ಚಡಚಣ: ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಬಿಸಿಯೂಟ ಯೋಜನೆಯನ್ನು ಜಾರಿಗೆ ತಂದಿದೆ. ಈ ಹಿನಲೆಯಲ್ಲಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಆಹಾರವನ್ನು ಒದಗಿಸಿ ಈ ಯೋಜನೆಯನ್ನು ಯಶಸ್ವಿಗೊಳಿಸಬೇಕಾಗಿದೆ ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷ ಅಶೋಕ ಬಿಜ್ಜರಗಿಯವರು ಹೇಳಿದರು.
ರೇವತಗಾಂವ ಗ್ರಾಮದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರದಂದು ಬಿಸಿಯೂಟ ಯೋಜನೆಯಲ್ಲಿ ಮಕ್ಕಳಿಗೆ ಇಡ್ಲಿ-ಸಾಂಬಾರ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ಮಾತನಾಡಿದ ಅವರು. ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಶಿಕ್ಷಕರು ಮಕ್ಕಳಿಗೆ ವಾರದಲ್ಲಿ ಒಂದು ದಿನ ಇಡ್ಲಿ-ಸಾಂಬಾರ ನೀಡುವ ವ್ಯವಸ್ಥೆಯನ್ನು ಕಲ್ಪಿಸಿರುವುದು ಮಕ್ಕಳ ಕಲಿಕೆಗೆ ಉತ್ತಮ ಬೆಳವಣಿಗೆಯಾಗಿದೆ ಎಂದರು. ಹೊಸ ಪಠ್ಯ ಕ್ರಮಕ್ಕೆ ಅನುಗುಣವಾಗಿ ಶಿಕ್ಷಕರು ನೂತನ ಕೌಶಲ್ಯಗಳನ್ನು ಬಳಸಿಕೊಂಡು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಸಾಧ್ಯ ಎಂದರು.
ಈ ವೇಳೆಯಲ್ಲಿ ಶಾಲೆಯ ಮುಖ್ಯ ಗುರು ಆರ್.ಎನ್.ಹತ್ತಳ್ಳಿಯವರು ಮಾತನಾಡಿದರು.
ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರಾದ ಎಸ್.ಡಿ.ಆದಿಗೊಂಡೆ, ಎಸ್.ಜೆ.ಬಿಜ್ಜರಗಿ, ಪಿ.ಎ.ವಾಲಿಕಾರ, ಎಂ.ಕೆ.ಬಗಲಿ, ಎ.ಎಚ್.ಬಗಲಿ, ಎನ.ಎಸ್.ಘೋಡೇಸವಾರ, ಎಂ.ಎಸ್.ಶೇಖ, ಹೀನಾ ಸೈಯದ, ಬಿ.ಎಚ್.ಪಾಟೀಲ ಹಾಗೂ ಹಣಮಂತ ಹಕ್ಕೆ, ಮಲ್ಲಪ್ಪ ಡೋಣಜ ಸೇರಿದಂತೆ ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

