ವಿಜಯಪುರ: ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿಯಾದ ವಿಜಯಪುರ ಜಿಲ್ಲೆಯ ಲಿಂಗತ್ವ ಅಲ್ಪಸಂಖ್ಯಾತರಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಗುರುತಿನ ಚೀಟಿ ವಿತರಿಸಿದರು.
ನ್ಯಾಶನಲ್ ಪೋರ್ಟಲ್‌ನಲ್ಲಿ ನೊಂದಣಿ ಮಾಡಿಕೊಂಡ ಜಿಲ್ಲೆಯ ೧೦೦ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುತಿನ ಚೀಟಿಯನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳು ಮಾತನಾಡಿ, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯ ಮುಖ್ಯವಾಹಿನಿಯಲ್ಲಿ ತಮ್ಮ ಬದುಕು ಕಟ್ಟಿಕೊಳ್ಳಲು ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುವುದಾಗಿ ತಿಳಿಸಿದ ಅವರು, ಮಹಾನಗರ ಪಾಲಿಕೆಯಿಂದ ಲಿಂಗತ್ವ ಅಲ್ಪಸಂಖ್ಯಾತರಿಗೆ ವಸತಿ ಕಲ್ಪಿಸುವ ಕುರಿತು ಸಹ ಪರಿಶೀಲನೆ ನಡೆಸಿ, ಸಮುದಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ನಿಗಮದ ನಿರೀಕ್ಷಕರಾದ ವಿಠ್ಠಲ ಹೆರಕಲ್, ಲಿಂಗತ್ವ ಅಲ್ಪಸಂಖ್ಯಾತ ಸಮುದಾಯದ ಪ್ರತಿನಿಧಿಗಳಾದ ಶಬ್ಬಿರ ಕಾಗಜಕೋಟೆ, ನವಸ್ಪೂರ್ತಿ ಸಂಘ, ಮಲ್ಲು ಕೆಎಸ್‌ಎಂಎಫ್, ಪ್ರಾರ್ಥನಾ, ಗುಲಾಬ, ಈರಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

