Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಹೆರಿಟೇಜ್ ರನ್‌ಗೆ ಭಾರಿ ಬೆಂಬಲ ವ್ಯಕ್ತ :ಡಾ.ಮಹಾಂತೇಶ
(ರಾಜ್ಯ ) ಜಿಲ್ಲೆ

ಹೆರಿಟೇಜ್ ರನ್‌ಗೆ ಭಾರಿ ಬೆಂಬಲ ವ್ಯಕ್ತ :ಡಾ.ಮಹಾಂತೇಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವೃಕ್ಷಥಾನ್ ಹೆರಿಟೇಜ್ ರನ್- 2023 ಪೂರ್ವ ಸಿದ್ಧತೆಗಳ ಕುರಿತ ಕೋರ್ ಕಮೀಟಿ ಸಭೆ

ವಿಜಯಪುರ: ಡಿ.24 ರಂದು ನಗರದಲ್ಲಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2023ಕ್ಕೆ ತಾಂತ್ರಿಕ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, 5 ಕಿ.ಮೀ, 10 ಕಿ.ಮೀ ಮತ್ತು 21 ಕಿ.ಮೀ ಓಟದಲ್ಲಿ ಪಾಲ್ಗೊಂಡ ಕ್ರೀಡಾಪಟುಗಳ ಓಟದ ಭಾವಚಿತ್ರಗಳು ನೇರವಾಗಿ ಅವರ ಇ-ಮೇಲ್‌ಗೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಬುಧವಾರ ನಗರದಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2023 ಪೂರ್ವ ಸಿದ್ಧತೆಗಳ ಕುರಿತು ನಡೆದ ಕೋರ್ ಕಮೀಟಿ ಸಭೆಯಲ್ಲಿ ಅವರು ಮಾತನಾಡಿದರು.
ಈ ಓಟದಲ್ಲಿ ಪಾಲ್ಗೊಳ್ಳುತ್ತಿರುವ ಫೇಸರ್, ಅಂಬಾಸೀಡರ್ ಮತ್ತು ಪ್ರಮುಖ ಕ್ರೀಡಾಪಟುಗಳು ಈ ಬಾರಿಯ ಕಾರ್ಯಕ್ರಮಕ್ಕೆ ಹೆಚ್ಚಿನ ಮೆರಗು ನೀಡುತ್ತಿದ್ದಾರೆ. ಅಲ್ಲದೇ, ಕ್ರೀಡಾಪಟುಗಳು ಓಡುವ ಮಾರ್ಗದಲ್ಲಿ ಅಲ್ಲಲ್ಲಿ ನಾನಾ ಸಾಂಸ್ಕೃತಿಕ ಕಲಾ ತಂಡಗಳು ತಮ್ಮ ಸಂಗೀತ ಮತ್ತು ನೃತ್ಯ ಪ್ರದರ್ಶನ ಮೂಲಕ ಓಟಗಾರರಿಗೆ ಪ್ರೋತ್ಸಾಹ ನೀಡಲಿದ್ದಾರೆ. ಕೋರ್ ಕಮೀಟಿಯ ಎಲ್ಲ ಪದಾಧಿಕಾರಿಗಳು ಮತ್ತು ಜಿಲ್ಲಾಡಳಿತದ ಸಹಕಾರದಿಂದ ಹೆರಿಟೇಜ್ ರನ್‌ಗೆ ಭಾರಿ ಬೆಂಬಲ ವ್ಯಕ್ತವಾಗುತ್ತಿದೆ. ಈ ಭಾರಿಯ ಕಾರ್ಯಕ್ರಮ ರಾಜ್ಯವಷ್ಟೇ ಅಲ,್ಲ ದೇಶಾದ್ಯಂತ ಗಮನ ಸೆಳೆಯುತ್ತಿದ್ದು ಸಂಪೂರ್ಣ ಯಶಸ್ವಿಯಾಗಲಿದೆ ಎಂದು ಹೇಳಿದರು.
ಈ ಸಭೆಯಲ್ಲಿ ಖ್ಯಾತ ಓಟಗಾರರಾದ ರಾಜಿಂದರ್ ಕೌರ್, ಶೋಭಾ ನರೇಂದ್ರಕುಮಾರ ನಾಗಶೆಟ್ಟಿ ಕೂಡ ಪಾಲ್ಗೊಂಡು ಸಿದ್ಧತೆ ಪರಿಶೀಲನೆ ಜೊತೆಗೆ ಸಲಹೆ ಸೂಚನೆಗಳನ್ನು ಆಲಿಸಿದರು.
ಸಿ.ಆರ್.ಡಿ.ಎಸ್ ಪೌಂಡೇಶನ್ ಸಂಸ್ಥಾಪಕ ನಿರ್ದೇಶಕಿಯೂ ಆಗಿರುವ ಶೋಭಾ ನರೇಂದ್ರಕುಮಾರ ನಾಗಶೆಟ್ಟಿ ಮಾತನಾಡಿ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಓಟಗಾರರು ಈ ವೃಕ್ಷಥಾನ್ ಹೆರಿಟೇಜ್ ರನ್- 2023 ನಲ್ಲಿ ಪಾಲ್ಗೋಳ್ಳುತ್ತಿರುವುದು ಈ ಬಾರಿಯ ಕಾರ್ಯಕ್ರಮದ ಜನಪ್ರೀಯತೆಗೆ ಸಾಕ್ಷಿಯಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ವಿಜಯಪುರ ಜಿಲ್ಲೆಯ ಜನತೆ ಮ್ಯಾರಾಥಾನ್‌ಗಳಲ್ಲಿ ಪಾಲ್ಗೊಳ್ಳಲು ಸ್ಪೂರ್ತಿಯಾಗಿದೆ ಎಂದು ಹೇಳಿದರು.
