ನವದೆಹಲಿ: ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷವು ಎನ್‌ಡಿಎ ಮೈತ್ರಿಕೂಟದ ಜತೆಗೆ ಅಧಿಕೃತವಾಗಿ ಸೇರ್ಪಡೆಗೊಂಡ ಬಳಿಕ ಇದೇ ಮೊದಲ ಭಾರಿಗೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಪುತ್ರರ ಜತೆಗೆ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ.
ನವ ದೆಹಲಿಯ ಪ್ರಧಾನಿ ಕಚೇರಿಯಲ್ಲಿ ಮೋದಿಯನ್ನು ಭೇಟಿ ಮಾಡಲಾಗಿದ್ದು, ದೇವೇಗೌಡರ ಜತೆಗೆ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ. ರೇವಣ್ಣ ಹಾಗೂ ಹಾಸನ ಸಂಸದ ಪ್ರಜ್ವಲ್ ರೇವಣ್ಣ, ಶಾಸಕ ಸಿ.ಎನ್.ಬಾಲಕೃಷ್ಣ ಇದ್ದರು.
ಜೆಡಿಎಸ್ ನಾಯಕರ ಭೇಟಿ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ‘ರಾಷ್ಟ್ರದ ಪ್ರಗತಿಗೆ ದೇವೇಗೌಡರ ಅನುಕರಣೀಯ ಕೊಡುಗೆಯನ್ನು ಭಾರತವು ಬಹಳವಾಗಿ ಗೌರವಿಸುತ್ತದೆ. ವೈವಿಧ್ಯಮಯ ನೀತಿ, ವಿಷಯಗಳ ಕುರಿತು ಅವರ ಆಲೋಚನೆ ಹಾಗೂ ಒಳನೋಟ ದೂರದೃಷ್ಠಿಯಿಂದ ಕೂಡಿದೆ’ ಎಂದು ಬರೆದುಕೊಂಡಿದ್ದಾರೆ.
ಪ್ರಧಾನಿ ಭೇಟಿ ಕುರಿತು ಸಂಸತಸ ವ್ಯಕ್ತಪಡಿಸಿರುವ ಕುಮಾರಸ್ವಾಮಿ, ‘ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ. ದೇವೇಗೌಡರ ನಡುವಿನ ಬಾಂಧವ್ಯ, ಅವರಿಬ್ಬರೂ ಪರಸ್ಪರ ಇರಿಸಿಕೊಂಡಿರುವ ಪ್ರೀತಿ, ವಿಶ್ವಾಸವನ್ನು ಕಂಡು ನನ್ನ ಮನಸ್ಸು ಉಕ್ಕಿ ಬಂದಿದೆ. ಸಂಸತ್ ಭವನದಲ್ಲಿರುವ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆದ ಈ ಭೇಟಿಯು ಅತ್ಯಂತ ಆವಿಸ್ಮರಣೀಯ. ಮಾನ್ಯ ಪ್ರಧಾನಮಂತ್ರಿಗಳು ನಮ್ಮ ಬಗ್ಗೆ ತೋರಿದ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಆಭಾರಿ’ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
Subscribe to Updates
Get the latest creative news from FooBar about art, design and business.
Related Posts
Add A Comment

