ವಿಜಯಪುರ: ನಗರದ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ ಎಂ ಪಾಟೀಲ ವೈದ್ಯಕೀಯ ಮಹಾವಿದ್ಯಾಲಯದ 1993ರಲ್ಲಿ ಎಂಬಿಬಿಎಸ್ ಪ್ರವೇಶ ಪಡೆದ ವೈದ್ಯಕೀಯ ವಿದ್ಯಾರ್ಥಿಗಳ 30ನೇ ವರ್ಷದ ಸ್ನೇಹ ಸಂಗಮ (1993-2023) ಮತ್ತು ಗುರುವಂದನೆ ಕಾರ್ಯಕ್ರಮ ಡಿಸೆಂಬರ್ 23 ರಂದು ಶನಿವಾರ ನಡೆಯಲಿದೆ.
ಬಿ.ಎಲ್.ಡಿ.ಇ ಆಸ್ಪತ್ರೆಯ ಹೊಸ ಅಪಘಾತ ಮತ್ತು ತುರ್ತು ಚಿಕಿತ್ಸಾ ವಿಭಾಗ ಕಟ್ಟಡದ ಸಭಾಂಗಣದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ವಿವಿ ಕುಲಪತಿ ಡಾ. ಆರ್. ಎಸ್. ಮುಧೋಳ, ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಹಳೆಯ ವಿದ್ಯಾರ್ಥಿಗಳ ಸಂಘದ ಉಪಾಧ್ಯಕ್ಷ ಮತ್ತು ವೈದ್ಯಕೀಯ ಅಧೀಕ್ಷಕ ಡಾ. ರಾಜೇಶ ಹೊನ್ನುಟಗಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ದೇಶದ ನಾನಾ ಭಾಗಗಳಲ್ಲಿ ಮತ್ತು ವಿದೇಶಗಳಲ್ಲಿ ನೆಲೆಸಿರುವ 1993ನೇ ಬ್ಯಾಚಿನ ಸುಮಾರು 100 ವಿದ್ಯಾರ್ಥಿಗಳು ಪಾಲ್ಗೋಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ವೈದ್ಯಕೀಯ ವಿದ್ಯಾರ್ಜನೆ ಮಾಡಿಸಿದ ಸುಮಾರು 35 ಜನ ಶಿಕ್ಷಕರಿಗೆ ಗುರುವಂದನೆ ಸಲ್ಲಿಸಲಾಗುವುದು ಎಂದು ಎಂದು 1993ನೇ ಬ್ಯಾಚಿನ ವಿದ್ಯಾರ್ಥಿ ಮತ್ತು ಆಸ್ಪತ್ರೆಯ ಶಸ್ತ್ರಚಿಕಿತ್ಸೆ ವಿಭಾಗದ ಮುಖ್ಯಸ್ಥ ಡಾ. ಮಂಜುನಾಥ ಕೋಟೆಣ್ಣವರ ಹಾಗೂ ರಕ್ತ ಭಂಡಾರದ ಮುಖ್ಯಸ್ಥ ಡಾ. ಪ್ರಕಾಶ ಪಾಟೀಲ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
