ಸಿಂದಗಿ: ವೀರಶೈವ ಧರ್ಮಗ್ರಂಥ ಸಿದ್ಧಾಂತ ಶಿಖಾಮಣಿ ಕರ್ತೃ ಸಾಲೋಟಗಿಯ ಶಿವಾಚಾರ್ಯರ ಹೆಸರಿನಲ್ಲಿ ಪಟ್ಟಣದ ಲಿಂಗೈಕ್ಯ ಚೆನ್ನಯ್ಯ ಸ್ವಾಮಿ ಮತ್ತು ಲಿಂಗೈಕ್ಯ ಶಾರದಾದೇವಿ ಜನಕಲ್ಯಾಣ ಫೌಂಡೇಶನ್ ಕೊಡ ಮಾಡುವ ಶ್ರೀ ಶಿವಯೋಗಿ ಶಿವಾಚಾರ್ಯ ರಾಷ್ಟ್ರೀಯ ಪ್ರಶಸ್ತಿಗೆ ಶ್ರೀಶೈಲ ಮಲ್ಲಿಕಾರ್ಜುನ ಸಮಾಜೋತ್ತಾನ ಫೌಂಡೇಶನ್ ಟ್ರಸ್ಟ್ ಅಧ್ಯಕ್ಷರಾದ ಶ್ರೀ ಚೆನ್ನಸಿದ್ದರಾಮ ಪಂಡಿತರಾಧ್ಯಾ ಶಿವಾಚಾರ್ಯರು ಭಾಜನರಾಗಿದ್ದಾರೆ.
ಪ್ರಶಸ್ತಿ ೧ ಲಕ್ಷ ನಗದು, ಪ್ರಶಸ್ತಿ ಪತ್ರ ಒಳಗೊಂಡಿದೆ. ನಗರದ ಸಾರಂಗಮಠದಲ್ಲಿ ಡಿಸೆಂಬರ್ ೧೮ ರಂದು ಸಂಜೆ ೭ ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ .
ಈ ವೇಳೆ ಸಾರಂಗಮಠದ ಪೀಠಾಧ್ಯಕ್ಷರಾದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಕೊಣ್ಣೂರಿನ ಹೊರಗಿನ ಮಠದ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಶಾಸಕ ಅಶೋಕ ಮನಗೂಳಿ, ಜಗದೀಶ್ ಗುಡಗುಂಟಿ ಸೇರಿದಂತೆ ಅನೇಕ ಮಠಾಧೀಶರು ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ಶ್ರೀ ಚನ್ನವೀರ ಮಹಾಸ್ವಾಮೀಜಿ ಪ್ರತಿಷ್ಠಾನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
ಇಂದು ಚೆನ್ನಸಿದ್ದರಾಮ ಶ್ರೀಗಳಿಗೆ “ಶ್ರೀ ಶಿವಯೋಗಿ ಶಿವಾಚಾರ್ಯ” ಪ್ರಶಸ್ತಿ ಪ್ರದಾನ
Related Posts
Add A Comment

