Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಆಯುರ್ವೇದ ವೈದ್ಯ ಪದ್ಧತಿಯಿಂದಆರೋಗ್ಯವಾಗಿರಲು ನೆರವು
(ರಾಜ್ಯ ) ಜಿಲ್ಲೆ

ಆಯುರ್ವೇದ ವೈದ್ಯ ಪದ್ಧತಿಯಿಂದಆರೋಗ್ಯವಾಗಿರಲು ನೆರವು

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪದವಿ-ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಘಟಿಕೋತ್ಸವ ಉದ್ಘಾಟಿಸಿದ ಎಂಎಲ್ಸಿ ಸುನೀಲಗೌಡ ಪಾಟೀಲ ಅಭಿಮತ

ವಿಜಯಪುರ: ಎವಿಎಸ್ ಆಯುರ್ವೇದ ವೈದ್ಯ ಪದ್ಧತಿ ಕೊರೊನಾ ಸಂಕಷ್ಟ ಸಮಯದಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಿಸಿ ಆರೋಗ್ಯವಾಗಿರಲು ಬಹಳಷ್ಟು ಜನರಿಗೆ ನೆರವಾಗಿದೆ ಎಂದು ವಿಧಾನ ಪರಿಷತ ಸದಸ್ಯ ಮತ್ತು ಬಿ.ಎಲ್.ಡಿ.ಇ ಸಂಸ್ಥೆಯ ನಿರ್ದೇಶಕ ಸುನೀಲಗೌಡ ಪಾಟೀಲ ಹೇಳಿದ್ದಾರೆ.
ಶನಿವಾರ ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎವಿಎಸ್ ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದಲ್ಲಿ 2017ನೇ ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರಧಾನ ಅಂಗವಾಗಿ ನಡೆದ ಘಟಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಎವಿಎಸ್ ಆಯುರ್ವೇದ ಮಹಾವಿದ್ಯಾಲಯ ಕೊರೊನಾ ಸಮಯದಲ್ಲಿ ರೋಗ ಪ್ರತಿರೋಧಕ ಚೂರ್ಣ ತಯಾರಿಸಿ ಕೊರೊನಾ ವಾರಿಯರ್ಸ್ ಮತ್ತು ಜನಸಾಮಾನ್ಯರಿಗೂ ಉಚಿತವಾಗಿ ವಿತರಿಸಿದೆ. ಇದು ಅಂದಿನ ಕಠಿಣ ದಿನಗಳಲ್ಲಿ ಜನರಲ್ಲಿ ರೋಗ ಪ್ರತಿರೋಧಕ ಶಕ್ತಿ ಹೆಚ್ಚಳಕ್ಕೆ ಅನುಕೂಲವಾಗಿದೆ. ಇನ್ನು ಮುಂದೆಯೂ ಕಾಲೇಜಿನಲ್ಲಿ ವಿದ್ಯಾರ್ಥಿಗಳು ಮತ್ತು ವೈದ್ಯರು ನಡೆಸುವ ಸಂಶೋಧನೆಗಳಿಗೆ ಸಕಲ ರೀತಿಯ ನೆರವು ನೀಡಲಾಗುವುದು. ಜನಸೇವೆಯೇ ನಮ್ಮ ಪ್ರಮುಖ ಧ್ಯೇಯವಾಗಿದ್ದು, ವಿದ್ಯಾರ್ಥಿಗಳಿಗೆ ಬೇಕಾಗುವ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ. ಹೀಗಾಗಿ ಹೆಚ್ಚೆಚ್ಚು ಸಂಶೋಧನೆ ನಡೆಸಬೇಕು ಎಂದು ಅವರು ಕರೆ ನೀಡಿದರು.
ಹುಬ್ಬಳ್ಳಿಯ ಆಯುರ್ವೇದ ಮಹಾವಿದ್ಯಾಲಯದ ಉಪಪ್ರಾಚಾರ್ಯ ಮತ್ತು ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್ ಸದಸ್ಯ ಡಾ. ಜೆ. ಆರ್. ಜೋಶಿ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಎಎಂಎಸ್ ಅಂತಿಮ ವರ್ಷದ ಪದವಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ವಿದ್ಯಾರ್ಥಿನಿಯರಾದ ಕಸ್ತೂರಿ ಹೀರೆಮಠ ಮತ್ತು ನಂದಾ ಕುರಿ ಅವರಿಗೆ ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಈ ಘಟಿಕೋತ್ಸವದಲ್ಲಿ ಒಟ್ಟು 44 ಪದವಿ ಮತ್ತು 4 ಸ್ನಾತಕೋತ್ತರ ಪದವಿ ಪ್ರಧಾನ ಮಾಡಲಾಯಿತು.
ಡಾ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ, ಉಪಪ್ರಾಚಾರ್ಯ ಡಾ. ಶಶಿಧರ ನಾಯಕ ಮುಂತಾದವರು ಉಪಸ್ಥಿತರಿದ್ದರು.
ಪ್ರಾಧ್ಯಾಪಕ ಡಾ. ಎಂ. ಎಚ್. ಬಿರಾದಾರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸುಸ್ಮಿತಾ ಹಾಗೂ ಸಂಗಡಿಗರು ಪ್ರಾರ್ಥಿಸಿದರು. ಡಾ. ಪ್ರಸಾದಶಕ್ತಿ ಗೆಣ್ಣೂರ ವಂದಿಸಿದರು.
.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.