ವಿಜಯಪುರ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದಿಂದ ಸ್ವಾವಲಂಬಿ ಸಾರಥಿ ವಾಹನ ಖರೀದಿ ಸಹಾಯಧನ ಯೋಜನೆಯಡಿ ಪ್ರವಾಸಿ ಟ್ಯಾಕ್ಸಿ-ಸರಕು ವಾಹನ ಖರೀದಿಗೆ ಫಲಾನುಭವಿಗಳನ್ನು ನವೆಂಬರ್ ೨೧ರಂದು ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಆಯ್ಕೆಯಾದ ಫಲಾನುಭವಿಗಳ ಪಟ್ಟಿಯನ್ನು ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯ ನೋಟಿಸ್ ಬೋರ್ಡಿನಲ್ಲಿ ಪ್ರಕಟಿಸಲಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ದಿ ನಿಗಮ, ಮೌಲಾನಾ ಆಝಾದ ಭವನ, ಜಿಲ್ಲಾ ಪಂಚಾಯತ್ ರಸ್ತೆ, ಕನಕದಾಸ ಬಡಾವಣೆ, ವಿಜಯಪುರ-೫೮೬೧೦೯ ದೂ: ೦೮೩೫೨-೨೭೮೩೪೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
