ಪರಿಶಿಷ್ಟ ಜಾತಿ-ಪಂಗಡದ ಅಭ್ಯರ್ಥಿಗಳಿಗೆ ಅಪ್ರೆಂಟಿಶಿಪ್ ತರಬೇತಿ
ವಿಜಯಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದ ಹಾಗೂ ಕಂಪ್ಯೂಟರ್ ಜ್ಞಾನಹೊಂದಿದ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ೧೨ ತಿಂಗಳ ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಡಿಸೆಂಬರ್ ೨೬ರವರೆಗೆ ವಿಸ್ತರಿಸಲಾಗಿದೆ.
ವಿಜಯಪುರ ಜಿಲ್ಲಾ ಕಚೇರಿಯಲ್ಲಿ ತಲಾ ಒಂದು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು, ತರಬೇತಿಗೆ ಮೆರಿಟ್ ಹಾಗೂ ಸಂದರ್ಶನ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಧ್ಯಮ ಅಕಾಡೆಮಿ ಮೂಲಕ ತರಬೇತಿ ಭತ್ಯೆ ನೀಡಲಾಗುವುದು.
ಅಪ್ರೆಂಟಿಶಿಪ್ ತರಬೇತಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ :೨೬-೧೨-೨೦೨೩ರೊಳಗೆ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಆವರಣ, ಸ್ಟೇಶನ್ ರಸ್ತೆ, ವಿಜಯಪುರ ಕಚೇರಿಗೆ ಸಲ್ಲಿಸಬೇಕು. ನಿಗದಿತ ಅರ್ಜಿ ನಮೂನೆ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕಚೇರಿಯನ್ನು ಸಂಪರ್ಕಿಸುವಂತೆ ಸಹಾಯಕ ನಿರ್ದೇಶಕ ಅಮರೇಶ ದೊಡಮನಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
