ವಿಜಯಪುರ: ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ ಹಾಗೂ ನಗರದವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ ವತಿಯಿಂದ ನಡೆದ ತಾಲ್ಲೂಕ ಮಟ್ಟದ ಪ್ರತಿಭಾ ಕಾರಂಜಿಯ ವಿವಿಧ ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಬಿಇಓ ಬಸವರಾಜ ತಳವಾರ ಪ್ರಶಸ್ತಿ ಪತ್ರ ನೀಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಪ್ರತಿ ಮಗುವಿನಲ್ಲೂ ಒಂದು ವಿಶೇಷ ಪ್ರತಿಭೆ ಇದ್ದೇ ಇರುತ್ತದೆ. ಆ ಪ್ರತಿಭೆಯನ್ನು ಹೊರ ಹಾಕಲು ಪ್ರತಿಭಾ ಕಾರಂಜಿ ವೇದಿಕೆ ಸಹಕಾರಿಯಾಗಿದ್ದು, ಜಿಲ್ಲಾ ಮಟ್ಟದಲ್ಲೂ ಸಹ ಆಯ್ಕೆಯಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಲಿ ಎಂದು ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನೌಕರ ಸಂಘದ ಜಿಲ್ಲಾ ಅಧ್ಯಕ್ಷ ಸುರೇಶ ಶಡಶ್ಯಾಳ, ಖಜಾಂಚಿ ಜುಬೇರ ಕೇರೂರ, ನಾರಾಯಣ ಬಂಡಗಾರ, ಎ.ಎಪ್.ಅರಳಿಮಟ್ಟಿ, ಬಸಿರ್ ನದಾಪ್, ಎ.ಎಸ್.ಹಕ್ಕಿ, ವೀರಭದ್ರಪ್ಪ, ಬಸವರಾಜ ಗಿರಿನಿವಾಸ, ಶಿಕ್ಷಕರು ಹಾಗೂ ಮಕ್ಕಳು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

