Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಗಟ್ಟಿ ಧ್ವನಿ ಎತ್ತಿದಕ್ಕೆ ಉತ್ತರ ಕರ್ನಾಟಕ ಚರ್ಚೆಗೆ ಅವಕಾಶ
(ರಾಜ್ಯ ) ಜಿಲ್ಲೆ

ಗಟ್ಟಿ ಧ್ವನಿ ಎತ್ತಿದಕ್ಕೆ ಉತ್ತರ ಕರ್ನಾಟಕ ಚರ್ಚೆಗೆ ಅವಕಾಶ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಪ್ರತಿಭಾ ಕಾರಂಜಿ & ಕಲೋತ್ಸವ ಉದ್ಘಾಟಿಸಿದ ಶಾಸಕ ಬಸನಗೌಡ ಪಾಟೀಲ ಸ್ಪಷ್ಠನೆ

ವಿಜಯಪುರ: ಕಳೆದ 11 ಅಧಿವೇಶನದಲ್ಲಿ ಕೊನೆಗೆ ಒಂದು ದಿನ ಕಾಟಾಚಾರಕ್ಕೆ ಎಂಬಂತೆ ಉತ್ತರ ಕರ್ನಾಟಕ ಬಗ್ಗೆ ಚರ್ಚಿಸಲಾಗುತ್ತಿತ್ತು. ಈ ಬಾರಿ ಮೊದಲ ದಿನವೇ ನಾನು ಗಟ್ಟಿ ಧ್ವನಿ ಎತ್ತಿದ್ದರಿಂದ ಮೊದಲ ವಾರದಲ್ಲೇ ಸಮಗ್ರವಾಗಿ ಚರ್ಚಿಸಲು ಅವಕಾಶ ದೊರಕಿತು ಎಂದು ನಗರ ಶಾಸಕ ಬಸನಗೌಡ ರಾ.ಪಾಟೀಲ ಯತ್ನಾಳ ಅವರು ಹೇಳಿದರು.
ನಗರದ ಸಿದ್ಧೇಶ್ವರ ಸಂಸ್ಥೆಯ ಅಟಲ್ ಬಿಹಾರಿ ವಾಜಪೇಯಿ ಶಾಲೆಯಲ್ಲಿ ಶನಿವಾರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ನಗರ ವಲಯ ಹಾಗೂ ಅಟಲ್ ಬಿಹಾರಿ ವಾಜಪೇಯಿ ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿವೇಶನದಲ್ಲಿ ಮೂರು ದಿನಗಳ ಕಾಲ ಕೈಗಾರಿಕೆ, ವಿಮಾನ ನಿಲ್ದಾಣ, ಕೋಲ್ಡ್ ಸ್ಟೋರೇಜ್, ನೀರಾವರಿ ಸೇರಿದಂತೆ ವಿವಿಧ ಯೋಜನೆಗಳಲ್ಲಿ ಹಾಗೂ ರಾಜಕೀಯವಾಗಿ ಉತ್ತರ ಕರ್ನಾಟಕ ಭಾಗಕ್ಕೆ ಆಗಿರುವ ಅನ್ಯಾಯದ ಕುರಿತಂತೆ ಗಮನಸೆಳೆದು, ಅಭಿವೃದ್ಧಿ ಒತ್ತು ನೀಡಲು ಸರ್ಕಾರಕ್ಕೆ ಆಗ್ರಹಿಸಲಾಯಿತು. ನಮ್ಮ ಬೇಡಿಕೆಗಳ ಒತ್ತಾಯಕ್ಕೆ ಸಕರಾತ್ಮಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಂದಿಸಿ, ಉತ್ತರ ಕರ್ನಾಟಕ ಅಭಿವೃದ್ಧಿಗೆ ಆದ್ಯತೆ ನೀಡುವುದಲ್ಲದೆ, ವಿಜಯಪುರ ನಗರ ಮತಕ್ಷೇತ್ರ ಅಭಿವೃದ್ಧಿಗೂ ಹೆಚ್ಚಿನ ಅನುದಾನ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ವಿಜಯಪುರ ನಗರ ಮತಕ್ಷೇತ್ರ ಸಾಕಷ್ಟು ಅಭಿವೃದ್ಧಿಗೊಂಡಿದೆ. ನಗರದಲ್ಲಿಯೇ ಬರುವ ನಾಗಠಾಣ ಮತಕ್ಷೇತ್ರದ ನಾಲ್ಕು ವಾರ್ಡಗಳು ಅಭಿವೃದ್ಧಿಯಿಂದ ವಂಚಿತಗೊಂಡಿವೆ. ಶಾಸಕರಾದ ವಿಠ್ಠಲ ಕಟಕಧೋಂಡ ಮತ್ತು ನಾನು ಅಭಿವೃದ್ಧಿ ವಿಚಾರದಲ್ಲಿ ಪಕ್ಷಾತೀತವಾಗಿ ಕಾರ್ಯನಿರ್ವಹಿಸುವ ಮೂಲಕ ಸಂಪೂರ್ಣವಾಗಿ ವಿಜಯಪುರ ನಗರವನ್ನು ಅಭಿವೃದ್ಧಿಪಡಿಸಲು ಶ್ರಮಿಸುವುದಾಗಿ ಹೇಳಿದರು.
ಸಾಮಾಜಿಕ, ಧಾರ್ಮಿಕ, ಆರೋಗ್ಯ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ನೀಡುವ ಸಿದ್ದೇಶ್ವರ ಸಂಸ್ಥೆ ಶೈಕ್ಷಣಿಕ ಕ್ಷೇತ್ರದಲ್ಲಿಯೂ ಮುಂದಿದೆ. ಬಡ ಮಕ್ಕಳಿಗಾಗಿ ನೀಲಕಂಠೇಶ್ವರ ಶಾಲೆ ಕಾರ್ಯನಿರ್ವಹಿಸುತ್ತಿದ್ದು, ಮುಂದಿನ ಶೈಕ್ಷಣೀಕ ವರ್ಷ ಜೂನ್ ತಿಂಗಳಿಂದ ನಮ್ಮ ಸಂಸ್ಥೆಯಿಂದಲೇ ಈ ಶಾಲೆ ಮಕ್ಕಳಿಗೆ ಮಧ್ಯಾಹ್ನ ಬಿಸಿ ಊಟ, ಬ್ಯಾಗ್, ಪುಸ್ತಕಗಳನ್ನು ಉಚಿತವಾಗಿ ನೀಡಲಾಗುವುದು ಎಂದರು.
ಶಾಸಕರಾದ ವಿಠ್ಠಲ ಕಡಕಧೋಂಡ, ನೌಕರ ಸಂಘದ ಜಿಲ್ಲಾಧ್ಯಕ್ಷ ಸುರೇಶ ಶಡಶ್ಯಾಳ ಮಾತನಾಡಿದರು.
ಸಿದ್ದೇಶ್ವರ ಸಂಸ್ಥೆ ಚೇರಮನ್ ಬಸಯ್ಯ ಹಿರೇಮಠ, ಉಪಾಧ್ಯಕ್ಷರಾದ ಸಂಗನಬಸಪ್ಪ ಸಜ್ಜನ, ಎ.ಎಫ್.ಅರಳಿಮಟ್ಟಿ, ಎ.ಎಸ್.ಹಕ್ಕಿ, ವೀರಭದ್ರಪ್ಪ, ಬಸವರಾಜ ಗಿರಿನಿವಾಸ , ಸದಾಶಿವ ದಳವಾಯಿ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಇದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.