ವಿಜಯಪುರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ಹಾಗೂ ಪೊಲೀಸ್ ಇಲಾಖೆ ಇವರ ಸಹಯೋಗದಲ್ಲಿ ವಿಜಯಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಟ್ಟಂಗಿಹಾಳ ಗ್ರಾಮದ ತುಂಗಳ ಪಿಯು ಕಾಲೇಜ್‌ನಲ್ಲಿ ಡಿ.೧೬ ರಂದು ಮಾನವ ಹಕ್ಕುಗಳು ಮತ್ತು ಪೋಕ್ಸೊ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಅರಿವು ಕಾರ್ಯಕ್ರಮದಲ್ಲಿ ಕಾಲೇಜಿನ ೩೫೦ ವಿದ್ಯಾರ್ಥಿ-ವಿದ್ಯಾಥಿನಿಯರು ಭಾಗವಹಿಸಿದ್ದರು. ವಿದ್ಯಾರ್ಥಿಗಳಿಗೆ ಪೊಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಸಂಚಾರಿ ನಿಯಮಗಳ ಬಗ್ಗೆ ಕಾನೂನಿನ ಅರಿವು ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಕುಂದರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಸೋನಾವನೆ, ಪೊಲೀಸ್ ಉಪಾಧೀಕ್ಷಕ ಗಿರಿಮಲ್ಲಪ್ಪ ತಳಕಟ್ಟಿ, ಪೊಲೀಸ್ ನಿರೀಕ್ಷಕ ರಾಯಗೊಂಡ ಜಾನರ್, ಉಪನ್ಯಾಸಕರಾಗಿ ಪ್ಯಾನಲ್ ವಕೀಲರಾದ ಜಿ.ವಿ.ಖುದಾನಪೂರ ಮತ್ತು ಕಾಲೇಜ್ ಪ್ರಾಂಶುಪಾಲರು ಭಾಗವಹಿಸಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

