ವಿಜಯಪುರ: ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಶ್ರೀ ಶಾರದಾಂಬಾ ಎಜ್ಯುಕೇಶನ್ ಟ್ರಸ್ಟ್ ತಿಕೋಟಾ ಇವರ ಸಹಯೋಗದಲ್ಲಿ ಡಿ.೨೨ರಂದು ತಿಕೋಟಾದ ಕೋಟ್ಯಾಳ ರಸ್ತೆಯ ಶ್ರೀ ಶಾರದಾಂಬಾ ಎಜ್ಯುಕೇಶನ್ ಟ್ರಸ್ಟ್ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ-೨೦೨೩-೨೪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಅಂದು ಬೆಳಿಗ್ಗೆ ೯ ಗಂಟೆಗೆ ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜವಳಿ ಕಬ್ಬು ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಕರ್ನಾಟಕ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಸಂಸದ ರಮೇಶ ಜಿಗಜಿಣಗಿ, ಶಾಸಕರುಗಳಾದ ಯಶವಂತರಾಯಗೌಡ ಪಾಟೀಲ, ಹಣಮಂತ ನಿರಾಣಿ, ಪ್ರಕಾಶ ರಾಠೋಡ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ಅಪ್ಪಾಜಿ ಸಿ.ಎಸ್.ನಾಡಗೌಡ, ವಿಠ್ಠಲ ಕಟಕದೊಂಡ, ಭೀಮನಗೌಡ(ರಾಜುಗೌಡ) ಬಸನಗೌಡ ಪಾಟೀಲ, ಅಶೋಕ ಮಲ್ಲಪ್ಪ ಮನಗೂಳಿ, ಸೇರಿದಂತೆ ಜಿಲ್ಲೆಯ ವಿವಿಧ ಹಿರಿಯ ಅಧಿಕಾರಿಗಳು, ಜನಪ್ರತಿನಿಧಿಗಳು ಭಾಗವಹಿಸಲಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment
