ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಮಂಗಳವಾರ ಬೆಳಿಗ್ಗೆ ೧೦ಗಂಟೆಗೆ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕುರಿತು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಈ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಿಂಗಪ್ಪ ಗರಗ ಉದ್ಘಾಟಿಸುವರು. ಸಿವಿಲ್ ನ್ಯಾಯಾಧೀಶ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಸಂಪತ್ತ ಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ತಹಶೀಲ್ದಾರ ಬಲರಾಮ ಕಟ್ಟಿಮನಿ, ಪ್ರಭಾರ ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಯುವರಾಜ ಹನಗಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಸಿಪಿಐ ಮಲ್ಲಿಕಾರ್ಜುನ ತುಳಸಿಗೇರಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ ಆಗಮಿಸಿದ್ದಾರೆ. ಮಾನವ ಹಕ್ಕುಗಳು ಹಾಗೂ ಗ್ರಾಹಕರ ಹಿತರಕ್ಷಣಾ ಕಾಯ್ದೆಯ ಕುರಿತು ನ್ಯಾಯವಾದಿ ಎನ್.ಆರ್.ಮೊಕಾಶಿ ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Subscribe to Updates
Get the latest creative news from FooBar about art, design and business.
Related Posts
Add A Comment
