ವಿಜಯಪುರ: ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಅರಣ್ಯ ಇಲಾಖೆ, ಪ್ರವಾಸೋದ್ಯಮ ಇಲಾಖೆ ಹಾಗೂ ವೃಕ್ಷ ಅಭಿಯಾನ ಪ್ರತಿಷ್ಠಾನ ವಿಜಯಪುರ ಇವರ ಸಂಯುಕ್ತಾಶ್ರಯದಲ್ಲಿ ಡಿ.೨೪ ರಂದು ಬೆಳಿಗ್ಗೆ ೬ ಗಂಟೆಗೆ ವೃಕ್ಷೋತ್ಥಾನ ಪಾರಂಪರಿಕ ಓಟ-೨೦೨೩ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೯ ಗಂಟೆಗೆ ಜರುಗುವ ವೃಕ್ಷಥಾನ್ ಸಮಾರೋಪ ಸಮಾರಂಭವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕಾನೂನು ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾದ ಹೆಚ್.ಕೆ.ಪಾಟೀಲ, ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಸಚಿವರಾದ ಈಶ್ವರ ಖಂಡ್ರೆ ಉಪಸ್ಥಿತರಿರಲಿದ್ದಾರೆ. ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್.ಪಾಟೀಲ (ಯತ್ನಾಳ) ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ವಿಶೇಷ ಆಹ್ವಾನಿತರಾಗಿ ಜಲ ಸಂರಕ್ಷಣೆ ತಜ್ಞರು ಹಾಗೂ ಪರಿಸರವಾದಿಗಳಾದ ಮ್ಯಾಗಸ್ಸೇ ಪ್ರಶಸ್ತಿ ಪುರಸ್ಕೃತರಾದ ರಾಜೇಂದ್ರ ಸಿಂದಗ್, ಸೇರಿದಂತೆ ಜಿಲ್ಲೆಯ ವಿವಿಧ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
