Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಡಿ.೩೦-೩೧ ರ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ
(ರಾಜ್ಯ ) ಜಿಲ್ಲೆ

ಡಿ.೩೦-೩೧ ರ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಸಿಂದಗಿಯಲ್ಲಿ ಕಸಾಪ ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ಮನವಿ

ಸಿಂದಗಿ: ಗ್ರಾಮೀಣ ಬಾಗದ ಸೂಕ್ತ ಪ್ರತಿಭೆಗಳನ್ನು ಹೊರತರುವ ನಿಟ್ಟಿನಲ್ಲಿ ವಿಜಯಪುರದ ಇದೇ ೩೦ ಮತ್ತು ೩೧ ರಂದು ವಿಜಯಪುರದ ಕಂದಕಲ್ ಹಣಮಂತ್ರಾಯ ರಂಗ ಮಂದಿರದಲ್ಲಿ ಜಿಲ್ಲಾ ಮಹಿಳಾ ಸಾಹಿತ್ಯ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಈ ತಾಲೂಕಿನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಹಾಸೀಂಪೀರ ವಾಲೀಕಾರ ಮನವಿ ಮಾಡಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಸಾಹಿತ್ಯ ಸಮ್ಮೇಳನದ ಪೂರ್ವಭಾವಿಯಾಗಿ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸಾಹಿತ್ಯ ಪರಿಷತ್ತು ಬರೀ ಹಾಸೀಂಪೀರ ವಾಲಿಕಾರ ಹಾಗೂ ಕೆಲ ತಾಲೂಕು ಅದ್ಯಕ್ಷರ ಸ್ವತ್ತಲ್ಲ. ಅದು ಎಲ್ಲ ಕನ್ನಡಿಗರ ಸೊತ್ತು ಅದು ಎಲ್ಲರ ಮನೆಗಂಳದಲ್ಲಿ ಎಲ್ಲ ಮನದಲ್ಲಿ ಪ್ರಜ್ವಲಿಸಬೇಕು ಅಂತೆಯೇ ಸಾಹಿತ್ಯ ಪರಿಷತ್ತಿನ ಉದ್ದೇಶವಾಗಿದೆ. ಹಿಂದಿನ ಅಧ್ಯಕ್ಷರ ಕೆಲಸದ ಒತ್ತಡದ ಮಧ್ಯದಲ್ಲಿ ಕಳೆದ ೨ ವರ್ಷಗಳಿಂದ ಸಿಂದಗಿಯಲ್ಲಿ ಸಾಹಿತ್ಯ ಚಟುವಟಿಕೆಗಳಲ್ಲಿ ಕೊರತೆ ಉಂಟಾಗಿತ್ತು. ಅವುಗಳನ್ನು ಚುರಕುಗೊಳಿಸಲು ನೂತನ ಅದ್ಯಕ್ಷ ಶಿವಾನಂದ ಬಡಾನೂರ ಅವರನ್ನು ನೇಮಕ ಮಾಡಲಾಗಿದೆ. ಜ.೧೦ರ ಒಳಗಾಗಿ ಸಿಂದಗಿ ತಾಲೂಕು ಸಮ್ಮೇಳನ ಹಮ್ಮಿಕೊಳ್ಳುವ ಪ್ರಯತ್ನ ನಮ್ಮದಾಗಿದೆ ಎಂದು ತಿಳಿಸಿದ ಅವರು, ಸಿಂದಗಿ-ಇಂಡಿ ಭಾಗದಲ್ಲಿ ಮಹಿಳಾ ಜನಪದ ಸಾಹಿತಿಗಳು, ಸಾಂಸ್ಕೃತಿಕ ಕಲಾವಿದರು, ಕವಿಯತ್ರಿಯರು ಹೆಚ್ಚಿನ ಪ್ರಮಾಣದಲ್ಲಿದ್ದು ಸಾಹಿತ್ಯ ಕೃಷಿ ಹೊರಬರಲು ಅವರಿಗೆ ವೇದಿಕೆ ಕೊರತೆಯಿದೆ. ಮುಂದಿನ ದಿನಮಾನಗಳಲ್ಲಿ ವೇದಿಕೆ ಕಲ್ಪಿಸಿಕೊಡುವ ಕೆಲಸ ಸಾಹಿತ್ಯ ಪರಿಷತ್ತು ಪ್ರಯತ್ನಿಸುತ್ತದೆ. ಈ ಜಿಲ್ಲಾ ಸಮ್ಮೇಳನದಲ್ಲಿ ಸ್ಥಳಿಯರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಆಸಕ್ತರು ಹೆಸರುಗಳನ್ನು ಸೂಚಿಸಿದರೆ ಅವರಲ್ಲಿರುವ ಸೂಕ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ವೇದಿಕೆ ಕಲ್ಪಿಸಿಕೊಡಲಾಗುವುದು. ಇದು ಮಹಿಳೆಯರ ಕಾರ್ಯಕ್ರಮವಾಗಿದ್ದು ಶಾಸಕರು, ಸಚಿವರನ್ನು ಹೊರತು ಪಡಿಸಿದರೆ ಎಲ್ಲರೂ ಮಹಿಳೆಯರೇ ವೇದಿಕೆ ಮೇಲಿರುತ್ತಾರೆ. ಈ ಸಮ್ಮೇಳನದಲ್ಲಿ ಉಳಿದುಕೊಂಡ ಮಹಿಳಾ ಸಾಹಿತಿಗಳಿಗೆ ಮತ್ತೊಂದು ವೇದಿಕೆ ಕಲ್ಪಿಸೋಣ. ಸರ್ವಾಧ್ಯಕ್ಷರ ಆಯ್ಕೆಯಲ್ಲಿ ಜಿಲ್ಲೆಯ ಮಹಿಳಾ ಸಾಹಿತಿಗಳ ಹೆಸರುಗಳನ್ನು ಗುರುತಿಸಿ ಆಯ್ಕೆ ಮಾಡಲಾಗುವುದು. ಅದಕ್ಕೆ ಜಿಲ್ಲೆಯ ಎಲ್ಲ ಮಹಿಳಾ ಮಣಿಗಳ ಸಹಕಾರ ಮುಖ್ಯ. ಈ ಸಮ್ಮೇಳನವು ಅರ್ಥಪೂರ್ಣ ಹಾಗೂ ರಾಜ್ಯಕ್ಕೆ ಮಾದರಿಯಾಗಬೇಕು ಎಂದರು.
ಶಿಕ್ಷಕಿ ಶೋಬಾ ಚಿಗರಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಗೋಲ್ಲಾಳಪ್ಪಗೌಡ ಪಾಟೀಲ ಗೊಲಗೇರಿ, ಎಂ.ಎ.ಖತೀಬ, ಶಿಲ್ಪಾ ಕುದರಗೊಂಡ, ಕಸಾಪ ತಾಲೂಕಾಧ್ಯಕ್ಷ ಶಿವಾನಂದ ಬಡಾನೂರ, ಚಂದ್ರಶೇಖರ ನಾಗರಬೆಟ್ಟ, ಮಲ್ಲನಗೌಡ ಪಾಟೀಲ ಇಬ್ರಾಹೀಂಪೂರ, ಸಂಗನಗೌಡ ಪಾಟೀಲ ಅಗಸಬಾಳ, ಸುನಂದಾ ಯಂಪೂರೆ, ಎಸ್.ಬಿ. ಚೌಧರಿ, ವರ್ಷಾ ಪಾಟೀಲ, ಜಯಶ್ರೀ ಹದನೂರ, ಶಶಿಕಲಾ ಅಂಗಡಿ, ಬಸಮ್ಮ ನಾಗರಳ್ಳಿ, ನೀಲಾಂಬಿಕೆ ಶಿವಶಿಂಪಿ, ನೀಲಮ್ಮ ಬಡಿಗೇರ, ಸವಿತಾ ಕಲಬುರ್ಗಿ, ರೂಪಾ ಗಿರಣ ಸೇರಿದಂತೆ ಅನೇಕರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ

ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
  • ಅಗ್ನಿ ಅವಘಡ ತಡೆಗೆ ಜಾಗೃತಿ ಅತ್ಯಗತ್ಯ :ಹೂಗಾರ
    In (ರಾಜ್ಯ ) ಜಿಲ್ಲೆ
  • ನೀಟ್ & ಇತರ ಪರೀಕ್ಷೆಗಳ ಅವ್ಯವಸ್ಥೆ ಖಂಡಿಸಿ ಡಿಎಸ್ಸೆಸ್ ಮನವಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.