Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಭಗವದ್ಗೀತೆ ರತ್ನಗರ್ಭವಾಗಿದೆ :ಪ್ರಭಾ ಹೆಬ್ಬಾರ
(ರಾಜ್ಯ ) ಜಿಲ್ಲೆ

ಭಗವದ್ಗೀತೆ ರತ್ನಗರ್ಭವಾಗಿದೆ :ಪ್ರಭಾ ಹೆಬ್ಬಾರ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುದ್ದೇಬಿಹಾಳ: ಭಗವದ್ಗೀತೆ ರತ್ನಗರ್ಭವಾಗಿದೆ. ಭೂಮಿಯ ಆಳದಲ್ಲಿ ಯಾವೆಲ್ಲ ರೀತಿಯ ವಸ್ತುಗಳು ಹಂಚಿಕೆಯಾಗಿವೆಯೋ ಹಾಗೆ ಭಗವದ್ಗೀತೆ ವಿಸ್ತಾರವಾಗಿ ಮಹಾಸಾಗರೋಪಾದಿಯಲ್ಲಿ ವ್ಯಾಪಿಸಿದೆ ಎಂದು ಯೋಗ ಶಿಕ್ಷಕಿ ಪ್ರಭಾ ಹೆಬ್ಬಾರ ಹೇಳಿದರು.
ಪಟ್ಟಣದ ಆಲಮಟ್ಟಿ ರಸ್ತೆಯಲ್ಲಿರುವ ಅರಿಹಂತ (ಸಗರಿ) ಕಾಲೇಜಿನಲ್ಲಿ ಸರ್ವಜ್ಞೇಂದ್ರ ಸರಸ್ವತೀ ಪ್ರತಿಷ್ಠಾನ(ರಿ.) ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನ ಶಿರಸಿ ಇವರಿಂದ ಆಯೋಜಿಸಿರುವ ಭಗವದ್ಗೀತಾ ಅಭಿಯಾನ-ಕರ್ನಾಟಕ-೨೦೨೩ರ ತಾಲೂಕು ಮಟ್ಟದ ಸಪ್ತಾಹದ ಅಂಗವಾಗಿ ನಡೆದ ೫ನೇ ದಿನದ ಪಠಣ ಮತ್ತು ಉಪನ್ಯಾಸ ಕಾರ್ಯಕ್ರಮದಲ್ಲಿ “ಭಗವದ್ಗೀತೆ ಮತ್ತು ಜೀವನ ಸಮೃದ್ಧಿ” ಎನ್ನುವ ವಿಷಯದ ಮೇಲೆ ಅವರು ಉಪನ್ಯಾಸ ನೀಡಿದರು.
ಜನರ ಪ್ರತಿಯೊಂದು ಲೌಖಿಕ ಮತ್ತು ಆಲೌಖಿಕ ಸಮಸ್ಯೆಗಳಿಗೆ ಇದರಲ್ಲಿ ಪರಿಹಾರವಿದೆ. ಗೀತೆಯಲ್ಲಿ ನಮ್ಮ ಜೀವನವನ್ನು ಸಮೃದ್ಧ ಮತ್ತು ಸುಂದರಗೊಳಿಸುವ ಶಕ್ತಿ ಹೊಂದಿದೆ. ಅದನ್ನು ಬಳಕೆಮಾಡಿಕೊಳ್ಳಬೇಕು ಎಂದು ಹೇಳಿದರು.
ದಂತ ವೈದ್ಯೆ ಡಾ.ಆಶಾ ಮಾತನಾಡಿ ನ್ಯೂಟನ ನಿಯಮವಾದ ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎನ್ನುವ ಹಾಗೆ ಭಗವದ್ಗೀತೆ ಕರ್ಮ ಸಿದ್ಧಾಂತ ಪ್ರಧಾನವಾಗಿದ್ದು ನಾವು ಮಾಡುವ ಕೆಲಸಗಳ ಆಧಾರದ ಮೇಲಿಂದ ಫಲಿತಾಂಶ ನೀಡುತ್ತವೆ ಎಂದರು.
ಸಂಸ್ಥೆಯ ಅಧ್ಯಕ್ಷ ಮಹಾವೀರ ಸಗರಿ ಮಾತನಾಡಿದರು.
ಈ ವೇಳೆ ನಿವೃತ್ತ ಆರೋಗ್ಯ ಇಲಾಖೆ ನೌಕರ ಜೆ.ವಾಯ್.ಹೊಕ್ರಾಣಿ, ನಿವೃತ್ತ ಕೆ.ಇ.ಬಿ ಅಧಿಕಾರಿ ಎ.ಎಲ್.ದಾಸರ, ದಂತ ವೈದ್ಯೆ ಡಾ.ಆಶಾ, ಪ್ರಾಚಾರ್ಯ ವಿಪುಲ್ ಸಗರಿ, ಬಸವರಾಜ ಬಡಿಗೇರ, ಅಶೋಕ ಹಡಪದ, ಎಚ್.ಎಸ್.ಗೌಡರ್, ಜಿ.ಡಿ.ಬಡಿಗೇರ ಸೇರಿದಂತೆ ಇತರರು ಇದ್ದರು. ಜ್ಞಾನ ಭಾರತಿ ವಿದ್ಯಾ ಮಂದಿರದ ಗೀತ ಗಾಯನ ತಂಡದವರು ಗುರುಮಾತೆ ರಂಜಿತಾ ಹೆಗಡೆ ನೇತೃತ್ವದಲ್ಲಿ ಸಾಮೂಹಿಕವಾಗಿ ಭಗವದ್ಗೀತೆಯ ೧೦ನೇ ಅಧ್ಯಾಯವನ್ನು ಪಠಿಸಿದರು.
ಉಪನ್ಯಾಸಕ ಜಿ.ಡಿ.ಬಡಿಗೇರ ಸ್ವಾಗತಿಸಿದರು. ಸಂಚಾಲಕ ರಾಮಚಂದ್ರ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕ ರಾಜನಾರಾಯಣ ನಲವಡೆ ಹಾಗೂ ಬಸವರಾಜ ಬಡಿಗೇರ ನಿರೂಪಿಸಿದರು. ಅಶೋಕ ಹಡಪದ ವಂದಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.