Close Menu
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ

Subscribe to Updates

Get the latest creative news from FooBar about art, design and business.

What's Hot

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

Facebook X (Twitter) Instagram
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
Facebook X (Twitter) Instagram YouTube WhatsApp
udayarashminews.comudayarashminews.com
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
udayarashminews.comudayarashminews.com
Home»(ರಾಜ್ಯ ) ಜಿಲ್ಲೆ»ಬಿಜೆಪಿಯಿಂದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ :ರಾಜು ಆಲಗೂರ
(ರಾಜ್ಯ ) ಜಿಲ್ಲೆ

ಬಿಜೆಪಿಯಿಂದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ :ರಾಜು ಆಲಗೂರ

By Updated:No Comments2 Mins Read
Facebook Twitter Pinterest LinkedIn Telegram WhatsApp
Share
Facebook Twitter LinkedIn Email Telegram WhatsApp

ಉಭಯ ಸದನಗಳ ೧೪೬ ಸಂಸದರ ಅಮಾನತು ಖಂಡಿಸಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ವಿಜಯಪುರ: ಲೋಕಸಭೆ ಹಾಗೂ ರಾಜ್ಯಸಭೆಯ ಉಭಯ ಸದನಗಳ ೧೪೬ ಸಂಸದರನ್ನು ಅಮಾನತ್ತುಗೊಳಿಸಿದ್ದನ್ನು ಖಂಡಿಸಿ ಶುಕ್ರವಾರ ವಿಜಯಪುರ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಡಾ|| ಬಾಬಾಸಾಹೇಬ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾಧ್ಯಕ್ಷ ರಾಜು ಆಲಗೂರ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡು ಪ್ರಜಾಪ್ರಭುತ್ವ ವಿರೋಧಿ, ಜನವಿರೋಧಿ ಕೇಂದ್ರ ಬಿಜೆಪಿ ಸರಕಾರದ ಧೋರಣೆಯನ್ನು ಬಲವಾಗಿ ಖಂಡಿಸಲಾಯಿತು.
