ವಿಜಯಪುರ: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಕಾರ್ಯದರ್ಶಿಗಳಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಡಿ.೨೧ ಹಾಗೂ ೨೨ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಡಿ.೨೧ ರಂದು ಬೆಳಿಗ್ಗೆ ೧೧ ಗಂಟೆಗೆ ತಾಳಿಕೋಟೆಗೆ ಆಗಮಿಸಿ, ಮತದಾರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಅಂಗವಾಗಿ ತಾಳಿಕೋಟೆ ತಾಲೂಕಿನ ವಿವಿಧ ಮತಗಟ್ಟೆಗಳಿಗೆ ಹಾಗೂ ಸಾರ್ವಜನಿಕರಿಗೆ ಭೇಟಿ ಮಾಡಲಿದ್ದಾರೆ. ಮಧ್ಯಾಹ್ನ ೩ ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ ೩-೩೦ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಧಿಕಾರಿಗಳೊಂದಿಗೆ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ನಡೆಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.
ಡಿ.೨೨ರಂದು ಬೆಳಿಗ್ಗೆ ೭ ಗಂಟೆಗೆ ವಿಜಯಪುರದಿಂದ ಬೆಳಗಾವಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
