ಸಿಂದಗಿ: ಈ ಹಿಂದೆ ಕೇಂದ್ರದಲ್ಲಿ ಸರಕಾರ ಅಧಿಕಾರಕ್ಕೆ ಬರಲು ನಮ್ಮ ವಿವಿಧ ಬೇಡಿಕೆಗಳನ್ನು ಕೊಡುವುದಾಗಿ ತಿಳಿಸಿತ್ತು. ಆದರೆ ಹಿಂದಿನ ಸರ್ಕಾರಗಳು ಅನುಸರಿಸಿದ ನೀತಿಗಳನ್ನೇ ಬಹಳ ವೇಗವಾಗಿ ಜಾರಿಗೊಳಿಸುತ್ತಾ, ದುಡಿಯುವವರ ಜೀವನವನ್ನು ಇನ್ನಷ್ಟು ಸಂಕಟಕ್ಕೆ ತಳ್ಳಿರುವುದು ಅತ್ಯಂತ ನೋವಿನ ವಿಚಾರ ಎಂದು ಜಿಲ್ಲಾ ಸದಸ್ಯೆ ಕಾಶಿಬಾಯಿ ಜನಗೊಂಡ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ತಾಲೂಕು ಆಡಳಿತ ಸೌಧದ ಎದುರಿಗೆ ಪ್ರತಿಭಟನೆ ನಡೆಸಿ ಮಾತನಾಡಿ ಅವರು, ಪ್ರಸ್ತುತ ಆಧುನಿಕ ಸಮಾಜದಲ್ಲಿ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆಯಾಗುತ್ತಿದೆ. ಇದರಿಂದ ಅಗತ್ಯ ವಸ್ತುಗಳನ್ನು ಖರೀದಿಸಲು ಸಾಧ್ಯವಾಗುತ್ತಿಲ್ಲ. ಕಾರಣ ಸರಕಾರ ಬೇಗ ಎಚ್ಚೆತ್ತುಕೊಂಡು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು.
ಹೊಸ ಪಿಂಚಣಿ ಯೋಜನೆ ವಿರೋಧಿಸಿ, ಹಳೇ ಪಿಂಚಣಿ ಯೋಜನ ಪುನರ್ ಸ್ಥಾಪಿಸಬೇಕೆಂಬ ಬೇಡಿಕೆಯನ್ನು ಕಡೆಗಣಿಸಲಾಗುತ್ತಿದೆ. ಇನ್ನು ಗ್ರಾಮೀಣ ಭಾಗದ ಕೃಷಿ ಕಾರ್ಮಿಕರು, ಕಟ್ಟಡ ಹಾಗೂ ನಿರ್ಮಾಣ ಕಾರ್ಮಿಕರು, ಅಸಂಘಟಿತ ಕಾರ್ಮಿಕರ ಸ್ಥಿತಿ ಶೋಚನೀಯವಾಗಿದೆ. ಇದರಿಂದ ಡಿ.೧೫-೨೧ರವರೆಗೆ ದೇಶವ್ಯಾಪ್ತಿ ಪ್ರತಿಭಟನಾ ಸಪ್ತಾಹಕ್ಕೆ ಕರೆ ನೀಡಲಾಗಿದೆ.
ಇದೇ ಸಂದರ್ಭದಲ್ಲಿ ಮನವಿ ಸ್ವೀಕರಿಸಿ ಶಾಸಕ ಅಶೋಕ ಮನಗೂಳಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಹಾಸ್ಟೆಲ್ ಕಾರ್ಮಿಕರು. ದುಡಿಯುವ ಜನರ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಆಗ್ರಹಿಸಿ ಆಲ್ ಇಂಡಿಯಾ ಯೂನೈಟೆಡ್ ಟ್ರೇಡ್ ಸೆಂಟರ್ ಪ್ರತಿಭಟನೆ ಮಾಡುತ್ತಿರುವುದು ಕಾನೂನಾತ್ಮಕವಾಗಿದೆ. ಈ ಸಮಸ್ಯೆ ಕುರಿತಾಗಿ ಸಿಎಂ ಹಾಗೂ ಇದಕ್ಕೆ ಸಂಬಂಧಿಸಿದ ಸಚಿವರ ಜೊತೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಪ್ರಯತ್ನಿಸಿ ನಿಮ್ಮ ಬೇಡಿಕೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಇದೇ ಸಂದರ್ಭದಲ್ಲಿ ಎಐಯುಟಿಯುಸಿನ ಕಾರ್ಯಕರ್ತೆಯರಾದ ಮಾದೇವಿ ಧರ್ಮಶೆಟ್ಟಿ, ರಶ್ಮೀ ಗುತ್ತೇದಾರ, ಸರಸ್ವತಿ ಕೊಟ್ಯಾಳ, ಅಲ್ಲಮ್ಮ ಯರಗಲ್, ನಾಗಮ್ಮ ಎಮ್ಮಿ, ರೂಪಾ ಆಲಮೇಲ, ರೇಣುಕಾ, ರೂಪಾ ಗಣಿಹಾರ, ರೇಣುಕಾ ಈಳಗೇರ ಸೇರಿದಂತೆ ಅನೇಕ ಕಾರ್ಯಕರ್ತೆಯರು ಇದ್ದರು.
Subscribe to Updates
Get the latest creative news from FooBar about art, design and business.
Related Posts
Add A Comment

