ಡಿ.24ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024
ವಿಜಯಪುರ: ಕೋಟಿವೃಕ್ಷ ಅಭಿಯಾನ ಅಂಗವಾಗಿ ಡಿಸೆಂಬರ್ 24 ರವಿವಾರ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2024 ಪ್ರೊತ್ಸಾಹಿಸಲು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳರವರು 10ಲಕ್ಷ ರೂ. ಪ್ರಾಯೋಜಕತ್ವ ನೀಡಿದ್ದಾರೆ.
ವಿಜಯಪುರ ಜಿಲ್ಲೆಯಲ್ಲಿ ಸಸಿಗಳನ್ನು ನೆಟ್ಟು, ಮರಗಳನ್ನಾಗಿ ಬೆಳೆಸಿ, ಅರಣ್ಯ ಪ್ರಮಾಣ ಹೆಚ್ಚಿಸುವುದು. ವಿಜಯಪುರ ನಗರದಲ್ಲಿನ ವಿವಿಧ ಐತಿಹಾಸಿಕ ಸ್ಮಾರಕಗಳ ಕುರಿತು ಜಾಗೃತಿ ಮೂಡಿಸಿ, ಹೆಚ್ಚಿನ ಪ್ರವಾಸಿಗರನ್ನು ಆಕರ್ಷಿಸಿ, ತನ್ಮೂಲಕ ನಗರದಲ್ಲಿ ಆರ್ಥಿಕ ಚಟುವಟಿಕೆಗಳು ಹೆಚ್ಚಿಸುವಂತೆ ಜಾಗೃತಿ ಮೂಡಿಸುವ ಹೆರಿಟೇಜ್ ರನ್ ಪ್ರೊತ್ಸಾಹಿಸಲು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಅಧ್ಯಕ್ಷತೆಯ ಸಿದ್ಧಸಿರಿ ಸೌಹಾರ್ದ ಸಹಕಾರಿ ನಿ.ದಿಂದ 10ಲಕ್ಷ ರೂ.ಗಳ ಚೆಕ್ ಸಿದ್ಧಸಿರಿ ಉಪಾಧ್ಯಕ್ಷ ಬಸಯ್ಯ ಹಿರೇಮಠ, ನಿರ್ದೇಶಕ ರಾಮನಗೌಡ ಪಾಟೀಲ ಯತ್ನಾಳ ಇಂದು ಕೋಟಿವೃಕ್ಷ ಅಭಿಯಾನ ಸಂಚಾಲಕ
ಪ್ರೊ.ಮುರುಗೇಶ ಪಟ್ಟಣಶೆಟ್ಟಿ ಅವರಿಗೆ ನೀಡಿದರು.
ಈ ಸಂದರ್ಭದಲ್ಲಿ ಕೋಟಿವೃಕ್ಷ ಅಭಿಯಾನದ ಡಾ.ಮಹಾಂತೇಶ ಬಿರಾದಾರ, ಶಿವನಗೌಡ ಪಾಟೀಲ, ಸಂತೋಷ ಔರಸಂಗ, ಅಮೀತ ಬಿರಾದಾರ, ಸೋಮು ಮಠ, ಸಿದ್ಧಸಿರಿ ನಿರ್ದೇಶಕರಾದ ಶಿವಾನಂದ ಅಣೆಪ್ಪನವರ, ಸಾಯಿಬಾಬಾ ಸಿಂದಗೇರಿ, ಜಗದೀಶ ಕ್ಷತ್ರಿ, ಪ್ರಭುಗೌಡ ದೇಸಾಯಿ, ರಮೇಶ ಬಿರಾದಾರ ಮತ್ತಿತರರು ಉಪಸ್ಥಿತರಿದ್ದರು.

