Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಾವೆಲ್ಲ ಪ್ರಕೃತಿಯನ್ನು ಸಂರಕ್ಷಿಸಬೇಕು :ಡಿಸಿ ಟಿ.ಭೂಬಾಲನ್
(ರಾಜ್ಯ ) ಜಿಲ್ಲೆ

ನಾವೆಲ್ಲ ಪ್ರಕೃತಿಯನ್ನು ಸಂರಕ್ಷಿಸಬೇಕು :ಡಿಸಿ ಟಿ.ಭೂಬಾಲನ್

By No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಪರಿಸರ ಮತ್ತು ಪ್ರಾಚೀನ ಸ್ಮಾರಕಗಳ ಸಂರಕ್ಷಣೆ ಹಾಗೂ ಅರಣ್ಯೀಕರಣಕ್ಕಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಕನಸಿನ ವೃಕ್ಷೋಥಾನ್ ಹೆರಿಟೇಜ್ ರನ್-2023ನ್ನು ಯಶಸ್ವಿಗೊಳಿಸಲು ಎಲ್ಲರೂ ಶ್ರಮಿಸೋಣ ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ಹೇಳಿದ್ದಾರೆ.
ವೃಕ್ಷೋಥಾನ್ ಹೆರಿಟೇಜ್ ರನ್-2023ರ ಅಂಗವಾಗಿ ಇಂದು ಮಂಗಳವಾರ ನಗರದ ಐತಿಹಾಸಿಕ ಗಗನ ಮಹಲ್ ನಲ್ಲಿ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಪ್ರೌಢಶಾಲೆಗಳ ಬಾಲಕ ಮತ್ತು ಬಾಲಕಿಯರಿಗಾಗಿ ಆಯೋಜಿಸಿದ್ದ ಐತಿಹಾಸಿಕ ಸ್ಮಾರಕಗಳ ಹಾಗೂ ಪರಿಸರ ರಕ್ಷಣೆ ಕುರಿತು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯನ್ನು ಸ್ವತಃ ಗೋಳಗುಮ್ಮಟ ಚಿತ್ರ ಬಿಡಿಸುವ ಮೂಲಕ ಅವರು ಉದ್ಘಾಟಿಸಿ ಮಾತನಾಡಿದರು.
ವಿಜಯಪುರ ಜಿಲ್ಲೆಯಲ್ಲಿ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಸ್ಮಾರಕಗಳು, ದೇವಾಲಯಗಳು, ಜೈನ ಬಸದಿಗಳಿವೆ. ಮುಂದಿನ ಪೀಳಿಗೆಗಾಗಿ ಇವುಗಳನ್ನು ಪೋಷಿಸಿ ರಕ್ಷಣೆ ಮಾಡುವುದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ನಮ್ಮ ಜಿಲ್ಲೆಯಲ್ಲಿ ಅರಣ್ಯೀಕರಣದ ಕೊರತೆ ಇರುವ ಹಿನ್ನೆಲೆಯಲ್ಲಿ ಸಚಿವ ಎಂ. ಬಿ. ಪಾಟೀಲ ಅವರು ಕೋಟಿ ವೃಕ್ಷ ಅಭಿಯಾನದ ಅಂಗವಾಗಿ ಈಗಾಗಲೇ ಮರಗಳನ್ನು ಬೆಳೆಸಿದ್ದಾರೆ. ಈ ಅಭಿಯಾನದ ಮುಂದುವರೆದ ಭಾಗವಾಗಿ ಈಗ ವೃಕ್ಷೊಥಾನ್ ಹೆರಿಟೇಜ್ ರನ್- 2023 ನಡೆಯುತ್ತಿದೆ. ಸಚಿವರ ಕನಸಿನ ಈ ಯೋಜನೆ ನನಸು ಮಾಡಲು ನಾವೆಲ್ಲರೂ ಕಾಡನ್ನು ಬೆಳೆಸೋಣ ಎಂದು ಅವರು ಹೇಳಿದರು.
ಹೆರಿಟೇಜ್ ರನ್-2023ರಲ್ಲಿ ಸುಮಾರು 10 ಸಾವಿರ ಓಟಗಾರರು ಭಾಗವಹಿಸುತ್ತಿದ್ದು, ತಾವೆಲ್ಲರೂ ಪರಿಸರ ಕಾಪಾಡುವಲ್ಲಿ ಓರ್ವ ರಾಯಭಾರಿಯಾಗಿ ಪ್ರಕೃತಿಯನ್ನು ಸಂರಕ್ಷಿಸಬೇಕು. ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಕೋಟಿ ವೃಕ್ಷ ಅಭಿಯಾನದ ಸಂಚಾಲಕ ಡಾ. ಮುರುಗೇಶ ಪಟ್ಟಣಶಟ್ಟಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಡಾ. ಎನ್. ಎಚ್. ನಾಗೂರ, ಎಂ. ಪಿ. ಕುಪ್ಪಿ, ನೂಡೆಲ್ ಅಧಿಕಾರಿ ಅಂಬಣ್ಣ ಲಾಳಸೇರಿ ಮುಂತಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಪಠ್ಯಪುಸ್ತಕ ಪರಿಷ್ಕರಣೆ ಸಂಪನ್ಮೂಲ ವ್ಯಕ್ತಿ ಮಂಜುನಾಥ ಮಾನೆ, ಆನಂದ ಝಂಡೆ, ರಮೇಶ ಚವ್ಹಾಣ, ಬಿ. ಎಸ್. ಪಾಟೀಲ, ಭಜಂತ್ರಿ, ರಾಜಕುಮಾರ ವಾಲಿಕಾರ, ಎಂ. ಕೆ. ಗಾಡಿವಡ್ಡರ, ಬಂದೆನವಾಜ್, ಎಸ್. ಸಿ. ಹೂಗಾರ, ಶಿವಣ್ಣವರ, ಚಿತ್ರಕಲಾ ಶಿಕ್ಷಕರು, ಹಾಗೂ ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲೆಯ ನಾನಾ ಭಾಗಗಳಿಂದ ಆಗಮಿಸಿದ್ದ 50ಕ್ಕೂ ಬಾಲಕ ಮತ್ತು ಬಾಲಕಿಯರು ಚಿತ್ರ ಬಿಡಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡರು. ಹುಮಾಯೂನ ಎ. ಮಮದಾಪೂರ ನಿರೂಪಿಸಿದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.