Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರ್ಕಾರ ಶೀಘ್ರ ಸ್ಪಂದಿಸಲಿ
(ರಾಜ್ಯ ) ಜಿಲ್ಲೆ

ಅತಿಥಿ ಉಪನ್ಯಾಸಕರ ಬೇಡಿಕೆಗೆ ಸರ್ಕಾರ ಶೀಘ್ರ ಸ್ಪಂದಿಸಲಿ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಮುಷ್ಕರ ನಿರತ ಉಪನ್ಯಾಸಕರ ಮನವಿ ಸ್ವೀಕರಿಸಿದ ಕೆಪಿಸಿಸಿ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಅಭಿಮತ

ವಿಜಯಪುರ: ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ಸೇವಾ ಖಾಯಂಮಾತಿಗಾಗಿ ಕಳೆದ 28 ದಿನಗಳಿಂದ ನಡೆಸುತ್ತಿರುವ ಹೋರಾಟ ನ್ಯಾಯಯುತವಾಗಿದ್ದು, ಸರ್ಕಾರ ಶೀಘ್ರ ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯ ವಕ್ತಾರ ಸಂಗಮೇಶ ಬಬಲೇಶ್ವರ ಆಗ್ರಹಿಸಿದ್ದಾರೆ.
ವಿಜಯಪುರ ಜಿಲ್ಲಾಧಿಕಾರಿಗಳ ಆವರಣದ ಹತ್ತಿರ ಕಳೆದ 27 ದಿನಗಳಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಉಪನ್ಯಾಸಕರನ್ನು ಭೇಟಿ ಮಾಡಿ ಅವರ ಮನವಿ ಸ್ವೀಕರಿಸಿ ಮಾತನಾಡಿದ ಬಬಲೇಶ್ವರ ಅವರು, “ಕಳೆದ 20 ವರ್ಷದಿಂದ ಸಾವಿರ ರೂಪಾಯಿ ಸಂಬಳಕ್ಕೆ ಪ್ರಾರಂಭವಾಗಿರುವ ಎಲ್ಲಾ ಅತಿಥಿ ಉಪನ್ಯಾಸಕರ ನೋವಿನ ಕಥೆ ಕೇಳಿದರೆ ದುಃಖವಾಗುತ್ತದೆ. ಕಳೆದ ಎರಡು ದಶಕಗಳಿಂದಲೂ ಆಡಳಿತದಲ್ಲಿರುವ ಯಾವ ಪಕ್ಷದ ಸರಕಾರವಿದ್ದಾಗಲೂ ಯಾವ ಮುಖ್ಯಮಂತ್ರಿಯೂ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ ಎನ್ನುವುದು ಅವರ ನೋವಾಗಿದೆ. ಈಗಾಗಲೇ ಚಳಿಗಾಲ ಅಧಿವೇಶನದ ಸಂದರ್ಭದಲ್ಲಿ ಸಚಿವ ಡಾ. ಎಂ ಬಿ ಪಾಟೀಲರು ಸುವರ್ಣ ಸೌಧದ ಮುಂದೆ ಧರಣಿ ನಿರತರನ್ನು ಭೇಟಿಯಾಗಿ ಅವರ ಮನವಿ ಸ್ವೀಕರಿಸಿ ಮುಖ್ಯಮಂತ್ರಿಗಳ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶಿಕ್ಷಣ ಪ್ರೇಮಿಗಳು, ಜೊತೆಗೆ ಅತ್ಯಂತ ದಕ್ಷ ಮತ್ತು ಪ್ರಾಮಾಣಿಕ ಆಡಳಿತಗಾರರಾಗಿರುವುದರಿಂದ ಖಂಡಿತವಾಗಿಯೂ ನಿಮ್ಮ ಬೇಡಿಕೆಗೆ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದಲ್ಲಿ ಪರಿಹಾರ ದೊರೆಯುತ್ತದೆನ್ನುವ ಆತ್ಮವಿಶ್ವಾಸ ನನಗಿದೆ” ಎಂದು ಹೇಳಿದರು.
ಮಕ್ಕಳ ಕಲಿಕೆಯ ಹಿತದೃಷ್ಟಿಯಿಂದ ತಾವು ಆದಷ್ಟು ಬೇಗನೆ ತರಗತಿಗಳಿಗೆ ಮರಳುವಂತಾಗಲಿ ಎನ್ನುವುದು ನಮ್ಮೆಲ್ಲರ ಸದಾಶಯವಾಗಿದೆ ಎಂದು ಧರಣಿ ನಿರತ ಅಧ್ಯಾಪಕರಲ್ಲಿ ಕೈ ಮುಗಿದು ಕೇಳಿಕೊಂಡರು.
ನಮ್ಮ ಜಿಲ್ಲೆಯ ಉಸ್ತುವಾರಿ ಸಚಿವರಾದ ಡಾ. ಎಂ ಬಿ ಪಾಟೀಲರು ಸರ್ಕಾರದಲ್ಲಿ ಅತ್ಯಂತ ಪ್ರಭಾವಿ ಸಚಿವರಾಗಿದ್ದು, ಖಂಡಿತವಾಗಿಯೂ ಅವರು ನಿಮಗೆ ನ್ಯಾಯ ದೊರಕಿಸಿ ಕೊಡುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಬಬಲೇಶ್ವರ ಹೇಳಿದರು.
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಬ್ಬಿಯವರು ಹಾಗೂ ಆನಂದ್ ಕುಲಕರ್ಣಿ ಅವರನ್ನು ಒಳಗೊಂಡಂತೆ ನೂರಾರು ಜನ ಧರಣಿ ನಿರತ ಉಪನ್ಯಾಸಕರು ಪಾಲ್ಗೊಂಡಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.