Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿ ಅನುಷ್ಟಾನ
(ರಾಜ್ಯ ) ಜಿಲ್ಲೆ

ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮ ಯಶಸ್ವಿ ಅನುಷ್ಟಾನ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಯಶಸ್ವಿಗೆ ಶ್ರಮಿಸಿದ ವೈದ್ಯಾಧಿಕಾರಿಗಳಿಗೆ, ತಾಲೂಕು ಆರೋಗ್ಯಾಧಿಕಾರಿಗಳಿಗೆ ಜಿಪಂ ಸಿಇಓ ರಾಹುಲ್ ಶಿಂಧೆ ಸನ್ಮಾನ

ವಿಜಯಪುರ: ಜಿಲ್ಲೆಯ ಆರ್.ಬಿ.ಎಸ್.ಕೆ ಕಾರ್ಯಕ್ರಮದಲ್ಲಿ ಸಾಧಿಸಿದ ಪ್ರಗತಿ ಮಾದರಿಯಾಗಿದೆ. ಹೆಮ್ಮೆ ಪಡುವಂತಹ ಸಾಧನೆಯಲ್ಲಿ ಭಾಗಿಯಾದ ಎಲ್ಲ ಇಲಾಖೆಯ ಅಧಿಕಾರಿಗಳ ಸಮನ್ವಯದಿಂದ ಯಶಸ್ವಿ ಅನುಷ್ಟಾನಗೊಂಡಿದೆ. ಮುಂಬರುವ ದಿನಗಳಲ್ಲಿ ತಾವೆಲ್ಲರೂ ಇನ್ನಷ್ಟು ಅನುಕೂಲ ಕಲ್ಪಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಾಹುಲ್ ಶಿಂಧೆ ತಿಳಿಸಿದರು.
ಡಿ.೧೨ರಂದು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದ ಯಶಸ್ವಿ ಅನುಷ್ಠಾನಕ್ಕೆ ಶ್ರಮಿಸಿದ ತಂಡದ ವೈದ್ಯಾಧಿಕಾರಿಗಳಿಗೆ, ತಾಲೂಕಾ ಆರೋಗ್ಯ ಅಧಿಕಾರಿಗಳಿಗೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಟ್ಟದ ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಇತರೆ ಇಲಾಖೆಯ ಅಧಿಕಾರಿಗಳಿಗೆ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸನ್ಮಾನಿತರಿಗೆ ಗೌರವಿಸಿ ಅವರು ಮಾತನಾಡಿದರು. ಅನಾರೋಗ್ಯಕ್ಕೆ ಒಳಗಾದ ಮಕ್ಕಳನ್ನು ಗುರುತಿಸಿ, ಅವರಿಗೆ ಸೂಕ್ತ ಚಿಕಿತ್ಸೆ ಔಷಧೋಪಚಾರ ಮತ್ತು ಸಮಾಲೋಚನೆ ಮೂಲಕ ಚಿಕಿತ್ಸಾ ಪರಿಹಾರ ಕಲ್ಪಿಸುವ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಪೂರಕವಾಗಿ ಸಂಬಂಧಪಡುವ ಇಲಾಖೆ ಅಧಿಕಾರಿಗಳು ಸಮನ್ವಯ ಸಾಧಿಸಿ, ಕಾರ್ಯನಿರ್ವಹಿಸುವಂತೆ ತಿಳಿಸಿದರು. ಸದ್ಯ ಎಲ್ಲ ಸರ್ಕಾರಿ ಹಾಗೂ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಅನೇಮಿಯಾ ಮುಕ್ತ ಪೌಷ್ಟಿಕ ಕರ್ನಾಟಕ ಯೋಜನೆಯಡಿ ರಕ್ತ ತಪಾಸಣೆ ಕೈಗೊಳ್ಳಲಾಗುತ್ತಿದೆ. ರಕ್ತ ಹೀನತೆಯಿಂದ ಬಳಲುವ ಮಕ್ಕಳಿಗೆ ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಅನುಕೂಲವಿರುತ್ತದೆ. ಈ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಅಧಿಕಾರಿಗಳಿ ಸೂಚಿಸಿದರು.
ರಾಷ್ಟ್ರೀಯ ಬಾಲ್ಯ ಸ್ವಾಸ್ಥ್ಯ ಕಾರ್ಯಕ್ರಮದಡಿಯಲ್ಲಿ ೧೮ದೊಳಗಿನ ಮಕ್ಕಳಿಗೆ ಜಿಲ್ಲೆಯಾದ್ಯಂತ ಫೆಬ್ರವರಿ-೨೦೨೨ ರಿಂದ ಈವರೆಗೆ ೧೨,೯೨,೬೦೨ ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಗಿದೆ. ಈ ಪೈಕಿ ೫೯,೯೪೨ ವಿವಿಧ ಆರೋಗ್ಯ ಸಮಸ್ಯೆಯಿರುವ ಮಕ್ಕಳಿದ್ದು,ಇದರಲ್ಲಿ ೯೧೨ ಮಕ್ಕಳಿಗೆ ಶಸ್ತ್ರ ಚಿಕಿತ್ಸೆ ಮಾಡಿಸಲಾಗಿದ್ದು, ೧೮೯ ಮಕ್ಕಳಿಗೆ ಹೃದಯ ಸಂಬಂಧಿ ಶಸ್ತ್ರಚಿಕಿತ್ಸೆ, ೩೫ ಮಕ್ಕಳಿಗೆ ಕಣ್ಣಿನ ಚಿಕಿತ್ಸೆ, ೨೬ ಮಕ್ಕಳಿಗೆ ಸೀಳು ತುಟಿ ಚಿಕಿತ್ಸೆ ಮತ್ತು ಇತರೆ ಆರೋಗ್ಯ ಸಮಸ್ಯೆ ಹೊಂದಿರುವ ೬೬೨ ಮಕ್ಕಳಿಗೆ ಆರ್.ಬಿ.ಎಸ್.ಕೆ ಹಾಗೂ ಎ.ಬಿ.ಎ.ಆರ್.ಕೆ ಕಾರ್ಯಕ್ರಮದಡಿ ಉಚಿತ ಶಸ್ತ್ರಚಿಕಿತ್ಸೆ ಕೈಗೊಳ್ಳಲಾಗಿದೆ. ಅವಶ್ಯಕತೆ ಅನುಸಾರ ವಿಜಯಪುರದ ಬಿ.ಎಲ್.ಡಿ.ಇ, ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಗಳಿಗೆ ಹಾಗೂ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಉಚಿತ ಶಸ್ತ್ರಚಿಕಿತ್ಸೆ ಒದಗಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಆರ್.ಸಿ.ಎಚ್ ಅಧಿಕಾರಿಗಳಾದ ಡಾ.ಕೆ.ಡಿ.ಗುಂಡಬಾವಡಿ ಮಾಹಿತಿ ಒದಗಿಸಿದರು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶರಾದ ಡಾ.ಸಿ.ಕೆ ಹೊಸಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕವಿತಾ ದೊಡಮನಿ, ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಮಹಾದೇವ ನಿಂಲಗಿ,ಜಿಲ್ಲಾ ಆರೋಗ್ಯ ಉಪ ಶಿಕ್ಷಣಾಧಿಕಾರಿಗಳಾದ ಸುರೇಶ ಹೊಸಮನಿ, ತಾಲೂಕಿನ ಎಲ್ಲ ಬಿ.ಇ.ಒ, ಸಿಡಿಪಿಓ, ಟಿ.ಎಚ್.ಓ ಅವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.