ರಾಜ್ಯಸಭೆಯಲ್ಲಿ ಕಾಂಗ್ರೆಸ್ ವಿರುದ್ಧ ಅಮಿತ್ ಶಾ ವಾಗ್ದಾಳಿ | ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದೆಂದು ಸ್ಪಷ್ಠನೆ
ನವದೆಹಲಿ: 370ನೇ ವಿಧಿ ಕುರಿತು ಸುಪ್ರೀಂ ಕೋರ್ಟ್‌ನ ತೀರ್ಪಿನ ನಂತರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಸಭೆಯಲ್ಲಿ ಈ ಬಗ್ಗೆ ಮಾತನಾಡಿದ್ದು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 24 ಸ್ಥಾನಗಳನ್ನು ಕಾಯ್ದಿರಿಸಲಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಪಾಕ್ ಆಕ್ರಮಿತ ಕಾಶ್ಮೀರ ಭಾರತಕ್ಕೆ ಸೇರಿದ್ದು, ಅದು ನಮ್ಮದು, ಅದನ್ನು ನಮ್ಮಿಂದ ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಮತ್ತೊಮ್ಮೆ ಹೇಳುತ್ತಿದ್ದೇನೆ ಎಂದರು.
ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಆರ್ಟಿಕಲ್ 370 ರ ತೀರ್ಪು ನೀಡುವಾಗ ಜಮ್ಮು ಮತ್ತು ಕಾಶ್ಮೀರವು ಭಾರತದೊಂದಿಗೆ ವಿಲೀನಗೊಂಡ ನಂತರ ಆಂತರಿಕ ಸಾರ್ವಭೌಮತ್ವದ ಹಕ್ಕನ್ನು ಹೊಂದಿಲ್ಲ ಎಂದು ಹೇಳಿದ್ದರು. ಆರ್ಟಿಕಲ್ 370 ತಾತ್ಕಾಲಿಕ ನಿಬಂಧನೆಯಾಗಿದೆ ಎಂದು ಅಮಿತ್ ಶಾ ಹೇಳಿದರು.
ಕಾಶ್ಮೀರದ ವಿಲೀನಕ್ಕೆ ಜವಾಹರಲಾಲ್ ನೆಹರು ಹೊಣೆಗಾರ ಎಂದು ಅಮಿತ್ ಶಾ ಹೇಳಿದರು. ನೆಹರೂ ಕಾಶ್ಮೀರವನ್ನು ಅರ್ಧದಷ್ಟು ಬಿಟ್ಟು ಹೋದರು. ಅಕಾಲಿಕ ಕದನ ವಿರಾಮ ಇಲ್ಲದಿದ್ದರೆ ಇಂದು ಪಾಕ್ ಆಕ್ರಮಿತ ಕಾಶ್ಮೀರ ಇರುತ್ತಿರಲಿಲ್ಲ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಕೇಂದ್ರ ಗೃಹ ಸಚಿವರು ಹೇಳಿದರು.
ಜಮ್ಮು ಮತ್ತು ಕಾಶ್ಮೀರ ಮೀಸಲಾತಿ (ತಿದ್ದುಪಡಿ) ಮಸೂದೆ, 2023 ಮತ್ತು ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ (ತಿದ್ದುಪಡಿ) ಮಸೂದೆ, 2023 ಅನ್ನು ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ. ಎರಡೂ ವಿಧೇಯಕಗಳನ್ನು ಕಳೆದ ವಾರ ಲೋಕಸಭೆ ಅಂಗೀಕರಿಸಿತ್ತು.

