Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ: ೪೯೨೨೧ ಪಾಲಕರು ಭಾಗಿ
(ರಾಜ್ಯ ) ಜಿಲ್ಲೆ

ಅಂಗನವಾಡಿ ಕೇಂದ್ರಗಳಲ್ಲಿ ಪಾಲಕರ ಸಭೆ: ೪೯೨೨೧ ಪಾಲಕರು ಭಾಗಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯ ೨೭೫೫ ವಿವಿಧ ಅಂಗನವಾಡಿಗಳಲ್ಲಿ ಡಿ.೧೬ ರಂದು ಪಾಲಕರ ಸಭೆ ಜರುಗಿದ್ದು, ಈ ಸಭೆಯಲ್ಲಿ ಅಂಗನವಾಡಿಗಳಲ್ಲಿ ದಾಖಲಾದ ೨,೨೦,೩೨೭ ಮಕ್ಕಳ ಪಾಲಕರಲ್ಲಿ ೪೯೨೨೧ ಪಾಲಕರು ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ಕೆ.ಕೆ.ಚವ್ಹಾಣ ಅವರು ತಿಳಿಸಿದ್ದಾರೆ.
ವಿಜಯಪುರ ನಗರ ಯೋಜನೆಯ ಜೋರಾಪುರ ಪೇಟ ಅಂಗನವಾಡಿ ಕೇಂದ್ರ ನಡೆದ ಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ನ್ಯಾಯಾಧೀಶ ಸಂತೋಷ ಕುಂದರ, ಅವರು ಮಾತನಾಡಿ, ಪಾಲಕರು ಮಕ್ಕಳನ್ನು ಮೊಬೈಲ್- ಟಿವಿ ಬಳಕೆಯಿಂದ ಹಾಗೂ ಬೇಕರಿ ಪದಾರ್ಥಗಳಿಂದ ದೂರವಿಡಬೇಕು .ಇದರಿಂದ ಮಕ್ಕಳ ಮೇಲೆ ದುಷ್ಪರಿಣಾ ಬೀಳುವುದರಿಂದ ಮಕ್ಕಳ ಪೋಷಣೆಯಲ್ಲಿ ಜಾಗೃತರಾಗಿರಬೇಕು ಎಂದು ಕಿವಿಮಾತು ಹೇಳಿದರು.
ಮಹಿಳೆಯರಿಗೆ ಉಚಿತವಾಗಿ ಸಿಗುವ ಕಾನೂನು ಸೇವೆಗಳ ಬಗ್ಗೆ ಹಾಗೂ ಕೌಟುಂಬಿಕ ದೌರ್ಜನ್ಯದಡಿಯಲ್ಲಿ ಪ್ರಕರಣ ದಾಖಲು ಮಾಡುವುದರ ಬಗ್ಗೆ ಸವಿವರವಾಗಿ ತಿಳಿಸಿದ ಅವರು, ಸಂವಿಧಾನದಲ್ಲಿ ಖಾತ್ರಿಪಡಿಸಿರುವ ಮಹಿಳೆಯರ ಹಕ್ಕುಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ರಕ್ಷಣೆ ಮಾಡುವುದು ಈ ಕಾಯ್ದೆಯ ಉದ್ದೇಶವಾಗಿದೆ. ಕುಟುಂಬದೊಳಗಾಗುವ ಯಾವುದೇ ಬಗೆಯ ಹಿಂಸೆಗೊಳಗಾದ ಮಹಿಳೆಯರಿಗೆ ಸಂಬಂಧಿಸಿದಂತೆ ಹೆಚ್ಚು ಪರಿಣಾಮಕಾರಿಯಾದ ಸಂರಕ್ಷಣೆ ಒದಗಿಸುವುದಕ್ಕಾಗಿ ಭಾರತ ಸರ್ಕಾರವು ಕೌಟುಂಬಿಕ ಹಿಂಸೆಯಿಂದ ಮಹಿಳೆಯರನ್ನು ಹೊರತರಲು ಮಹಿಳಾ ಸಂರಕ್ಷಣಾ ಅಧಿನಿಯಮ ೨೦೦೫ ಹಾಗೂ ನಿಯಮ ೨೦೦೬ನ್ನು ಅಕ್ಟೋಬರ್ ೨೬ ರಿಂದ ಜಾರಿಗೆ ತಂದಿರುತ್ತದೆ. ನಮ್ಮ ಕರ್ನಾಟಕ ರಾಜ್ಯದಲ್ಲಿ ಈ ಕಾಯ್ದೆಯನ್ನು ಜೂನ್ ೨೦೦೭ ರಿಂದ ಅನುಷ್ಠಾಗೊಳಿಸಲಾಗುತ್ತಿದೆ ಎಂದು ತಿಳಿಸಿದರು.
ಸಿಂದಗಿ ತಾಲೂಕಿನ ಕನ್ನೋಳಿ ಅಂಗನವಾಡಿ ಕೇಂದ್ರದ ಪಾಲಕರ ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಕೆ.ಕೆ.ಚವ್ಹಾಣ ಅವರು ಭಾಗವಹಿಸಿ ಮಾತನಾಡಿದರು.
ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವುದು, ಶಾಲಾ ಪೂರ್ವ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವುದು ಬಾಲ್ಯ ವಿವಾಹ ತಡೆಗಟ್ಟುವುದರ ಕುರಿತು, ಕೌಟುಂಬಿಕ ದೌರ್ಜನ್ಯದಡಿ ಕಾನೂನು ಅರಿವು ಕಾರ್ಯಕ್ರಮದ ಬಗ್ಗೆ, ಮಕ್ಕಳ ಹಕ್ಕು ಮತ್ತು ರಕ್ಷಣೆ ಬಗ್ಗೆ, ಗರ್ಬಿಣಿ-ಬಾಣಂತಿ ಮಕ್ಕಳಲ್ಲಿ ರಕ್ತ ಹೀನತೆ ತಡೆಗಟ್ಟುವ ಬಗ್ಗೆ, ಅಪೌಷ್ಠಿಕತೆ ನಿವಾರಣೆ, ಗರ್ಭಿಣಿ ಮಹಿಳೆಗೆ ಮತ್ತು ಮಕ್ಕಳಿಗೆ ಸರಿಯಾದ ಸಮಯಕ್ಕೆ ಚುಚ್ಚುಮದ್ದು ಹಾಕಿಸುವ ಕುರಿತು, ತಾಯಿ ಮತ್ತು ಮಗುವಿನ ಮರಣ ತಪ್ಪಿಸುವುದರ ಬಗ್ಗೆ , ೩ ರಿಂದ ೬ ವರ್ಷದ ಮಕ್ಕಳಿಗಾಗಿ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಭಾಗ್ಯಲಕ್ಷ್ಮೀ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ ಸೇರಿ ಇಲಾಖೆ ಹಾಗೂ ಸರಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ವಿನಿಮಯ ಮಾಡಕೊಳ್ಳಲಾಯಿತು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.