Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಸಿಎಂ ನೇತೃತ್ವದಲ್ಲಿ ಕೋವಿಡ್ ತಜ್ಞರ ಸಭೆ
(ರಾಜ್ಯ ) ಜಿಲ್ಲೆ

ಸಿಎಂ ನೇತೃತ್ವದಲ್ಲಿ ಕೋವಿಡ್ ತಜ್ಞರ ಸಭೆ

By No Comments1 Min Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಕೊರೋನಾ ಸಕ್ರಿಯ ಪ್ರಕರಣಗಳು 105ಕ್ಕೆ ಏರಿಕೆ | ಆಕ್ಸಿಜನ್‌-ವೆಂಟಿಲೇಟರ್‌ಗೆ ಕೊರತೆಯಾಗದಂತೆ ಕ್ರಮ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್‌19 ಪ್ರಕರಣಗಳು ಮತ್ತೆ ಹೆಚ್ಚಳವಾಗುತ್ತಿರುವ ಹಾಗೂ ಬೆಂಗಳೂರಿನಲ್ಲಿ ಕೋವಿಡ್‌ನಿಂದಾಗಿ ಕಳೆದ ಮೂರು ದಿನಗಳಲ್ಲಿ ಮೂವರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯದ ಸ್ಥಿತಿಗತಿಯ ಕುರಿತು ಚರ್ಚಿಸಲು ಹಾಗೂ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಚರ್ಚಿಸಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಚರ್ಚೆ ನಡೆಸಲಾಯಿತು.
ರಾಜ್ಯದಲ್ಲಿರುವ ಒಟ್ಟು 92 ಸಕ್ರಿಯ ಪ್ರಕರಣಗಳಲ್ಲಿ 80 ಬೆಂಗಳೂರು ನಗರದಲ್ಲಿ ಇದೆ. ಉಳಿದಂತೆ ಮೈಸೂರಿನಲ್ಲಿ 5, ಬಳ್ಳಾರಿಯಲ್ಲಿ 3, ರಾಮನಗರ ಹಾಗೂ ಮಂಡ್ಯದಲ್ಲಿ ತಲಾ 1 ಪ್ರಕರಣ ವರದಿಯಾಗಿದೆ. ಇವರಲ್ಲಿ 72 ಜನ ಮನೆಯಲ್ಲಿಯೇ ಪ್ರತ್ಯೇಕವಾಗಿದ್ದಾರೆ. 20 ಜನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಏಳು ಜನರು ಐಸಿಯುನಲ್ಲಿದ್ದು, ಇವರೆಲ್ಲರೂ ಇತರ ಸಮಸ್ಯೆಗಳಿಂದಲೂ ಬಳಲುತ್ತಿದ್ದಾರೆ. ಅದಾಗ್ಯೂ ಜನರು ಆತಂಕ ಪಡುವ ಅಗತ್ಯವಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮಗಳನ್ನು ಅಗತ್ಯವಾಗಿ ಕೈಗೊಳ್ಳಬೇಕಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ತಾಂತ್ರಿಕ ಸಲಹಾ ಸಮಿತಿ ನೀಡಿರುವ ಸಲಹೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಆಕ್ಸಿಜನ್‌, ವೆಂಟಿಲೇಟರ್‌, ಬೆಡ್‌ಗಳು ಯಾವುದಕ್ಕೂ ತೊಂದರೆ ಆಗಬಾರದು. ಆಕ್ಸಿಜನ್‌ ಲಭ್ಯತೆ ಖಾತ್ರಿಗೊಳಿಸಬೇಕು. ಇದಕ್ಕೆ ಆರೋಗ್ಯ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸನ್ನದ್ಧವಾಗಿ ಯಾವುದೂ ಕೊರತೆಯಾಗದಂತೆ ನೋಡಿಕೊಳ್ಳಬೇಕು. ತಾಂತ್ರಿಕ ಸಲಹಾ ಸಮಿತಿಯ ಸಲಹೆಗಳನ್ನು ಪಾಲಿಸಬೇಕು. ಎಲ್ಲರೂ ಜವಾಬ್ದಾರಿ ಅರಿತು ಕೆಲಸ ಮಾಡಬೇಕು ಎಂದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026

ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್

ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್

ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ

Add A Comment
Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Typora
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಉದಯರಶ್ಮಿ ಇಂದಿನ ದಿನಪತ್ರಿಕೆ ಜುಲೈ 23, 2026
    In ದಿನಪತ್ರಿಕೆ
  • ಜು.೨೪ ರಂದು ವಿವಿಧ ಗ್ರಾಮಗಳಲ್ಲಿ ಪಿಂಚಣಿ ಅದಾಲತ್
    In (ರಾಜ್ಯ ) ಜಿಲ್ಲೆ
  • ಜಗಳ ಹಚ್ಚುವುದು ಬಸನಗೌಡರ ಚಟ :ಹಮೀದ್ ಮುಶ್ರೀಫ್
    In (ರಾಜ್ಯ ) ಜಿಲ್ಲೆ
  • ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಗೆ ಅರ್ಜಿ ಆಹ್ವಾನ
    In (ರಾಜ್ಯ ) ಜಿಲ್ಲೆ
  • ೭ ದಿನದೊಳಗೆ ಹೇಳಿಕೆ, ದಾಖಲೆ ಸಲ್ಲಿಸಿ
    In (ರಾಜ್ಯ ) ಜಿಲ್ಲೆ
  • ಶ್ರೀ ದತ್ತ ಇಂಡಿಯಾ ಕಾರ್ಖಾನೆ ಕಬ್ಬು ನುರಿಸುವ ಸಾಮರ್ಥ್ಯ 12,000 ಟಿಸಿಡಿಗೆ ವಿಸ್ತರಣೆ
    In (ರಾಜ್ಯ ) ಜಿಲ್ಲೆ
  • ವಿಜಯಪುರ ಜಿಲ್ಲಾ ಸ್ಕೌಟ್ಸ್ & ಗೈಡ್ಸ್ ಸಂಸ್ಥೆಗೆ ರಾಜ್ಯ ಪದಾಧಿಕಾರಿಗಳ ಭೇಟಿ
    In (ರಾಜ್ಯ ) ಜಿಲ್ಲೆ
  • ಜು..೨೬ ರಂದು ಕಾರ್ಗಿಲ್ ವಿಜಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ
    In (ರಾಜ್ಯ ) ಜಿಲ್ಲೆ
  • ಟಿಎಪಿಸಿಎಂಎಸ್ ಚುನಾವಣೆಯಲ್ಲಿ ಶಾಸಕ ಅನಿಲ್ ಅಧಿಕಾರ ದುರ್ಬಳಕೆ
    In (ರಾಜ್ಯ ) ಜಿಲ್ಲೆ
  • ಮೂಲಸೌಕರ್ಯ ಒದಗಿಸಲು ಆಗ್ರಹಿಸಿ ಕರವೇ ಪ್ರತಿಭಟನೆ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.