ಮೋರಟಗಿ: ರಾಜ್ಯದಲ್ಲಿ ರೈತರು ಒಂದಿಲ್ಲ ಒಂದು ಸಮಸ್ಸೆಗೆ ಸಿಲುಕಿ ಸಾಲದ ಸುಳಿಗೆ ತುತ್ತಾಗುತ್ತಿದ್ದಾರೆ. ಸರ್ಕಾರ ರೈತರ ಸಂಕಷ್ಟಕ್ಕೆ ಸ್ಪಂದಿಸುತಿಲ್ಲ. ರೈತ ಬದುಕಲಾಗದಷ್ಟು ಮಾನಸಿಕವಾಗಿ ಕುಗ್ಗಿದ್ದಾನೆ. ಹೀಗಾಗಿ ರೈತರ ರಾಷ್ಟ್ರೀಕೃತ ಬ್ಯಾಂಕಗಳಲ್ಲಿನ ಸಾಲ ಮನ್ನಾ ಮಾಡಬೇಕು ಎಂದು ಒತ್ತಾಯಿಸಿ ಇದೇ ತಿಂಗಳು ೨೩ ರಂದು ರೈತ ಸಮಾವೇಶದಲ್ಲಿ ಗ್ರಾಮೀಣ ಭಾಗದಿಂದ ಕೂಡಾ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಪಾಲ್ಗೊಳ್ಳಬೇಕು ಎಂದು ಕಬ್ಬು ಬೆಳೆಗಾರರ ಸಂಘದ ತಾಲೂಕ ಅಧ್ಯಕ್ಷ ಧರೆಪ್ಪ ಗೌಡ ಬಿರಾದಾರ ಕರೆ ನೀಡಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ಮುಂಗಾರು ಕೈ ಕೊಟ್ಟಿದ್ದರಿಂದ ರೈತ ಸಂಪೂರ್ಣ ಕಂಗಾಲಾಗಿ ಬರಗಾಲದಂತ ಭೀಕರತೆಯಲ್ಲಿ ಮುಳುಗಿದ್ದಾನೆ ಕಳೆದ ಚಳಿಗಾಲ ಅಧಿವೇಶನದಲ್ಲಿ ಸರ್ಕಾರ ರೈತರ ಸಾಲ ಮನ್ನಾ ಮಾಡಬೇಕಿತ್ತು ಈ ಕುರಿತು ಸರಕಾರಕ್ಕೆ ಸಾಕಷ್ಟು ಸಲ ಗಮನಕ್ಕೆ ತಂದರೂ ಪ್ರಯೋಜನೆ ಆಗಿಲ್ಲ. ಹಾಗಾಗಿ ಬೆಂಗಳೂರಲ್ಲಿ ವಿಶ್ವ ರೈತ ದಿನದಂದು ಸಹಸ್ರಾರು ಸಂಖ್ಯೆಯಲ್ಲಿ ರೈತರು ಸೇರಿ ದೊಡ್ಡ ಹೋರಾಟ ಮಾಡುವ ಮೂಲಕ ಸಾಲ ಮನ್ನಾ ಮಾಡುವಂತೆ ಸರಕಾರಗಳ ಮೇಲೆ ಒತ್ತಡ ತರುವ ಕೆಲಸ ಮಾಡಲಾಗುವುದು ಕಾರಣ ಹೆಚ್ಚಿನ ಪ್ರಮಾಣದಲ್ಲಿ ರೈತರು ಬೆಂಗಳೂರು ಸಮಾವೇಶದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

