Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಜಾತಿ ಗಣತಿ ವರದಿ ಒಪ್ಪದಂತೆ ಲಿಂಗಾಯತರ ಮನವಿ
(ರಾಜ್ಯ ) ಜಿಲ್ಲೆ

ಜಾತಿ ಗಣತಿ ವರದಿ ಒಪ್ಪದಂತೆ ಲಿಂಗಾಯತರ ಮನವಿ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಜಾತಿ ಗಣತಿ ಅವೈಜ್ಞಾನಿಕ | ಹೊಸ ಸಮೀಕ್ಷೆಗೆ ಪಟ್ಟು | ಮನವಿ ಪತ್ರಕ್ಕೆ 30ಕ್ಕೂ ಹೆಚ್ಚು ಶಾಸಕರ ಸಹಿ

ಬೆಳಗಾವಿ: ಒಕ್ಕಲಿಗರ ಬಳಿಕ ಲಿಂಗಾಯತ ಸಮುದಾಯದ ನಾಯಕರೂ 2015ರ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ(ಜಾತಿ) ಗಣತಿ ವರದಿಯನ್ನು ವಿರೋಧಿಸಿದ್ದಾರೆ. ಜಾತಿ ಗಣತಿ ಅವೈಜ್ಞಾನಿಕವಾಗಿದ್ದು, ಅದನ್ನು ಸ್ವೀಕರಿಸದಂತೆ ಆಗ್ರಹಿಸಿದ್ದಾರೆ.
ಶುಕ್ರವಾರ ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾದ ನಾಯಕರು ಜಾತಿ ಗಣತಿ ವರದಿ ಅಂಗೀಕರಿಸದಂತೆ ಮನವಿ ಪತ್ರ ಸಲ್ಲಿಸಿದ್ದಾರೆ. ಈ ಪತ್ರಕ್ಕೆ ಸಿದ್ದರಾಮಯ್ಯ ಸರ್ಕಾರದ ಸಚಿವರಾದ ಎಂ.ಬಿ ಪಾಟೀಲ್, ಈಶ್ವರ ಖಂಡ್ರೆ, ಶಿವಾನಂದ ಪಾಟೀಲ್ ಸೇರಿದಂತೆ, ವಿವಿಧ ಪಕ್ಷಗಳ ಸುಮಾರು 30ಕ್ಕೂ ಹೆಚ್ಚು ಶಾಸಕರು ಸಹಿ ಹಾಕಿದ್ದಾರೆ ಎನ್ನಲಾಗಿದೆ.
ಬಿಜೆಪಿ ಶಾಸಕರಾದ ಬಿವೈ ವಿಜಯೇಂದ್ರ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ಲಕ್ಷಣ ಸವದಿ , ವಿಜಯಾನಂದ ಕಾಶಪ್ಪನವರ್, ಪಕ್ಷದ ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ ಕೂಡ ಮನವಿ ಪತ್ರಕ್ಕೆ ಸಹಿ ಹಾಕಿದ್ದಾರೆ.
ಹಿರಿಯ ಕಾಂಗ್ರೆಸ್ ಶಾಸಕ ಮತ್ತು ವೀರಶೈವ-ಲಿಂಗಾಯತ ಮಹಾಸಭಾದ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. 2015 ಜಾತಿ ಗಣತಿ ವರದಿ ಅವೈಜ್ಞಾನಿಕ, ಅವಧಿ ಮೀರಿದ್ದು ಮತ್ತು ಕ್ಷೇತ್ರ ಕಾರ್ಯದ ಕೊರತೆಯಿಂದ ಕೂಡಿದೆ ಎಂದು ಶಾಮನೂರು ಹೇಳಿದ್ದಾರೆ ಎಂದು ತಿಳಿದು ಬಂದಿದೆ.
ಒಕ್ಕಲಿಗ ಸಮುದಾಯದಿಂದ ವಿರೋಧ
ತಿಂಗಳ ಹಿಂದೆ ಇದೇ ರೀತಿಯ ಮನವಿಗೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಒಕ್ಕಲಿಗ ಸಮುದಾಯದ ನಾಯಕರು ಸಹಿ ಹಾಕಿದ್ದರು. 2016 ಜಾತಿ ಗಣತಿ ವರದಿ ಅವೈಜ್ಞಾನಿಕವಾಗಿದೆ ಮತ್ತು ವಿಶ್ವಸಾರ್ಹತೆಯ ಕೊರೆತೆಯಿದೆ ಎಂದು ಆರೋಪಿಸಿದ್ದರು.
ವರದಿಗಳ ಪ್ರಕಾರ, ಲಿಂಗಾಯತ ಸಮುದಾಯ ಸಿಎಂಗೆ ಕೊಟ್ಟಿರುವ ಮನವಿಯು ಜಾತಿ ಗಣತಿಯನ್ನು ವಿರೋಧಿಸಿಲ್ಲ. ಆದರೆ, 2015ರ ಜಾತಿ ಗಣತಿ ಅವೈಜ್ಞಾನಿಕವಾಗಿದೆ. ಅದು ಜನರ ಮನೆ ಬಾಗಿಲಿಗೆ ತೆರಳಿ ಮಾಹಿತಿ ಸಂಗ್ರಹಿಸುವಲ್ಲಿ ವಿಫಲವಾಗಿದೆ. ವರದಿಯು ರಾಜ್ಯದಲ್ಲಿ ಇರುವ ಲಿಂಗಾಯತ ಸಮುದಾಯದ ಜನ ಸಂಖ್ಯೆಯನ್ನು ಸರಿಯಾಗಿ ತೋರಿಸಿಲ್ಲ. ಜಾತಿ ಗಣತಿ ಲಿಂಗಾಯತ ಸಮುದಾಯದ ಉಪ ಜಾತಿಗಳ ನಡುವೆ ಬಿರುಕು ಮೂಡಿಸಿದೆ ಎಂದು ಹೇಳಿದೆ.
ಲಿಂಗಾಯತ ಸಮುದಾಯದ ಉಪ ಜಾತಿಗಳ ಬಗ್ಗೆ ಕ್ರಾಸ್ ವೆರಿಕಫಿಕೇಶನ್ ಮಾಡಿಲ್ಲ. ಜನರು ಹೇಳಿದ ಜಾತಿಯನ್ನು ಒಪ್ಪಿಕೊಂಡಿದೆ. ಈ ವರದಿ ಒಪ್ಪಿಕೊಳ್ಳುವುದರಿಂದ ಅರ್ಹ ಬಡವರು, ಹಿಂದುಳಿದವರು ಮತ್ತು ಮಧ್ಯಮ ವರ್ಗದ ವೀರಶೈವ ಲಿಂಗಾಯತರು ಅವರ ಮೀಸಲಾತಿ ಮತ್ತು ಇತರ ಪ್ರಯೋಜನಗಳನ್ನು ಕಳೆದುಕೊಳ್ಳಲಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದೆ.
2015ರಲ್ಲಿ ಹೆಚ್.ಕಾಂತರಾಜು ಅವರು ಹಿಂದುಳಿದ ಆಯೋಗದ ಅಧ್ಯಕ್ಷರಾಗಿದ್ದಾಗ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಗೆ ಚಾಲನೆ ನೀಡಿತ್ತು. ಈ ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆಯಾಗಿಲ್ಲ. ಪ್ರಸ್ತುತ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್‌ ಸರ್ಕಾರವೇ ಇರುವುದರಿಂದ ವರದಿಯನ್ನು ಸ್ವೀಕರಿಸಲು ಸರ್ಕಾರ ಮುಂದಾಗಿದೆ.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.