ಅಂತಾರಾಷ್ಟ್ರೀಯ ಖ್ಯಾತಿಯ ಅಲ್ಟ್ರಾ ಮ್ಯಾರಾಥಾನ್ ಕ್ರೀಡಾಪಟು 53 ವರ್ಷದ ರಾಜಿಂದರ್ ಕೌರ್ ಮಾತನಾಡಿ, ನಾನು ಈ ಮುಂಚೆ ದೇಶ ಮತ್ತು ವಿದೇಶಗಳಲ್ಲಿ ಹಲವಾರು ಓಟಗಳಲ್ಲಿ ಪಾಲ್ಗೊಂಡಿದ್ದೇನೆ. ಆದರೆ, ವೃಕ್ಷಥಾನ್ ಹೆರಿಟೇಜ್ ರನ್- 2023 ನಲ್ಲಿ ಪಾಲ್ಗೋಳ್ಳಲು ಸಾವಿರಾರು ಜನ ತಮ್ಮ ಹೆಸರುಗಳನ್ನು ನೋಂದಾಯಿಸಿರುವುದು ಅಚ್ಚರಿಯಷ್ಟೇ ಅಲ್ಲ, ಅತೀ ಹೆಚ್ಚು ಸಂತಸವನ್ನುಂಟು ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನೋಂದಣಿ ಸಮಿತಿ ಉಸ್ತುವಾರಿ ಡಾ. ಮಲ್ಲಿಕಾರ್ಜುನ ಯಲಗೊಂಡ ಮತ್ತು ವೀರೇಂದ್ರ ಗುಚ್ಚೆಟ್ಟಿ ಈವರೆಗೆ 7000ಕ್ಕೂ ಹೆಚ್ಚು ಜನ ತಮ್ಮ ಹೆಸರನ್ನು ನೋಂದಣಿ ಮಾಡಿಸಿಕೊಂಡಿದ್ದಾರೆ. ಈ ಸಂಖ್ಯೆ 8000 ದಾಟುವ ನಿರೀಕ್ಷೆ ಇದೆ ಎಂದು ಮಾಹಿತಿ ನೀಡಿದರು.
ಖ್ಯಾತ ಉದ್ಯಮಿ ಚಂದ್ರಕಾಂತ ಶೆಟ್ಟಿ ಮಾತನಾಡಿ, ಕಾರ್ಯಕ್ರಮ ಆಯೋಜನೆ ಕುರಿತು ಕೈಗೊಳ್ಳಲಾದ ವ್ಯವಸ್ಥೆಗಳ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಂಚಾಲಕ ಮುರಗೇಶ ಪಟ್ಟಣಶೆಟ್ಟಿ, ಈಗಾಗಲೇ ವೃಕ್ಷಥಾನ್ ಹೆರಿಟೇಜ್ ರನ್- 2023 ಕುರಿತು ಶಾಲಾ ಕಾಲೇಜುಗಳು, ಸಂಘ ಸಂಸ್ಥೆಗಳಿಗೆ ತೆರಳಿ ಜಾಗೃತಿ ಮೂಡಿಸಲಾಗಿದೆ. ಇದಕ್ಕೆ ಪ್ರತಿಯಾಗಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಹೆಸರು ನೋಂದಾಯಿಸಿದ್ದಾರೆ. ಅಲ್ಲದೇ, ರೂಟ್, ಹೈಡ್ರೇಶನ್ ಪಾಯಿಂಟ್ಸ್, ಕ್ರೀಡಾಪಟುಗಳು ಓಡುವ ಪ್ರಮುಖ ಸ್ಥಳಗಳಿಗೆ ತೆರಳಿ ಪರಿಶೀಲನೆ ನಡೆಸಲಾಗಿದೆ. ನಗರದ ಎಲ್ಲರೂ ಈ ಕ್ರೀಡಾಕೂಟಕ್ಕೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದರು.
ನಾವೇದ ನಾಗಠಾಣ ಮಾತನಾಡಿ, ಈವರೆಗೆ ಸಾಮಾಜಿಕ ಜಾಲತಾಣಗಳಲ್ಲಿ ವೃಕ್ಷಥಾನ್ ಹೆರಿಟೇಜ್ ರನ್- 2023 ಆಯೋಜನೆ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಲಾಗಿದೆ. ಅಲ್ಲದೇ, ಇದರಲ್ಲಿ ಪಾಲ್ಗೋಳ್ಳುತ್ತಿರುವ ಖ್ಯಾತನಾಮರ ಕುರಿತು ಕೂಡ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಕೋರ್ ಕಮೀಟಿಯ ಮುಖಂಡರಾದ ಸಂಕೇತ ಬಗಲಿ, ಶಿವನಗೌಡ ಪಾಟೀಲ, ಸಂಗಮೇಶ ಬಬಲೇಶ್ವರ, ಶಾಂತೇಶ ಕಳಸಗೊಂಡ, ಸಂತೋಷ ಔರಸಂಗ, ಶಿವಾನಂದ ಯರನಾಳ, ಅಮೀತ ಬಿರಾದಾರ, ನಾವೀದ ನಾಗಠಾಣ, ಸೋಮು ಮಠ, ಆಕಾಶ ಚೌಕಿಮಠ, ಮಹೇಶ ವಿ. ಶಟಗಾರ, ಜಗದೀಶ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026

ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ

ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ

ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಏಪ್ರಿಲ್ 23, 2026
    In ದಿನಪತ್ರಿಕೆ
  • ಮೇ.೪ರಿಂದ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವ
    In (ರಾಜ್ಯ ) ಜಿಲ್ಲೆ
  • ನಾಗೂರದಲ್ಲಿ ಗದ್ದೆಮ್ಮದೇವಿ ಜಾತ್ರಾ ಮಹೋತ್ಸವ ಸಡಗರ
    In (ರಾಜ್ಯ ) ಜಿಲ್ಲೆ
  • ರೈತ ಮುಖಂಡನ ಪುತ್ರ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ
    In (ರಾಜ್ಯ ) ಜಿಲ್ಲೆ
  • ಉದ್ಯೋಗದ ಬದುಕಿಗೆ ಬೇಕಿವೆ ಕೌಶಲ್ಯಗಳು
    In ವಿಶೇಷ ಲೇಖನ
  • ಮಣ್ಣಿನ ಆರೋಗ್ಯ ಕಾಪಾಡಲು ಸಾವಯವ ಕೃಷಿ ಅಗತ್ಯ :ಕನ್ನೇರಿ ಶ್ರೀ
    In (ರಾಜ್ಯ ) ಜಿಲ್ಲೆ
  • ಸಿದ್ದಾಪುರ ಪಿಕೆಪಿಎಸ್ ಚುನಾವಣೆಯಲ್ಲಿ ಸವದಿ ಗೆಲುವು
    In (ರಾಜ್ಯ ) ಜಿಲ್ಲೆ
  • ಹೊರ್ತಿ ರೇವಣಸಿದ್ದೇಶ್ವರ ದೇಗುಲಕ್ಕೆ ರಾಜ್ಯಪಾಲರ ಭೇಟಿ
    In (ರಾಜ್ಯ ) ಜಿಲ್ಲೆ
  • ಆದಿ ಶಂಕರಾಚಾರ್ಯರ ಜಯಂತಿ ಭಕ್ತಿಭಾವದಿಂದ ಆಚರಣೆ
    In (ರಾಜ್ಯ ) ಜಿಲ್ಲೆ
  • ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಜಿಲ್ಲಾ ಪ್ರವಾಸ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.