ಈ ಸಂದರ್ಭ ಪ್ರತಿಭಟನೆಯನ್ನುದ್ದೇಶಿಸಿ ಜಿಲ್ಲಾಧ್ಯಕ್ಷ ರಾಜು ಆಲಗೂರ ಮಾತನಾಡಿ, ಕೇಂದ್ರದ ಬಿಜೆಪಿ ಸರಕಾರ ಸಂವಿಧಾನ ವಿರೋಧಿಯಾಗಿದ್ದು, ಇವರಿಗೆ ಸಂವಿಧಾನದ ಮೇಲೆ ವಿಶ್ವಾಸವಿಲ್ಲ. ಹಾಗೂ ರಾಷ್ಟ್ರದ ಪ್ರಜಾತಂತ್ರ ವ್ಯವಸ್ಥೆಗೆ ಧಕ್ಕೆ ಮಾಡುತ್ತಿದ್ದು, ಪ್ರಜಾಪ್ರಭುತ್ವದ ಕಗ್ಗೊಲೆ ಮಾಡುತ್ತಿರುವುದನ್ನು ಕಾಂಗ್ರೆಸ್ ಪಕ್ಷ ಬಲವಾಗಿ ಖಂಡಿಸುತ್ತದೆ. ರಾಜಕೀಯ ದ್ವೇಷ ಸಾಧಿಸಲು ಹೊರಟಿರುವ ಈ ಸರಕಾರ ವಿರೋಧ ಪಕ್ಷಗಳ ಮೇಲೆ ಗದಾಪ್ರಹಾರ ಮಾಡುತ್ತಿದೆ. ಲೋಕಸಭೆ ಹಾಗೂ ರಾಜ್ಯಸಭೆಯ ಸಭಾಪತಿಗಳನ್ನು ತಮ್ಮ ಕಪಿಮುಷ್ಠಿಯಲ್ಲಿಟ್ಟುಕೊಂಡು ವಿರೋಧ ಪಕ್ಷಗಳನ್ನು ನಿರ್ನಾಮ ಮಾಡಲು ಹೊರಟಿದ್ದಾರೆ. ಇವರ ಜನವಿರೋಧಿ ನೀತಿಗಳನ್ನು ಪ್ರಶ್ನೆ ಮಾಡಿದಾಗ ಹಿಂಬಾಗಿಲಿನಿಂದ ಕೇಂದ್ರದ ಬಿಜೆಪಿ ಸರಕಾರ ವಿರೋಧ ಪಕ್ಷದ ಉಭಯ ಸದನಗಳ ಸಂಸದರನ್ನು ಅಮಾನತ್ತುಗೊಳಿಸುವುದು, ಯಾವುದೇ ಒಂದು ಸಣ್ಣ ವಿಷಯಕ್ಕೆ ಅನರ್ಹಗೊಳಿಸುವ ಕೃತ್ಯಗಳಿಗೆ ಕೈಹಾಕಿರುವುದು ಈ ದೇಶದ ದುರಂತಗಳಲ್ಲಿ ಒಂದು. ದೇಶದ ಜನ ಇದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಮುಂದಿನ ೨೦೨೪ರ ಲೋಕಸಭಾ ಚುನಾವಣೆಯಲ್ಲಿ ಇವರಿಗೆ ತಕ್ಕಪಾಠ ಕಲಿಸಲಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಕೆ.ಎಫ್. ಅಂಕಲಗಿ, ಆಜಾದ ಪಟೇಲ, ರಮೇಶ ಗುಬ್ಬೇವಾಡ, ಮಹ್ಮದರಫೀಕ ಟಪಾಲ, ಆರತಿ ಶಹಾಪೂರ, ಶಬ್ಬೀರ ಜಾಗೀರದಾರ, ಸಾಹೇಬಗೌಡ ಬಿರಾದಾರ ಮುಂತಾದವರು ಮಾತನಾಡಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರಾದ ಚಾಂದಸಾಬ ಗಡಗಲಾವ, ಡಾ.ಗಂಗಾಧರ ಸಂಬಣ್ಣಿ, ಚಂದ್ರಕಾಂತ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಾಹೇಬಗೌಡ ಬಿರಾದಾರ, ಕೆಪಿಸಿಸಿ ವಕ್ತಾರ ಎಸ್.ಎಂ. ಪಾಟೀಲ ಗಣಿಹಾರ, ಜಮೀರಅಹ್ಮದ ಬಕ್ಷಿ, ಮುಖಂಡ ಡಿ.ಎಲ್. ಚವ್ಹಾಣ, ಎನ್‌ಎಸ್‌ಯುಐ ಜಿಲ್ಲಾ ಅಧ್ಯಕ್ಷ ಅಮಿತ ಚವ್ಹಾಣ, ಮಹಾನಗರಪಾಲಿಕೆ ಸದಸ್ಯ ದಿನೇಶ ಹಳ್ಳಿ, ಅಂಗ ಘಟಕಗಳ ಅಧ್ಯಕ್ಷರಾದ ಕೃಷ್ಣಾ ಕಾಮಟೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೊನಮಲ್ಲ ಸಾರವಾಡ, ಚನಬಸಪ್ಪ ನಂದರಗಿ, ಹಾಜಿಲಾಲ ದಳವಾಯಿ, ಸೈಯದ ಅಫ್ತಾಬ ಖಾದ್ರಿ, ಭಾರತಿ ಹೊಸಮನಿ, ಭಾರತಿ ನಾವಿ, ಮಂಜುಳಾ ಗಾಯಕವಾಡ, ಪಯಾಜ ಕಲಾದಗಿ, ಅಫ್ಜಲ್ ಜಾನವೆಕರ, ಶಂಕರಸಿಂಗ ಹಜೇರಿ, ಕನ್ನಾನ ಮುಶ್ರೀಫ್, ಆಸ್ಮಾ ಕಾಲೆಬಾಗ, ಸಂತೋಷ ಬಾಲಗಾಂವಿ, ಮೊಹಮ್ಮದ ಮುಲ್ಲಾ, ಪರಶುರಾಮ ಹೊಸಮನಿ, ಗಿರೀಶ ಇಟ್ಟಂಗಿ, ರಜಾಕಸಾಬ ಕಾಖಂಡಕಿ, ದಸ್ತಗೀರ ಸಾಲೋಟಗಿ, ಪೀರಾ ಜಮಖಂಡಿ, ಮಂಜುನಾಥ ನಿಡೋಣಿ, ಜಹೀರಾ ಚೌಧರಿ, ಎ.ಎನ್. ಮನಗೂಳಿ ಮುಂತಾದವರು ಉಪಸ್ಥಿತರಿದ್ದರು.

