ದತ್ತಿ ಉಪನ್ಯಾಸ | ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಪ್ರಧಾನ | ಇಂದುಮತಿ ಲಮಾಣಿ ಅವರ ’ಮಠ’ ಕಾದಂಬರಿ ಲೋಕಾರ್ಪಣೆ
ಬಸವನಬಾಗೇವಾಡಿ: ೧೨ ನೇ ಶತಮಾನದ ಬಸವಾದಿ ಶರಣರು ನಿಸ್ವಾರ್ಥ ಕಾಯಕ, ದಾಸೋಹಕ್ಕೆ ಹೆಚ್ಚು ಮಹತ್ವ ನೀಡುವ ಈ ಸಿದ್ಧಾಂತವನ್ನು ಸಮಾಜಕ್ಕೆ ಕೊಡುಗೆಯಾಗಿ ನೀಡಿದ್ದಾರೆ ಎಂದು ಬಸವನಬಾಗೇವಾಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ. ಎನ್.ಬಿ.ಹೊಸಮನಿ ಹೇಳಿದರು.
ಪಟ್ಟಣದ ಹುಡ್ಕೋ ಕಾಲನಿ ಹತ್ತಿರವಿರುವ ಇಂದುಮತಿ ಲಮಾಣಿ ಅವರ ತೋಟದ ಮನೆಯಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು, ವಿಜಯಪುರದ ಮಹಿಳಾ ಸ್ನೇಹ ಸಾಹಿತ್ಯ ಸಂಗಮದ ಸಹಯೋಗದಲ್ಲಿ ಗುರುವಾರ ದಿ.ಶಂಕರ ಡಾಕಪ್ಪ ಲಮಾಣಿ ಸ್ಮರಣಾರ್ಥ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ ಕಾರ್ಯಕ್ರಮ ಹಾಗೂ ಶಂಕರಶ್ರೀ ದತ್ತಿನಿಧಿ ಪ್ರಶಸ್ತಿ ಪ್ರಧಾನ ಹಾಗೂ ಇಂದುಮತಿ ಲಮಾಣಿ ಅವರ ಬರೆದ ಮಠ ಕಾದಂಬರಿ ಲೋಕಾರ್ಪಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರು ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದರು. ನಾಡಿನಲ್ಲಿ ಶರಣ ಸಾಹಿತ್ಯ ಪರಿಷತ್ತು ನಿರಂತರವಾಗಿ ಬಸವಾದಿ ಶರಣರ ವಿಚಾರಗಳನ್ನು ಸಮಾಜಕ್ಕೆ ಮುಟ್ಟಿಸುವಲ್ಲಿ ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ. ಶರಣರು ಹಾಕಿಕೊಟ್ಟ ಮಾರ್ಗ ನಮ್ಮೆಲ್ಲರಿಗೂ ದಾರಿದೀಪವಾಗಿದೆ ಎಂದರು.
ಕನ್ನಡ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಲಲಿತಾ ಹೊಸಪ್ಯಾಟಿ ಅವರು ಮೂಢನಂಬಿಕೆಗಳು ಹಾಗೂ ಮಾನವೀಯ ಮೌಲ್ಯಗಳು ಕುರಿತು ಉಪನ್ಯಾಸ ನೀಡಿ ಮಾತನಾಡಿದರು.
ಸಾನಿಧ್ಯ ವಹಿಸಿದ್ದ ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಅಧ್ಯಕ್ಷತೆ ವಹಿಸಿದ್ದ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವೀರಣ್ಣ ಮರ್ತುರ, ಸಾಹಿತಿ ಇಂದುಮತಿ ಲಮಾಣಿ ಮಾತನಾಡಿದರು.
ಸ್ಥಳೀಯ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ಅಶೋಕ ಹಂಚಲಿ ಕೃತಿ ಪರಿಚಯಿಸಿದರು.
ವೇದಿಕೆಯಲ್ಲಿ ನಿವೃತ್ತ ಉಪಪ್ರಾಚಾರ್ಯ ಎಸ್.ಎಸ್.ಝಳಕಿ, ನಿವೃತ್ತ ಪ್ರಾಧ್ಯಾಪಕ ಪಿ.ಎಲ್.ಹಿರೇಮಠ, ಕದಳಿ ವೇದಿಕೆಯ ಅಧ್ಯಕ್ಷೆ ಸಾವಿತ್ರಿ ಕಲ್ಯಾಣಶೆಟ್ಟಿ ಇದ್ದರು. ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕ್ರತ ಮಕ್ಕಳ ಸಾಹಿತಿ ಪ.ಗು.ಸಿದ್ದಾಪೂರ ಅವರನ್ನು ಸನ್ಮಾನಿಸಲಾಯಿತು.
ವೈ.ಕೆ.ಪತ್ತಾರ ಸ್ವಾಗತಿಸಿದರು. ಎಸ್.ಐ. ಮನಗೂಳಿ ನಿರೂಪಿಸಿದರು. ಆರ್.ಜಿ.ಅಳ್ಳಗಿ ವಂದಿಸಿದರು.

