ವಿಶ್ವ ಮಾನವ ಹಕ್ಕುಗಳ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆಯಲ್ಲಿ ನ್ಯಾಯಾಧೀಶೆ ಲಕ್ಷ್ಮೀ ಗರಗ ಕಿವಿಮಾತು
ಮುದ್ದೇಬಿಹಾಳ: ದಿನಾಚರಣೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಸಾರ್ವಜನಿಕರಲ್ಲಿ ಕಾನೂನುಗಳ ಅರಿವು ಮೂಡಿಸುವ ಉದ್ದೇಶವನ್ನು ಕಾನೂನು ಸೇವಾ ಸಮಿತಿ ಹೊಂದಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ನಿಂಗಪ್ಪ ಗರಗ ಹೇಳಿದರು.
ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ ಹಾಗೂ ರಾಷ್ಟ್ರೀಯ ಗ್ರಾಹಕರ ದಿನಾಚರಣೆ ಕುರಿತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿಯೊಬ್ಬ ಗ್ರಾಹಕ ಯಾವುದೇ ವಸ್ತುವನ್ನು ಖರೀದಿಸುವ ಮೊದಲು ಅದರ ಗುಣಮಟ್ಟ, ಸುರಕ್ಷತೆ, ವಸ್ತುವಿನ ಉತ್ಪಾದನೆ ಮತ್ತು ಅದರ ಕೊನೆಯ ಅವಧಿಯನ್ನು ಪರಿಶೀಲಿಸುವುದರ ಜೊತೆಗೆ ಕಡ್ಡಾಯವಾಗಿ ರಸೀದಿ ಪಡೆಯುವದನ್ನು ಮರೆಯಬಾರದು. ಒಂದು ವೇಳೆ ನೀವು ಖರೀದಿಸಿದ ವಸ್ತುಗಳಲ್ಲಿ ನಿಮಗೆ ಮೋಸವಾಗಿದ್ದರೆ ಗ್ರಾಹಕರ ನ್ಯಾಯಾಲಯದಲ್ಲಿ ದೂರು ದಾಖಲಿಸಿ ನ್ಯಾಯ ಪಡೆಯಬಹುದಾಗಿದೆ. ಅದರಂತೆ ನಾಗರಿಕ ಸಮಾಜದ ಸ್ವಾತಂತ್ರ್ಯವನ್ನು ಎತ್ತಿಹಿಡಿಯುವ ಉದ್ದೇಶದಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು ಯಾರೊಬ್ಬರೂ ಉಲ್ಲಂಘಿಸಬಾರದು ಎಂದರು.
ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ ಮಾತನಾಡಿದರು.
ನ್ಯಾಯವಾದಿ ಎನ್.ಆರ್.ಮೊಕಾಶಿ ವಿಶೇಷ ಉಪನ್ಯಾಸ ನೀಡಿದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಸ್.ಮಾಲಗತ್ತಿ ಮಾತನಾಡಿದರು.
ತಾಲೂಕು ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಸಂಪತ್ತ ಕುಮಾರ ಬಳೂಲಗಿಡದ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸಾವಳಗಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ಕ್ರೈಂ ಪಿಎಸ್‌ಐ ಮನ್ನಾಬಾಯಿ ಇದ್ದರು.
ಈ ವೇಳೆ ನ್ಯಾಯವಾದಿಗಳಾದ ಜೆ.ಎ.ಚಿನಿವಾರ, ಎಸ್.ಆರ್.ಸಜ್ಜನ, ಎಚ್.ವಾಯ್.ಪಾಟೀಲ, ಎಚ್.ಟಿ.ಪೂಜಾರಿ, ಚೇತನ ಶಿವಶಿಂಪಿ, ಸಾಬಣ್ಣ ಚಳ್ಳಗಿ, ಜಾಧವ, ಶ್ರೀದೇವಿ ರಾಜೂರ, ಶೋಭಾ ಬಿರಾದಾರ, ಎಂ.ಎಲ್.ರಿಸಾಲದಾರ ನ್ಯಾಯಾಲಯದ ಸಿಬ್ಬಂದಿಗಳಾದ ಅರವಿಂದ ಕುಂಬಾರ, ಮಹಾಂತೇಶ ಹಚರೆಡ್ಡಿ, ಇಸಾಕ ಒಂಟಿ ಸೇರಿದಂತೆ ಎಲ್ಲ ಸಿಬ್ಬಂದಿ ಇದ್ದರು.
ರವಿ ನಾಲತವಾಡ ವಕೀಲರು ವಂದಿಸಿದರು. ನ್ಯಾ.ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ ನಿರೂಪಿಸಿದರು.