BIJAPUR NEWS public public news udaya rashmi Udayarashmi today newspaper udayarashminews.com
Share. Facebook Twitter Pinterest Email Telegram WhatsApp
  • Website

Related Posts

ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ

ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ

ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ

ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್

Add A Comment

Leave A Reply Cancel Reply

Categories
  • (ರಾಜ್ಯ ) ಜಿಲ್ಲೆ
  • Helldivers
  • Uncategorized
  • Wemod
  • ಆರೋಗ್ಯ
  • ಇತರೆ
  • ಕಾವ್ಯರಶ್ಮಿ
  • ಚಿಂತನ
  • ದಿನಪತ್ರಿಕೆ
  • ಪುಸ್ತಕ ಪರಿಚಯ
  • ಪ್ರೇಮಲೋಕ
  • ಭಾವರಶ್ಮಿ
  • ರಾಷ್ಚ್ರ
  • ವಿಜಯಪುರ
  • ವಿದ್ಯಾರ್ಥಿ ನಿಧಿ
  • ವಿಶೇಷ ಲೇಖನ
  • ಸಾಹಿತ್ಯ
  • ಸಿನಿಮಾ
  • ಹೊತ್ತಿಗೆ ಹೊರಣ
Recent Posts
  • ಅಗ್ನಿ ಅವಘಡದಿಂದ ಎರಡು ಅಂಗಡಿಗಳು ಭಸ್ಮ
    In (ರಾಜ್ಯ ) ಜಿಲ್ಲೆ
  • ಇಂಡಿ ಸಬ್ ರಿಜಿಸ್ಟರ್ ಕಚೇರಿಯಲ್ಲಿ ಹೆಚ್ಚಿದ ಭ್ರಷ್ಟಾಚಾರ :ಆರೋಪ
    In (ರಾಜ್ಯ ) ಜಿಲ್ಲೆ
  • ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವು :ಸಂಭ್ರಮಾಚರಣೆ
    In (ರಾಜ್ಯ ) ಜಿಲ್ಲೆ
  • ಉಪಚುನಾವಣೆ : ಎರಡೂ ಕ್ಷೇತ್ರಗಳಲ್ಲಿ ಗೆದ್ದು ಬೀಗಿದ ಕಾಂಗ್ರೆಸ್
    In (ರಾಜ್ಯ ) ಜಿಲ್ಲೆ
  • ಬಬಲೇಶ್ವರ ಕ್ಷೇತ್ರದ ಸರಕಾರಿ ಶಾಲೆಗಳಿಗೆ ಕ್ರೀಡಾ ಸಲಕರಣೆ ಸೌಲಭ್ಯ
    In (ರಾಜ್ಯ ) ಜಿಲ್ಲೆ
  • ಕೊಲ್ಹಾರ: ರೈತ ಜಾಗೃತಿ ಸಮಾವೇಶಕ್ಕೆ ಸಾವಿರಾರು ರೈತರು ಭಾಗಿ
    In (ರಾಜ್ಯ ) ಜಿಲ್ಲೆ
  • ಕಬ್ಬಿನಲ್ಲಿ ಎಕರೆಗೆ 100 ಟನ್ ಇಳುವರಿ ಕುರಿತು ತಾಂತ್ರಿಕ ಕಾರ್ಯಗಾರ
    In (ರಾಜ್ಯ ) ಜಿಲ್ಲೆ
  • ಉದಯರಶ್ಮಿ ಇಂದಿನ ದಿನಪತ್ರಿಕೆ ಮೇ 03, 2026
    In ದಿನಪತ್ರಿಕೆ
  • ರೈತರಿಗೆ ಗುಣಮಟ್ಟದ ವಿದ್ಯುತ್ ವ್ಯವಸ್ಥೆ ನೀಡುವ ಮಹದಾಸೆ
    In (ರಾಜ್ಯ ) ಜಿಲ್ಲೆ
  • ಮಾಹಿತಿ ಹಕ್ಕು ಕಾಯ್ದೆಯನ್ನು ಸಂಪೂರ್ಣ ಅಧ್ಯಯನ ಮಾಡಿ
    In (ರಾಜ್ಯ ) ಜಿಲ್ಲೆ
Editors Picks
Top Reviews
udayarashminews.com
Facebook X (Twitter) Instagram Pinterest Vimeo YouTube
  • ಮುಖಪುಟ
  • (ರಾಜ್ಯ ) ಜಿಲ್ಲೆ
  • ವಿಶೇಷ ಲೇಖನ
  • ಸಾಹಿತ್ಯ
  • ಆರೋಗ್ಯ
  • ಚಿಂತನ
  • ಪ್ರೇಮಲೋಕ
  • ದಿನಪತ್ರಿಕೆ
  • ಸಂಪರ್ಕಿಸಿ
© 2026 udayarashminews.com. Designed by udayarashmi news .

Type above and press Enter to search. Press Esc to cancel.