ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಹಾಗೂ ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಹಯೋಗದಲ್ಲಿ ಡಿ.೧೭ರಂದು ಸೋಲಾಪುರ ರಸ್ತೆಯ ಪೊಲೀಸ್ ಪರೇಡ್ ಮೈದಾನದಲ್ಲಿ ಶ್ವಾನ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಶ್ವಾನ ಪ್ರದರ್ಶನವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ(ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ, ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ವಿವಿಧ ಜನಪ್ರತಿನಿಧಿಗಳು ಅಧಿಕಾರಿಗಳು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
