Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ನಗರವನ್ನು ಸ್ವಚ್ಚ-ಸುಂದರವನ್ನಾಗಿಸಿ :ಲೋಕಾ ಎಸ್ಪಿ ಹಣಮಂತರಾಯ
(ರಾಜ್ಯ ) ಜಿಲ್ಲೆ

ನಗರವನ್ನು ಸ್ವಚ್ಚ-ಸುಂದರವನ್ನಾಗಿಸಿ :ಲೋಕಾ ಎಸ್ಪಿ ಹಣಮಂತರಾಯ

By Updated:No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ವಿಜಯಪುರ: ಜಿಲ್ಲೆಯು ಐತಿಹಾಸಿಕ ಸ್ಮಾರಕಗಳಿಗೆ ಹೆಸರುವಾಸಿಯಾಗಿದ್ದು, ಇದೊಂದು ಪ್ರವಾಸಿ ತಾಣವಾಗಿದೆ. ದೇಶ-ವಿದೇಶದ ಪ್ರವಾಸಿಗರು ಆಗಮಿಸುತ್ತಿದ್ದು, ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಲೋಕಾಯುಕ್ತ ಅಧಿಕ್ಷಕ ಹನಮಂತರಾಯ ಅವರು ಹೇಳಿದರು.
ಬುಧವಾರ ನಗರದ ಸೆಟ್‌ಲೈಟ್ ಬಸ್ ನಿಲ್ದಾಣ, ಶಿವಾಜಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಕೋರ್ಟ್, ಗಗನ ಮಹಲ್ ಹಾಗೂ ಎ.ಪಿ.ಎಮ್.ಸಿಗೆ ಅನಿರೀಕ್ಷಿತವಾಗಿ ಭೇಟಿ ನೀಡಿ ವೀಕ್ಷಿಸಿದರು.
ಸೆಟ್‌ಲೈಟ್ ಬಸ್ ನಿಲ್ದಾಣ ಹಾಗೂ ಕೇಂದ್ರ ಬಸ್ ನಿಲ್ದಾಣಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಬೇಕು. ಗೋಡೆ ಆವರಣ ಸುತ್ತಲೂ ವಿವಿಧ ಗಿಡ ಮರಗಳ ಬೆಳೆಸಬೇಕು. ಹಸಿರು ಹುಲ್ಲು ಬೆಳೆಸುವ ಮೂಲಕ ಬಸ್ ನಿಲ್ದಾಣವನ್ನು ಸುಂದರವಾಗಿಸುವುದರೊಂದಿಗೆ ಸ್ವಚ್ಚತೆ, ಕಸ-ತ್ಯಾಜ್ಯವನ್ನು ದಿನದಲ್ಲಿ ಎರಡು ಸರತಿಗಳಲ್ಲಿ ವಿಲೇವಾರಿಗೆ ಕ್ರಮ ವಹಿಸಬೇಕು. ನಿಲ್ದಾಣದ ಆವರಣದಲ್ಲಿರುವ ಐತಿಹಾಸಿಕ ಬಾವಿಯನ್ನು ಸ್ವಚ್ಚಗೊಳಿಸಿ, ನೀರನ್ನು ಬಳಸಿಕೊಳ್ಳುವಂತೆ, ಬಸ್ ನಿಲ್ದಾಣದ ಸ್ಥಳಗಳಲ್ಲಿ ಸಿ.ಸಿ. ಟಿವಿ ಅಳವಡಿಸಬೇಕು ಎಂದು ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಹಾಗೂ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಜಿಲ್ಲೆಯ ಬೇರೆ-ಬೇರೆ ಗ್ರಾಮಗಳಿಂದ ಶಾಲಾ-ಕಾಲೇಜುಗಳಿಗೆ ವಿದ್ಯಾರ್ಥಿಗಳು ನಗರಕ್ಕೆ ಆಗಮಿಸುತ್ತಾರೆ. ಶಾಲಾ–ಕಾಲೇಜಿನ ನಿಗದಿತ ಸಮಯಕ್ಕನುಗುಣವಾಗಿ ವಿದ್ಯಾರ್ಥಿಗಳು ತಲುಪುವಂತೆ ಹೆಚ್ಚುವರಿ ಬಸ್ ಸಂಚರಿಸುವಂತೆ ನೋಡಿಕೊಳ್ಳಬೇಕು. ಶಿವಾಜಿ ವೃತ್ತದಲ್ಲಿರುವ ಕೋಟೆ ಗೋಡೆಗೆ ಹೊಂದಿಕೊಂಡಂತೆ ಕಂದಕದ ಹತ್ತರ‍್ದ ಎತ್ತರದ ಗೋಡೆ ನಿರ್ಮಿಸಿ,ಸ್ವಚ್ಚತೆ ಕಾಪಾಡಿಕೊಳ್ಳುವಂತೆ ಸೂಚಿಸಿದರು. ಲಾಲ್ ಬಹದ್ದೂರ ಶಾಸ್ತ್ರೀ ಮಾರುಕಟ್ಟೆಗೆ ಭೇಟಿ ನೀಡಿ, ಸ್ವಚ್ಚತೆ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿ ಪೌರ ಕಾರ್ಮಿಕರನ್ನು ಅಭಿನಂದಿಸಿದರು. ಸ್ವಚ್ಚತೆ ಜೊತೆಗೆ ತಮ್ಮ ಆರೋಗ್ಯ ಕುರಿತು ಹೆಚ್ಚು ಗಮನ ಹರಿಸುವಂತೆ ಅವರಿಗೆ ತಿಳಿಸಿದರು. ಗಗನ ಮಹಲ್, ಕೋರ್ಟ್ ಆವರಣ ಹಾಗೂ ಎ.ಪಿ.ಎಂ.ಸಿಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಚರ್ಚಿಸಿದ ಅವರು, ಮುಂಬರುವ ದಿನಗಳಲ್ಲಿ ಸ್ವಚ್ಚ ಹಾಗೂ ಸುಂದರ ನಗರವನ್ನಾಗಿಸಲು ಅಗತ್ಯ ಕ್ರಮಕ್ಕಾಗಿ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಬದ್ರುದ್ದೀನ ಸೌದಾಗರ, ವಿಜಯಪುರ ತಹಶೀಲ್ದಾರ್ ಕವಿತಾ, ಲೋಕಾಯುಕ್ತ ಡಿ.ವೈ.ಎಸ್.ಪಿ ಸುರೇಶ ರೆಡ್ಡಿ, ಈಶಾನ್ಯ ಕರ್ನಾಟಕ ಸಾರಿಗೆ ವಿಜಯಪುರ ಘಟಕದ ವಿಭಾಗೀಯ ನಿಯಂತ್ರಣಾಧಿಕಾರಿ ಜೆ.ಎಮ್.ಫಯಾಜ್, ಲೋಕಾಯುಕ್ತ ಪೊಲೀಸ್ ಇನ್ಸಪೆಕ್ಟರ್ ಆನಂದ ಟಕ್ಕನ್ನವರ ಹಾಗೂ ಆನಂದ ಡೋಣಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ

ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Uncategorized
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
    In (ರಾಜ್ಯ ) ಜಿಲ್ಲೆ
  • ಮಾ.೧೫ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
    In (ರಾಜ್ಯ ) ಜಿಲ್ಲೆ
  • ಶ್ರೀಶೈಲ ದರ್ಶನಕ್ಕೆ ವಿಶೇಷ ಬಸ್ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ನಾಟಕ ಕಲೆ ಉಳಿಸಿ-ಬೆಳೆಸುವುದು ಅಗತ್ಯ :ಡಾ.ಪ್ರಭುಗೌಡ
    In (ರಾಜ್ಯ ) ಜಿಲ್ಲೆ
  • ಉಳುವಿ ಪಾದಯಾತ್ರಿಗಳಿಗೆ ಸ್ವಾಗತ, ಬೀಳ್ಕೊಡುಗೆ
    In (ರಾಜ್ಯ ) ಜಿಲ್ಲೆ
  • ಜಮೀನು ದಾರಿ ಸಮಸ್ಯೆ ಇತ್ಯರ್ಥ ಅಧಿಕಾರ ತಹಸೀಲ್ದಾರರಿಗಿರಲಿ
    In (ರಾಜ್ಯ ) ಜಿಲ್ಲೆ
  • ಅಭ್ಯಾಸವು ಪರಿಪೂರ್ಣ ವ್ಯಕ್ತಿಯನ್ನಾಗಿ ನಿರ್ಮಿಸುತ್ತದೆ :ಡಾ.ಗುಡಿ
    In (ರಾಜ್ಯ ) ಜಿಲ್ಲೆ
  • ಪಾರಂಪರಿಕ ಕಲೆಗಳ ಸಂರಕ್ಷಣೆ ಅಗತ್ಯ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
  • ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸಿಕೊಳ್ಳಿ :ಡಾ.ಪ್ರಭುಸಾರಂಗದೇವ ಶ್ರೀ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.