ವಿಜಯಪುರ: ಟೈಯರ್ ಬ್ಲಾಸ್ಟ್ ಆಗಿ ಏಕಾಏಕಿ ಜನತಾ ಟ್ರಾವೆಲ್ಸ್‌ಗೆ ಸೇರಿದ ಬಸ್ ಸುಟ್ಟು ಭಸ್ಮವಾಗಿರುವ ಘಟನೆ ವಿಜಯಪುರ ತಾಲೂಕಿನ ಹಿಟ್ಟಿನಹಳ್ಳಿ ಬಳಿ ನಡೆದಿದೆ.
ಈ ಬಸ್ ಬೆಂಗಳೂರಿಂದ ವಿಜಯಪುರಕ್ಕೆ ಬರುತ್ತಿದ್ದಾಗ ಬಸ್ ಟೈಯರ್ ಬ್ಲಾಸ್ಟ್ ಆಗಿದೆ. ಟೈರ್ ಬ್ಲಾಸ್ಟ್ ಆಗುತ್ತಿದ್ದಂತೆ ಪ್ರಯಾಣಿಕರು ಕೆಳಗೆ ಇಳಿದು ಸೇಫ್ ಆಗಿದ್ದಾರೆ. ಆದರೆ ಪ್ರಯಾಣಿಕರ ಎಲ್ಲ ಲಗೇಜ್ ಬೆಂಕಿಗಾಹುತಿ ಆಗಿವೆ. ಬೆಲೆಬಾಳುವ ವಸ್ತುಗಳು, ಬಟ್ಟೆಗಳು, ನಗದು, ಒಡವೆ ಭಸ್ಮವಾಗಿವೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿಗಳು ಭೇಟಿ ನೀಡಿ ಬೆಂಕಿ ನಂದಿಸಿದರು.
ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment

