ಸಹಕಾರಿ ಬ್ಯಾಂಕ್‌ಗಳಲ್ಲಿರುವ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮಾತ್ರ ಮನ್ನಾ | ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಸಹಕಾರಿ ಬ್ಯಾಂಕ್‌ಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲ ಅಧಿವೇಶನದ ಕೊನೆಯ ದಿನವಾದ ಶುಕ್ರವಾರ (ಡಿಸೆಂಬರ್ 15) ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಮಾತನಾಡಿದ ಸಿಎಂ, ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ತಿಳಿಸಿದ್ದಾರೆ.
“ಸಾಲದ ಮೇಲಿನ ಬಡ್ಡಿ ಮನ್ನಾ ಮಾಡುತ್ತೇವೆ ಎಂದು ನಾವು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ. ಆದರೂ ಮಾಡುತ್ತಿದ್ದೇವೆ. 2018ರ ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪ್ರಣಾಳಿಕೆಯಲ್ಲಿ ರೈತರ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುವುದಾಗಿ ಘೋಷಿಸಲಾಗಿತ್ತು. ಆದರೆ, ಬಳಿಕ ಬಂದ ಯಡಿಯೂರಪ್ಪ ಸರ್ಕಾರ ಯಾವುದೇ ಸಾಲ ಮನ್ನಾ ಮಾಡಿಲ್ಲ” ಎಂದು ಸಿಎಂ ಹೇಳಿದ್ದಾರೆ.
ಡಿಸೆಂಬರ್ 4ರಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಪ್ರಾರಂಭಗೊಂಡ ವಿಧಾನಮಂಡಲದ ಚಳಿಗಾಲದ ಅಧಿವೇಶನ ಇಂದು(ಡಿ.15) ಕೊನೆಗೊಂಡಿದೆ.

