ಬಸವನಬಾಗೇವಾಡಿ: ವಿದ್ಯಾರ್ಥಿಗಳು ಪಠ್ಯದ ಅಧ್ಯಯನದೊಂದಿಗೆ ಕಾನೂನುಗಳ ಬಗ್ಗೆ ತಿಳಿದುಕೊಂಡು ತಮ್ಮ ಕುಟುಂಬ ಸದಸ್ಯರಿಗೆ ಹಾಗೂ ಇತರರಿಗೆ ಕಾನೂನಿನ ಮಹತ್ವ ತಿಳಿಸಿಕೊಡಬೇಕು ಎಂದು ವಕೀಲ ವಿ.ಬಿ.ಮರ್ತುರ ಹೇಳಿದರು.
ಪಟ್ಟಣದ ಸಮೀಪವಿರುವ ಜೈನಾಪೂರ ಗ್ರಾಮದಲ್ಲಿ ಬುಧವಾರ ಪಟ್ಟಣದ ಬಸವೇಶ್ವರ ಸರ್ಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ಹಮ್ಮಿಕೊಂಡಿದ್ದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಸ್ತೆಯಲ್ಲಿ ಸಂಚರಿಸುವಾಗ ರಸ್ತೆ ನಿಯಮ ಪಾಲಿಸಬೇಕು. ಬೈಕ್ ಸವಾರಿ ಮಾಡುವ ವೇಳೆ ಹೆಲ್ಮೇಟ್ ಕಡ್ಡಾಯವಾಗಿ ಬಳಸುವುದು ಸೇರಿದಂತೆ ವಿವಿಧ ನಿಯಮಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿ ಎಸ್.ವಿ.ಅಗಸರ ಮಾತನಾಡಿದರು.
ಮುಖಂಡ ಶಂಕ್ರೆಪ್ಪ ಉಳ್ಳಾಗಡ್ಡಿ ಅಧ್ಯಕ್ಷತೆ ವಹಿಸಿದ್ದರು.
ಹಣಮಂತ ಗೊಳಸಂಗಿ, ಮಲ್ಲು.ಎಸ್.ಗೊಳಸಂಗಿ, ಶಾಂತಪ್ಪ ಜಾಧವ, ಪರಶುರಾಮ ಹೊಸಮನಿ ಇದ್ದರು.
ರೇಖಾ ಪೂಜಾರಿ, ಸವಿತಾ ಪೂಜಾರಿ ಪ್ರಾರ್ಥನಾಗೀತೆ ಹಾಡಿದರು. ಉಪನ್ಯಾಸಕ ಚೇತನ ಬಾಗೇವಾಡಿ ಸ್ವಾಗತಿಸಿದರು. ಎಚ್.ಡಿ.ಬಿರಾದಾರ ವಂದಿಸಿದರು.
ಕಾರ್ಯಕ್ರಮಕ್ಕೂ ಮುನ್ನ ವಿದ್ಯಾರ್ಥಿಗಳು ಗ್ರಾಮದಲ್ಲಿ ಶ್ರಮದಾನದ ಮೂಲಕ ಸ್ವಚ್ಚತೆಯ ಮಹತ್ವ ಕುರಿತು ಜಾಗೃತಿ ಮೂಡಿಸಿದರು.
ಸಂಜೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
Subscribe to Updates
Get the latest creative news from FooBar about art, design and business.
Related Posts
Add A Comment

