ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಡಿ.೨೦ರಂದು ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೧೦-೩೦ಕ್ಕೆ ಸಮಾವೇಶವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ ಸೇರಿದಂತೆ ಜಿಲ್ಲೆಯ ವಿವಿಧ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
ಡಿ.೨೦ರಂದು ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶ
Related Posts
Add A Comment
