ವಿಜಯಪುರ: ಕರ್ನಾಟಕ ಲೋಕಸೇವಾ ಆಯೋಗದಿಂದ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ ಕಿರಿಯ ಲೆಕ್ಕ ಸಹಾಯಕರ ಸಿ ಗುಂಪಿನ ಹುದ್ದೆಗಳ ನೇಮಕಾತಿಗಾಗಿ ಡಿ.೧೬ ಹಾಗೂ ೧೭ ರಂದು ನಗರದ ಪರೀಕ್ಷಾ ಕೇಂದ್ರಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆ ಜರುಗಲಿವೆ.
ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅನುಕೂಲವಾಗುವಂತೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ೨೦೦ ಮೀ. ಪ್ರದೇಶವನ್ನು ಕಲಂ ೧೪೪ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.
ಪರೀಕ್ಷಾ ಕಾರ್ಯದಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿಗಳು ಮತ್ತು ಇತರರು ಮೊಬೈಲ್ ಫೋನ್ ತರುವುದು ಮತ್ತು ಬಳಸುವುದು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಕ್ಯಾಮರಾ ಇಲ್ಲದೇ ಇರುವ ಸಾಮಾನ್ಯ ಮೊಬೈಲ್ ಬೇಸಿಕ್ ಸೆಟ್ ಬಳಸಲು ಅನುಮತಿಸಿದೆ.
ಪರೀಕ್ಷಾ ದಿನಗಳಂದು ಬೆಳಿಗ್ಗೆ ೯ ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ಕೇಂದ್ರದ ವ್ಯಾಪ್ತಿಯಲ್ಲಿನ ಝರಾಕ್ಸ ಅಂಗಡಿಗಳು, ಕಂಪ್ಯೂಟರ್ ಸೆಂಟರ್ಗಳು, ಸೈಬರ್ ಕೆಫೆಗಳು,ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
