Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ವಿಪಕ್ಷಗಳ 90 ಸಂಸದರ ಅಮಾನತು!
(ರಾಜ್ಯ ) ಜಿಲ್ಲೆ

ವಿಪಕ್ಷಗಳ 90 ಸಂಸದರ ಅಮಾನತು!

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಭದ್ರತಾ ಲೋಪದ ಬಗ್ಗೆ ಅಮಿತ್ ಶಾ ಪ್ರತಿಕ್ರಿಯೆಗೆ ಪಟ್ಟು | ಲೋಕಸಭೆಯ ಇತಿಹಾಸದಲ್ಲೇ ಅಚ್ಚರಿಯ ಬೆಳವಣಿಗೆ!

ನವದೆಹಲಿ: ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನವನ್ನು ಉದ್ದೇಶಿಸಿ ಮಾತನಾಡಬೇಕೆಂದು ಒತ್ತಾಯಿಸಿ ಸಂಸತ್ತಿನಲ್ಲಿ ಪ್ರತಿಭಟನೆ ನಡೆಸಿದ 30 ಪ್ರತಿಪಕ್ಷಗಳ ಸಂಸದರನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿತ್ತು. ಇದೀಗ ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ಒಟ್ಟು 90 ಸಂಸದರನ್ನು ಅಧಿವೇಶನದಿಂದ ಅಮಾನತು ಮಾಡಲಾಗಿದ್ದು, ಲೋಕಸಭೆಯ ಇತಿಹಾಸದಲ್ಲೇ ಅಚ್ಚರಿಯ ಬೆಳವಣಿಗೆ ಎಂದು ಹೇಳಲಾಗಿದೆ.
ಸಂಸತ್ತಿನ ಭದ್ರತಾ ಲೋಪದ ಬಗ್ಗೆ ಗೃಹ ಸಚಿವರ ಹೇಳಿಕೆಗೆ ಒತ್ತಾಯಿಸಿದ 13 ವಿರೋಧ ಪಕ್ಷದ ಸಂಸದರನ್ನು ಕಳೆದ ವಾರ ಅಮಾನತು ಮಾಡಲಾಗಿತ್ತು. ಇದಲ್ಲದೆ ಇನ್ನೂ ಮೂವರು ಸಂಸದರನ್ನು ವಿಶೇಷಾಧಿಕಾರ ಸಮಿತಿ ವರದಿ ಬರುವವರೆಗೆ ಅಮಾನತುಗೊಳಿಸಲಾಗಿತ್ತು. ಇಂದು ಬೆಳಿಗ್ಗೆ ಸಂಸತ್ತಿನಲ್ಲಿ ಭದ್ರತಾ ಲೋಪದ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಮಾತನಾಡುವಂತೆ ಪಟ್ಟು ಹಿಡಿದ 30 ಸಂಸದರನ್ನು ಅಮಾನತು ಮಾಡಲಾಗಿತ್ತು. ರಾಜ್ಯ ಸಭೆಯಲ್ಲೂ ಪ್ರತಿಪಕ್ಷಗಳ ಸಂಸದರು ಅಮಿತ್‌ ಶಾ ಹೇಳಿಕೆಗೆ ಪಟ್ಟು ಹಿಡಿದಿದ್ದು ರಾಜ್ಯ ಸಭೆಯಿಂದ ಕೂಡ 46 ಸಂಸದರನ್ನು ಅಮಾನತು ಮಾಡಲಾಗಿದೆ.
ರಾಜ್ಯಸಭೆಯಿಂದ ಕಾಂಗ್ರೆಸ್‌ನ ಜೈರಾಮ್ ರಮೇಶ್, ರಣದೀಪ್ ಸುರ್ಜೇವಾಲಾ ಮತ್ತು ಕೆಸಿ ವೇಣುಗೋಪಾಲ್ ಸೇರಿ 46 ಸಂಸದರನ್ನು ಅಮಾನತು ಮಾಡಲಾಗಿದೆ.
ಲೋಕಸಭೆಯಿಂದ ವಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಮತ್ತು ಉಪನಾಯಕ ಗೌರವ್ ಗೊಗೊಯ್, ತೃಣಮೂಲ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಕಾಕೋಲಿ ಘೋಷ್ ದಸ್ತಿದಾರ್, ಸೌಗತ ರೇ, ಸತಾಬ್ದಿ ರಾಯ್ ಮತ್ತು ಡಿಎಂಕೆ ಸಂಸದರಾದ ಎ ರಾಜಾ ಮತ್ತು ದಯಾನಿಧಿ ಮಾರನ್ ಸೇರಿದ್ದಾರೆ.
ಅಮಾನತು ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅಧೀರ್ ರಂಜನ್ ಚೌಧರಿ, ಸರ್ಕಾರವು ಸರ್ವಾಧಿಕಾರದ ರೀತಿಯಲ್ಲಿ ವರ್ತಿಸುತ್ತಿದೆ ಮತ್ತು ಸಂಸತ್ತನ್ನು ಬಿಜೆಪಿ ಪ್ರಧಾನ ಕಚೇರಿಯಂತೆ ಪರಿಗಣಿಸುತ್ತಿದೆ. ಅಧಿವೇಶನ ಆರಂಭವಾದಾಗಿನಿಂದ ಪ್ರತಿಪಕ್ಷಗಳು ಸರ್ಕಾರಕ್ಕೆ ಸಹಕಾರ ನೀಡುತ್ತಿವೆ. ಆದರೆ ಸರಕಾರವು ಸರ್ವಾಧಿಕಾರದ ಉತ್ತುಂಗವನ್ನು ಮೀರಿದೆ. ಅವರಿಗೆ ಬಹುಮತವಿದೆ, ಅವರು ಅಧಿಕಾರವನ್ನು ಹಿಡಿದಿದ್ದಾರೆ. ಅವರು ಸಂಸತ್ತನ್ನು ಪಕ್ಷದ ಕಚೇರಿಯಂತೆ ನಡೆಸಲು ಬಯಸುತ್ತಾರೆ. ಆದರೆ ಅದು ಸಂಭವಿಸಬಾರದು ಎಂದು ಅವರು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಗೌರವ್ ಗೊಗೊಯ್, ಬಿಜೆಪಿ ಸರ್ಕಾರವು ಪ್ರತಿಪಕ್ಷಗಳನ್ನು ಕೆಡವಲು ಪ್ರಯತ್ನಿಸುತ್ತಿದೆ ಮತ್ತು ಗೃಹ ಸಚಿವರು ಭದ್ರತಾ ಲೋಪದ ಹೊಣೆಗಾರಿಕೆಯನ್ನು ತೆಗೆದುಕೊಳ್ಳಲು ಹೆದರುತ್ತಿದ್ದಾರೆ. ಲೋಕಸಭೆಯ ಹೊರಗೆ ತಮ್ಮ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ ಎಂದು ಹೇಳಿದ್ದಾರೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.