಬೇಕು ಎಂದೂ ಒತ್ತಾಯಿಸಿದರು.
ಧೇಯೋದ್ದೇಶಗಳೊಂದಿಗೆ ಹರೀಶ್ ಮಹತೋ ಚೌವ್ಹಾಣ್ ಹಾಗೂ ದೇಶದ ವಿವಿಧ ರಾಜ್ಯಗಳ ಹನ್ನೊಂದು ಜನರ ತಂಡದೊಂದಿಗೆ ಭಾರತ ದೇಶದಾದ್ಯಂತ ಈ ಯಾತ್ರೆಯನ್ನು ಹಮ್ಮಿಕೊಂಡಿದ್ದಾರೆ ಎಂದು ಹೇಳಿದರು.
ಪತ್ರಿಕಾ ಗೋಷ್ಠಿಯಲ್ಲಿ ಉಪ್ಪಾರ ಸಮಾಜದ ಕಾರ್ಯದರ್ಶಿ ಸಿದ್ದು ಗೇರಡೆ, ಸೋಮಶೇಖರ ಬಂಡಿ, ಮುತ್ತಪ್ಪ ಕೆ. ಶಿವಣ್ಣನವರ, ಅನೀಲ ಅವಳ, ಜಿ.ಎಲ್.ಕಸ್ತೂರಿ (ವಕೀಲರು), ಲಕ್ಷ್ಮಣ ಉಪ್ಪಾರ, ಯಲ್ಲಪ್ಪ ಬಂಡಿ, ಗೋವಿಂದ ಕಸ್ತೂರಿ, ರಾಜು ಕಸ್ತೂರಿ, ನೌಕರ ಸಂಘದ ಅಧ್ಯಕ್ಷ ಪುಂಡಲೀಕ ಉಪ್ಪಾರ, ಶ್ರೀನಿವಾಸ ಅಂಬಲಿ, ಭೀಮಣ್ಣ ಉಪ್ಪಾರ, ಸಾಬು ಕಾತ್ರಾಳ, ಸಂಗು ಪಡಸಲಗಿ, ಆನಂದ ಗಣೂರ, ಸಿದ್ರಾಯ ಗುಗ್ಗರಿ, ಮಹಾಲಿಂಗ ಉಪ್ಪಾರ, ಸಾಬು ಗಂಗನಳ್ಳಿ, ಉಮಾ ಸುರೇಶ ಶಹಾಪೂರ ಇತರರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.