ವಿಜಯಪುರ: ಇಂಡೋ-ಪಾಕ್ ೧೯೭೧ರ ಯುದ್ಧದಲ್ಲಿ ಭಾಗವಹಿಸಿದ ಕೊಡುಗೆ ಯೋಧರು ಇಂದಿನ ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು, ನಮ್ಮೆಲ್ಲರಿಗೂ ಹೆಮ್ಮೆ ಹಾಗೂ ಇಂದಿನ ಯುವಕರಿಗೆ ಮಾದರಿಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.
ನಗರದ ಸೈನಿಕ ಶಾಲೆಯ ಸಭಾಭವನದಲ್ಲಿ ಇತ್ತಿಚಿಗೆ ಹಮ್ಮಿಕೊಂಡ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಂದ ದೇಶಭಕ್ತಿ ಗೀತೆ, ಯುದ್ಧದಲ್ಲಿ ಪಾಲ್ಗೊಂಡ ಯೋಧರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವಣೆ, ಸೈನಿಕ ಶಾಲೆಯ ಪ್ರಾಂಶುಪಾಲ ಗ್ರೂಪ್ ಕ್ಯಾಪ್ಟನ್ ಪ್ರತಿಭಾ ಬಿಷ್ಟ, ಜಿಲ್ಲಾ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಅಧಿಕಾರಿಗಳು ಮಾಜಿ ಸೈನಿಕರು ಸೈನಿಕ ಶಾಲೆಯ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

