ಆಲಮಟ್ಟಿ: ಇಲ್ಲಿಯ ವಿವಿಧ ಉದ್ಯಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರಣ್ಯ ದಿನಗೂಲಿ ಕಾರ್ಮಿಕರಿಗೆ ಆರು ತಿಂಗಳಿಂದ ವೇತನ ಪಾವತಿ ಮಾಡದಿರುವುದನ್ನು ಖಂಡಿಸಿ ಅರಣ್ಯ ದಿನಗೂಲಿಗಳು
ಮಂಗಳವಾರ ಇಲ್ಲಿ ಪ್ರತಿಭಟಿಸಿದರು.
ರಾಕ್ ಉದ್ಯಾನದಿಂದ ಮುಖ್ಯ ಎಂಜಿನಿಯರ್ ಕಚೇರಿಯವರೆಗೆ ೧೦೦ ಕ್ಕೂ ಹೆಚ್ಚು ಕಾರ್ಮಿಕರು ಮೆರವಣಿಗೆ ನಡೆಸಿ ವೇತನ ವಿಳಂಬ ಧೋರಣೆ ಖಂಡಿಸಿದರು.
ಮುಖ್ಯ ಎಂಜಿನಿಯರ್ ಕಚೇರಿ ಎದುರು ಸಂಜೆಯವರೆಗೂ ಪ್ರತಿಭಟನೆ ನಡೆಸಿದ ನೂರಾರು ಕಾರ್ಮಿಕರು ಕಳೆದ ಆರು ತಿಂಗಳಿಂದ ವೇತನ ನೀಡಿಲ್ಲ, ಇದರಿಂದ ನಮ್ಮ ನಿತ್ಯ ಜೀವನದ ಸಾಗಿಸುವುದು ದುಸ್ತರವಾಗಿದೆ ಎಂದು ನೊಂದು ನುಡಿದರು.
ಮುಖ್ಯ ಎಂಜಿನಿಯರ್ ಕಚೇರಿಯಲ್ಲಿ ಮಧ್ಯಾಹ್ನದವರೆಗೂ ಕುಳಿತರೂ ಯಾರೊಬ್ಬರೂ ಅವರ ಸಮಸ್ಯೆಯನ್ನೂ ಆಲಿಸುವವರೂ ಯಾರೂ ಇರಲಿಲ್ಲ.
ಧರಣಿನಿರತ ಪ್ರತಿಭಟನಾಕಾರರ ಸಮಸ್ಯೆ ಯಾರೊಬ್ಬ ಅಧಿಕಾರಿಯೂ ಆಲಿಸಿಲ್ಲ ಎಂಬುದನ್ನು ಗಮನಿಸಿ, ಪತ್ರಕರ್ತರ ಒತ್ತಡಕ್ಕೆ ಮುಖ್ಯ ಎಂಜಿನಿಯರ್ ಎಚ್.ಸಿ. ಶ್ರೀನಿವಾಸ ಹಾಗೂ ಪ್ರಧಾನ ಮುಖ್ಯ ಲೆಕ್ಕಾಧಿಕಾರಿ ವರದರಾಜು ಒಂದು ವಾರದೊಳಗೆ ವೇತನ ಬಿಡುಗಡೆಗೆ ಕ್ರಮ ಕೈಗೊಳ್ಳುವ ಭರವಸೆ ನೀಡಿದರು.
ಧರಣಿಯಲ್ಲಿ ಎಐಯುಟಿಯುಸಿ ಸಂಘಟನೆಯ ಜಿಲ್ಲಾ ಮುಖಂಡ ಎಚ್.ಟಿ. ಮಲ್ಲಿಕಾರ್ಜುನ, ಲಕ್ಷ್ಮಣ ಬ್ಯಾಲ್ಯಾಳ, ಯಮನಪ್ಪ ತುಬಾಕಿ, ದ್ಯಾಮಣ್ಣ ಬಿರಾದಾರ, ಮಹೇಶ ತೆಲಗಿ, ಸತೀಶ ಮುಕಾರ್ತಿಹಾಳ, ರಮೇಶ ಅಸ್ಕಿ, ನಿಜವ್ವ ಗಾಂಜಿ, ಯಲ್ಲವ್ವ ಗುರುವರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

