ಬೆಂಗಳೂರು: ಸರ್ಕಾರ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದ್ದು, ಪ್ರತ್ಯೇಕ ರಾಜ್ಯದ ಬೇಡಿಕೆ ಸಲ್ಲದು. ಅದು ತಾರತಮ್ಯ ನಿವಾರಣೆಗೆ ಪರಿಹಾರವೂ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಶುಕ್ರವಾರ ಉತ್ತರ ಕರ್ನಾಟಕದ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ ಈ ಮಾತುಗಳನ್ನಾಡಿದರು.
ಪ್ರತ್ಯೇಕ ಕರ್ನಾಟಕಕ್ಕೆ ಒತ್ತಾಯ ಮಾಡುವುದು ಏಕೀಕರಣಕ್ಕೆ ಹೋರಾಡಿ, ಪ್ರಾಣ ತ್ಯಾಗ ಮಾಡಿದವರಿಗೆ ನಾವು ಮಾಡುವ ಅವಮಾನವಾಗಿದೆ. ಕರ್ನಾಟಕದ ಏಕೀಕರಣಕ್ಕಾಗಿ ಬಹಳಷ್ಟು ಜನರು ಹೋರಾಡಿದ್ದಾರೆ. ಭಾಷಾವಾರು ಪ್ರಾಂತ್ರ್ಯ ರಚನೆಯಾಗಲು ಹೋರಾಟ ಮಾಡಿದವರಿದ್ದಾರೆ ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.
ಕಿತ್ತೂರು ಕರ್ನಾಟದ 5 ತಾಲ್ಲೂಕುಗಳು ಸೇರಿದಂತೆ ಅತ್ಯಂತ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ಕೊಡಲಾಗುವುದು. ಕಲ್ಯಾಣ ಕರ್ನಾಟಕಕ್ಕೆ 2013-14 ರಿಂದ ಈವರೆಗೆ 14,877.36 ಕೋಟಿ ರೂ.ಗಳು ಮೀಸಲಿಡಲಾಗಿದೆ. ಬಿಡುಗಡೆಯಾಗಿದ್ದು 10,280 ಕೋಟಿ ರೂ. ಹಾಗೂ 8,330 ಕೋಟಿ ರೂ. ವೆಚ್ಚವಾಗಿದೆ. ಮುಂದಿನ ವರ್ಷದಿಂದ 5,000 ಕೋಟಿ ರೂ.ಗಳನ್ನು ಕಲ್ಯಾಣ ಕರ್ನಾಟಕಕ್ಕೆ ನೀಡಲಾಗುವುದು. ಮುಂಬೈ ಕರ್ನಾಟಕದ ಹಿಂದುಳಿದ ತಾಲ್ಲೂಕುಗಳಿಗೂ ಅನುದಾನ ನೀಡಲಾಗುವುದು ಎಂದರು.
Subscribe to Updates
Get the latest creative news from FooBar about art, design and business.
ಪ್ರತ್ಯೇಕ ರಾಜ್ಯದ ಬೇಡಿಕೆ ತಾರತಮ್ಯ ನಿವಾರಣೆಗೆ ಪರಿಹಾರ ಅಲ್ಲ :ಸಿಎಂ
Related Posts
Add A Comment

