ಕೊಲ್ಹಾರ: ಬರ ಪರಿಸ್ಥಿತಿ ಇರುವುದರಿಂದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕು . ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸುವುದರ ಜೊತೆಗೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಂಡು ಪ್ರತಿ ಮನೆಗಳಿಗೆ ತೆರಳಿ ಕೂಲಿ ಬೇಡಿಕೆ ಸಂಗ್ರಹಿಸುವುದು, ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರಿಗೆ ಸಭೆಗಳನ್ನು ಆಯೋಜಿಸಿ ನರೇಗಾ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖವಾಗಿರುತ್ತದೆ. ಒಂದು ವೇಳೆ ಅಧಿಕಾರಿಗಳು ಕೆಲಸ ಬಯಸಿ ಬರುವ ಕೂಲಿಕಾರರಿಗೆ ಕೆಲಸ ನೀಡದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಮುದ್ದಿನ್ ತಿಳಿಸಿದರು.
ಪಟ್ಟಣದ ತಾಲೂಕ ಪಂಚಾಯಿತಿ ಕಾರ್ಯಾಲಯದಲ್ಲಿ ಗುರುವಾರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ಪ್ರಗತಿ ಪರಿಶೀಲನಾ ಸಭೆ ತಗೆದುಕೊಂಡು ಬರ ಪರಿಸ್ಥಿತಿ ಇರುವುದರಿಂದ ಕೂಲಿ ಬಯಸಿ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡಬೇಕು, ಒಂದು ವೇಳೆ ಅರ್ಜಿ ಸಲ್ಲಿಸಿದ ೧೫ ದಿನಗಳೊಳಗಾಗಿ ಕೆಲಸ ನೀಡದಿದ್ದಲ್ಲಿ ಅಂತಹ ಫಲಾನುಭವಿಗಳಿಗೆ ಕಡ್ಡಾಯವಾಗಿ ನಿರುಧ್ಯೋಗ ಭತ್ಯೆ ಕೊಡಿಸಲು ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ.
ಅದಕ್ಕಾಗಿ ಎಲ್ಲಾ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಎಲ್ಲಾ ರೀತಿ ಸಭೆಯನ್ನು ಆಯೋಜನೆ ಮಾಡಿ ಬರ ನಿರ್ವಹಣೆಗೆ ಸನ್ನದ್ಧರಾಗಬೇಕು ಎಂದು ಹೇಳಿದರು. ಪ್ರಗತಿ ಕುಂಠಿತ ಇರುವ ಗ್ರಾಮ ಪಂಚಾಯಿತಿಗಳಿಗೆ ಖುದ್ದಾಗಿ ಭೇಟಿ ಮಾಡಿ ಪರಿಶೀಲಿಸುವುದು. ನರೇಗಾ ಯೋಜನೆ ಅಡಿ ಪೂರ್ಣಗೊಂಡ ಕಾಮಗಾರಿಗಳ ಕುರಿತು ದಾಖಲೆಗಳನ್ನು ಸರ್ಕಾರದ ಆದೇಶದಂತೆ ೨೧ ಚೆಕ್ ಲಿಸ್ಟ ಪ್ರಕಾರ ಅನುಕ್ರವಾಗಿ ದಾಖಲಿಕರಣ ಮಾಡಬೇಕು ಎಂದರು.
ಮುಂದುವರೆದು, ಗ್ರಾಮ ಪಂಚಾಯತಿ ಸಿಬ್ಬಂದಿಗಳ ಅನುಮೋದನೆ. ಗ್ರಾಮ ಪಂಚಾಯಿತಿ ಗ್ರಂಥಾಲಯ ಸಿಬ್ಬಂದಿಗಳ ಸಂಭಾವನೆ, ಆಸ್ತಿಗಳ ಸಮೀಕ್ಷೆ, ತೆರಿಗೆ ವಸೂಲಾತಿ, ಸಕಾಲ, ಇ-ಹಾಜರಾತಿ, ವಸತಿ ಯೋಜನೆ ಹೆಚ್ಚುವರಿ ಮನೆಗಳ ಪ್ರಗತಿ ಹಾಗೂ ವಿವಿಧ ಯೋಜನೆಗಳ ಕುರಿತು ಸಭೆ ತಗೆದುಕೊಂಡಿದ್ದರು. ಈ ಸಂದರ್ಭದಲ್ಲಿ ಸಹಾಯಕ ನಿರ್ದೇಶಕರು (ಪಂ. ರಾ ) ತಾ.ಪಂ. ಕೊಲ್ಹಾರ ರವರು, ತಾ.ಪಂ. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ಗ್ರಾ.ಪಂ. ಸಿಬ್ಬಂದಿಗಳು ಹಾಜರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment
