Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಕೆಗೆ ಡಿಸಿ ಟಿ.ಭೂಬಾಲನ್ ಕರೆ
(ರಾಜ್ಯ ) ಜಿಲ್ಲೆ

ಸಮಗ್ರ ಕೃಷಿ ಬೇಸಾಯ ಪದ್ಧತಿ ಅಳವಡಿಕೆಗೆ ಡಿಸಿ ಟಿ.ಭೂಬಾಲನ್ ಕರೆ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೃಷಿ-ತೋಟಗಾರಿಕೆ ಉತ್ಪನ್ನಗಳ ಖರೀದಿದಾರ-ಮಾರಾಟಗಾರರ ಸಮಾವೇಶಕ್ಕೆ ಚಾಲನೆ

ವಿಜಯಪುರ: ನಮ್ಮ ಜಿಲ್ಲೆಯು ಪ್ರಮುಖವಾಗಿ ಕೃಷಿ ಆಧಾರಿತವಾಗಿದೆ. ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡು ತಮ್ಮ ಆದಾಯ ದ್ವಿಗುಣಗೊಳಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ ಅವರು ಕರೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿಗೆ ಸಂಬಂಧಿಸಿದ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ರಾಸಾಯನಿಕ ಗೊಬ್ಬರ ಬಳಸದೇ, ಸಾವಯವ ರಸಗೊಬ್ಬರವನ್ನು ಉಪಯೋಗಿಸಿ ಹೆಚ್ಚಿನ ಇಳುವರಿ ಪಡೆಯಬೇಕು. ರೈತರು ಕೃಷಿಯಲ್ಲಿ ವೈಜ್ಞಾನಿಕ ಹಾಗೂ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಕೃಷಿಯೊಂದಿಗೆ ಉಪ ಕಸುಬನ್ನು ಅಳವಡಿಸಿಕೊಳ್ಳಬೇಕು. ತೋಟಗಾರಿಕೆ ಬೆಳೆಗಳೊಂದಿಗೆ ಮಿಶ್ರ ಬೇಸಾಯಕ್ಕೆ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ರೈತರಿಗೂ ಅನೂಕೂಲವಾಗುವ ನಿಟ್ಟಿನಲ್ಲಿ ಇಂದು ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳ ಖರೀದಿದಾರ ಹಾಗೂ ಮಾರಾಟಗಾರರ ಸಮಾವೇಶವನ್ನು ಏರ್ಪಡಿಸಲಾಗಿದೆ. ಇದರಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬೇಕು. ಪ್ರತಿ ಮೂರು ತಿಂಗಳಿಗೊಮ್ಮೆ ಕೃಷಿಗೆ ಸಂಬಂಧಿಸಿದ ಇಂತಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಮಹಿಳಾ ಕೃಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಸುಮಾರು ೩೫ ರೈತ ಸಂಪನ್ಮೂಲ ಸಂಸ್ಥೆಗಳು ಈ ಸಮಾವೇಶದಲ್ಲಿ ಪಾಲ್ಗೊಂಡಿವೆ ಎಂದು ಹೇಳಿದರು.
ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು:
ಮುತ್ತಗಿ, ಪಲಂಧು ರೈತ ಉತ್ಪಾದಕ ಸಂಸ್ಥೆಯಿಂದ ಲಿಂಬೆ ಮತ್ತು ಈರುಳ್ಳಿ ಸಂಸ್ಕರಣೆ ಪದಾರ್ಥಗಳು, ಗೋಳಸಂಗಿ ಗ್ರಾಮದ ಗೋಪಾಲ ರೈತನಿಂದ ಕಡಲೆ ಬೆಳೆ ಮತ್ತು ತೊಗರಿ ಬೆಳೆ, ಕೃಷಿ ತಂತ್ರ ಸಂಸ್ಥೆಯಿಂದ ಮಣ್ಣು ಪರೀಕ್ಷೆ ಯಂತ್ರ, ಸೆಲ್ಕೋ ಸೋಲಾರ್ ಕಂಪನಿಯಿಂದ ಆಹಾರ ಧಾನ್ಯ ಸಂಸ್ಕರಣಾ ಯಂತ್ರಗಳು, ಪರಂಪರಾಗತ ರೈತ ಸಂಸ್ಥೆಯಿಂದ ಶೇಂಗಾ, ಕುಸುಬೆ, ಕೊಬ್ಬರಿ, ಎಣ್ಣೆ, ಸಿದ್ದೇಶ್ವರ ಸಂಸ್ಥೆಯಿಂದ ಗೋ ಆಧಾರಿತ ಉತ್ಪನ್ನಗಳು, ಅಮೃತ ಆರ್ಗ್ಯಾನಿಕ್ಸ್ನಿಂದ ಸಾವಯುವ ಗೊಬ್ಬರ, ಸಫಲ್ ಸಂಸ್ಥೆಯಿಂದ ಬೆಳೆಗೆ ನೀರು ಮಾಪನ ಯಂತ್ರಗಳ ಕುರಿತು ಪ್ರದರ್ಶನ ಹಾಗೂ ಮಾರಾಟ ಮಳಿಗೆಗಳು ಗಮನ ಸೆಳೆದವು.
ಕಾರ್ಯಕ್ರಮದಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ. ವಿಲಿಯಂಸ್ ರಾಜಶೇಖರ, ತೋಟಗಾರಿಕೆ ಉಪ ನಿರ್ದೇಶಕ ಭಾವಿದೊಡ್ಡಿ ರಾಹುಲ್ ಕುಮಾರ, ಕೃಷಿ ಸಹಾಯಕ ನಿರ್ದೇಶಕ ರಾಘವೇಂದ್ರ ಬಗಲಿ, ಬಿಎಲ್ ಡಿಇ ಸಂಸ್ಥೆಯ ಕುಲಕರ್ಣಿ, ವ್ಹಿಜನ್ ಗ್ರೂಪ್ ಸ್ಪಾರ್ಟಅಪ್ ಚೇರಮನ್ ಪ್ರಶಾಂತ ಪ್ರಕಾಶ, ವೇಗ್ರೋ ಸಂಸ್ಥೆ ಸಂಗ್ರಹಣಾ ಮುಖ್ಯಸ್ಥ ಸಾಗರ, ಕ್ಲೋವರ್ ವೆಂಚರ್ ಸಂಸ್ಥೆ ಸಂಗ್ರಹಣಾ ಮುಖ್ಯಸ್ಥ ರಘುನಾಥ, ಫಸಲ್ ಸಂಸ್ಥೆ ಮಾರಾಟ ಮತ್ತು ಮಾರ್ಕೆಟಿಂಗ್ ಮುಖ್ಯಸ್ಥ ಜಿತೇಂದ್ರ ಸಿಂಘಾಲ್, ಹುನಗುಂದ ಎಫ್.ಪಿ.ಓ. ನಿರ್ದೇಶಕ ರವಿ ಸಜ್ಜನರ, ಜಿಜ್ಞೇಶ್ ಜೋಶಿ, ಪ್ರಶಾಂತ ಹೆಗಡೆ ಸೇರಿದಂತೆ ವಿವಿಧ ಕೃಷಿ ಸಂಸ್ಥೆಗಳ ಮುಖ್ಯಸ್ಥರು, ಜಿಲ್ಲಾ ಮಟ್ಟದ ಕೃಷಿ ಅಧಿಕಾರಿಗಳು, ರೈತರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 05, 2026
    In ದಿನಪತ್ರಿಕೆ
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.