ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಡಿ.೧೭ ರಂದು ಬೆಳಿಗ್ಗೆ ೯ ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಶ್ವಾನ ಪ್ರದರ್ಶನ ಹಮ್ಮಿಕೊಂಡಿದ್ದು, ಶ್ವಾನ ಮಾಲೀಕರು ತಮ್ಮ ಎಲ್ಲ ವಿವಿಧ ತಳಿಗಳ ಶ್ವಾನಗಳ ಹೆಸರುಗಳನ್ನು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಹೆಸರು ನೊಂದಾಯಿಸಿಕೊಳ್ಳುವಂತೆ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಶ್ವಾನ ಪ್ರದರ್ಶನದಲ್ಲಿ ಭಾಗವಹಿಸಿದ ಉತ್ತಮ ಶ್ವಾನಗಳಿಗೆ ಬಹುಮಾನ ನೀಡಲಾಗುವುದು. ಶ್ವಾನಗಳ ಮಾಲೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮುಖ್ಯ ಪಶು ವೈದ್ಯಾಧಿಕಾರಿಗಳಾದ ಡಾ.ಬಿ.ಎಸ್.ಕನಮಡಿ ಮೊ: ೬೩೬೧೩೦೭೯೧೬, ಡಾ.ಸುಜಾತ ಎಸ್.ಎಂ. ಮೊ: ೯೮೪೫೮೭೩೭೦೧, ಹಿರಿಯ ಪಶುವೈದ್ಯಾಧಿಕಾರಿ ಡಾ.ಸತೀಶ ಪಾಟೀಲ ಮೊ: ೭೩೪೯೪೪೨೩೧೮ ಸಂಖ್ಯೆಗೆ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
