ಸಿಂದಗಿ: ವಿದ್ಯಾರ್ಥಿಗಳು ಮಹಾವಿದ್ಯಾಲಯದಲ್ಲಿ ದೊರೆಯುವ ಸಂಪನ್ಮೂಲಗಳನ್ನು ಬಳಸಿಕೊಂಡು ಪ್ರಾಧ್ಯಾಪಕರ ಉತ್ತಮ ಮಾರ್ಗದರ್ಶನದಲ್ಲಿ ಅಧ್ಯಯನ ಮಾಡಬೇಕು ಎಂದು ಸಂಸ್ಥೆಯ ಅಧ್ಯಕ್ಷ ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ತಾಲೂಕು ಶಿಕ್ಷಣ ಪ್ರಸಾರಕ ಮಂಡಳಿಯ ಅಂಗ ಸಂಸ್ಥೆಯಾದ ಸಿ.ಎಂ. ಮನಗೂಳಿ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿ ಮಹಾವಿದ್ಯಾಯಲದಲ್ಲಿ ನಡೆದ ಪದವಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಮುಂದಿನ ಜೀವನ ರೂಪಿಸಿಕೊಳ್ಳಲು ಪದವಿ ಹಂತದ ಶಿಕ್ಷಣವು ಸುಭದ್ರವಾದ ತಳಪಾಯ. ಆದ್ದರಿಂದ ವಿದ್ಯಾರ್ಥಿಗಳು ನಿರಂತರ ಓದಿನತ್ತ ಚಿತ್ತ ಹರಿಸಬೇಕು ಎಂದರು.
ಈ ವೇಳೆ ಕಾರ್ಯಕ್ರಮದ ಮುಖ್ಯ ಅತಿಥಿ, ನಿವೃತ್ತ ಪ್ರಾಧ್ಯಾಪಕ ಬಿ.ಎನ್. ಪಾಟೀಲ ಇಬ್ರಾಹಿಂಪೂರ ಮಾತನಾಡಿ, ವಿದ್ಯಾರ್ಥಿಗಳಿಗೆ ಓದಿನ ಮೇಲಿನ ಶ್ರದ್ಧೆ ಹೆಚ್ಚಾಗಬೇಕಾದರೆ ಸಂತರ, ಶರಣರ, ಸತ್ಪುರುಷರ ಬದುಕಿನ ಜೀವನ ಚರಿತ್ರೆಗಳನ್ನು ಅರಿತುಕೊಂಡು ಅವರ ತತ್ವಾದರ್ಶಗಳನ್ನು ನಮ್ಮ ಬದುಕಿನಲ್ಲಿ ಮೈಗೂಡಿಸಿಕೊಂಡಾಗ ಮಾತ್ರ ಸಾಧ್ಯವಾಗುತ್ತದೆ ಎಂದು ಕಿವಿಮಾತು ಹೇಳಿದರು.
ಇದೇ ಸಂದರ್ಭದಲ್ಲಿ ಶ್ರೀಕಾಂತ ಕೆಂಧೂಳಿ, ಪ್ರಾಚಾರ್ಯ ಡಾ.ಬಿ.ಜಿ.ಪಾಟೀಲ ಮಾತನಾಡಿದರು.
ಕಾರ್ಯಕ್ರಮವನ್ನು ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷ ರಾಹುಲ್ ಕಾಂಬಳೆ ಸ್ವಾಗತಿಸಿದರು. ಶ್ರೀಶೈಲ ಜಮಾದಾರ್ ನಿರೂಪಿಸಿದರು. ಐ.ಕ್ಯೂ.ಎ.ಸಿ ಸಂಯೋಜಕ, ದೈಹಿಕ ನಿರ್ದೇಶಕ ಡಾ.ಅಂಬರೀಶ ಬಿರಾದಾರ ವಂದಿಸಿದರು.
ಸತೀಶ ಬಿರಾದಾರ, ಬಿ.ಡಿ.ಮಾಸ್ತಿ, ಜಿ.ಜಿ.ಕಾಂಬಳೆ, ಎಸ್.ಕೆ.ಹೂಗಾರ, ವ್ಹಿ.ಬಿ.ಪಾಟೀಲ ಹಾಗೂ ರಮೇಶ ಯಂಕಂಚಿಕರ ಸೇರಿದಂತೆ ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

